For Quick Alerts
ALLOW NOTIFICATIONS  
For Daily Alerts

ಕಾಮನ್‌ವೆಲ್ತ್‌ ಗೇಮ್ಸ್‌ 2022: ಮಹಿಳೆಯರ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ನಿಖತ್ ಜರೀನ್

Nikhat zareen

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಗೇಮ್ಸ್ 2022ರ 10ನೇ ದಿನದ ಸ್ಪರ್ಧೆಯಲ್ಲಿ ಭಾರತವು ನಾಲ್ಕು ಚಿನ್ನದ ಪದಕಗಳನ್ನ ಮಡಿಲಿಗೆ ಹಾಕಿಕೊಂಡಿದೆ. ಭಾನುವಾರ ಬಾಕ್ಸಿಂಗ್‌ನಲ್ಲಿ ಎರಡು ಪದಕ ಜಯಿಸಿದ್ದ ಭಾರತಕ್ಕೆ ನಿಖತ್ ಜರೀನ್ ಮತ್ತೊಂದು ಪದಕವನ್ನು ಸೇರಿಸಿದ್ದಾರೆ.

ಮಹಿಳೆಯರ 48-50 ಕೆಜಿ ಬಾಕ್ಸಿಂಗ್ ಸ್ಪರ್ಧೆಯಲ್ಲಿ ನಿಖತ್ ಜರೀನ್ ಸ್ವರ್ಣ ಪದಕ ಗೆದ್ದಿದ್ದಾರೆ. ಫೈನಲ್‌ನಲ್ಲಿ ಉತ್ತರ ಐರ್ಲೆಂಡ್‌ನ ಕಾರ್ಲಿ ಮೆಕ್‌ನಾಲ್ ವಿರುದ್ಧ ಭರ್ಜರಿ ಪ್ರದರ್ಶನ ನೀಡುವ ಮೂಲಕ ನಿಖತ್ ಜರೀನ್ ಸ್ವರ್ಣ ಪದಕಕ್ಕೆ ಕೊರಳೊಡ್ಡಿದರು. ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ನಿಖತ್ ಜರೀನ್ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲೂ ತಮ್ಮ ಅಮೋಘ ಪ್ರದರ್ಶನ ಮುಂದುವರಿಸಿದರು.

ಉತ್ತರ ಐರ್ಲೆಂಡ್‌ನ ಕಾರ್ಲಿ ಮೆಕ್‌ನಾಲ್ ಅವರನ್ನು 5-0 ಅಂತರದಿಂದ ಸೋಲಿಸುವ ಮೂಲಕ ನಿಖತ್ ಜರೀನ್ ಭಾರತಕ್ಕೆ 17 ನೇ ಚಿನ್ನವನ್ನು ಗೆದ್ದರು. ಇದಕ್ಕೂ ಮೊದಲು ಬಾಕ್ಸರ್‌ಗಳಾದ ನಿತು ಘಂಘಾಸ್ ಮತ್ತು ಅಮಿತ್ ಪಂಘಲ್‌ ಕ್ರಮವಾಗಿ ಮಹಿಳಾ ಮತ್ತು ಪುರುಷರ ಬಾಕ್ಸಿಂಗ್‌ನಲ್ಲಿ ಸ್ವರ್ಣ ಪದಕ ಜಯಿಸಿದ್ದಾರೆ.

ಮಹಿಳೆಯರ 48 ಕೆಜಿ ವಿಭಾಗದ ಫೈನಲ್‌ನಲ್ಲಿ ನಿತು ಘಂಘಾಸ್ ಅವರು ಇಂಗ್ಲೆಂಡ್‌ನ ಡೆಮಿ-ಜೇಡ್ ರೆಸ್ಟನ್ ಅವರನ್ನು ಅವಿರೋಧವಾಗಿ 5-0 ಅಂಕಗಳಿಂದ ಸೋಲಿಸಿ ಚೊಚ್ಚಲ ಚಿನ್ನದ ಪದಕ ಗೆದ್ದರು. ಇದು ಕಾಮನ್‌ವೆಲ್ತ್‌ ಗೇಮ್ಸ್‌ 2022ರ ಬಾಕ್ಸಿಂಗ್‌ ವಿಭಾಗದಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕವಾಗಿದೆ.

ಇನ್ನು ಮತ್ತೊಂದೆಡೆ ಭಾರತಕ್ಕೆ ಪದಕ ಖಚಿತಪಡಿಸಿದ್ದ ಬಾಕ್ಸರ್ ಅಮಿತ್ ಪಂಘಲ್ ಪುರುಷರ 51 ಕೆಜಿ ಕುಸ್ತಿ ವಿಭಾಗದಲ್ಲಿ ದೇಶಕ್ಕೆ ಸ್ವರ್ಣ ಪದಕ ಜಯಿಸಿಕೊಟ್ಟಿದ್ದಾರೆ. ಅಮಿತ್ ಪಂಗಲ್ ಮೊದಲ ಸುತ್ತನ್ನು 5-0 ಅಂತರದಿಂದ ಗೆಲ್ಲುವ ಮೂಲಕ ಇಂಗ್ಲೆಂಡ್‌ನ ಕಿಯಾರನ್ ಮ್ಯಾಕ್‌ಡೊನಾಲ್ಡ್ ವಿರುದ್ಧ ಗೆಲುವು ಸಾಧಿಸಿದರು.

ಈ ಮೂಲಕ ಭಾನುವಾರ ನಾಲ್ಕು ಚಿನ್ನದ ಪದಕ, ಒಂದು ಬೆಳ್ಳಿ ಮತ್ತು ಎರಡು ಕಂಚು ಪದಕಗಳನ್ನು ಭಾರತ ಗೆದ್ದಿದೆ.

Story first published: Sunday, August 7, 2022, 19:37 [IST]
Other articles published on Aug 7, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+