Commonwealth Games 2022: 5ನೇ ದಿನದ ಅಂತ್ಯಕ್ಕೆ ಭಾರತ ಪದಕ ಪಟ್ಟಿಯಲ್ಲಿ ಎಷ್ಟನೇ ಸ್ಥಾನದಲ್ಲಿದೆ?

ಸದ್ಯ ಇಂಗ್ಲೆಂಡ್‌ನ ಬರ್ಮಿಂಗ್ಹ್ಯಾಮ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ನಿರತವಾಗಿರುವ ಭಾರತೀಯ ಕ್ರೀಡಾಪಟುಗಳು ಕ್ರೀಡಾಕೂಟದ ಐದನೇ ದಿನವೂ ಸಹ ತಮ್ಮ ಪದಕ ಬೇಟೆಯನ್ನು ಮುಂದುವರೆಸಿದ್ದಾರೆ.
ನಾಲ್ಕನೇ ದಿನದಂತ್ಯಕ್ಕೆ 3 ಚಿನ್ನ, 3 ಬೆಳ್ಳಿ ಮತ್ತು 3 ಕಂಚಿನ ಪದಕಗಳನ್ನು ಗೆದ್ದಿದ್ದ ಭಾರತ ಐದನೇ ದಿನದಂದು 2 ಚಿನ್ನದ ಪದಕಗಳು ಹಾಗೂ 2 ಬೆಳ್ಳಿ ಪದಕಗಳನ್ನು ಗೆಲ್ಲುವುದರ ಮೂಲಕ ಚಿನ್ನ ಮತ್ತು ಬೆಳ್ಳಿ ಪದಕಗಳ ಸಂಖ್ಯೆಯನ್ನು ಏರಿಸಿಕೊಂಡಿದೆ. ಐದನೇ ದಿನದಂದು ಲಾನ್ ಬೌಲ್ಸ್ ಕ್ರೀಡೆಯ ಫೈನಲ್ ಪಂದ್ಯದಲ್ಲಿ ಭಾರತೀಯ ವನಿತೆಯರು ದಕ್ಷಿಣ ಆಫ್ರಿಕಾ ವನಿತೆಯರ ತಂಡವನ್ನು ಸೋಲಿಸುವುದರ ಮೂಲಕ ಚಿನ್ನದ ಪದಕವನ್ನು ಪಡೆದು ಲಾನ್ ಬೌಲ್ಸ್ ಕ್ರೀಡೆಯಲ್ಲಿ ಭಾರತಕ್ಕೆ ಚೊಚ್ಚಲ ಪದಕ ತಂದುಕೊಟ್ಟ ಐತಿಹಾಸಿಕ ದಾಖಲೆ ನಿರ್ಮಿಸಿದರು. ಇನ್ನು ಇದೇ ದಿನ ವೇಟ್ ಲಿಫ್ಟರ್ ವಿಕಾಸ್ ಠಾಕೂರ್ ಬೆಳ್ಳಿ, ಭಾರತ ಪುರುಷರ ಟೇಬಲ್ ಟೆನಿಸ್ ತಂಡ ಚಿನ್ನ ಹಾಗೂ ಭಾರತದ ಮಿಶ್ರ ಬ್ಯಾಡ್ಮಿಂಟನ್ ತಂಡ ಬೆಳ್ಳಿ ಪದಕವನ್ನು ಗೆದ್ದಿತು.
ಈ ಮೂಲಕ ಐದನೇ ದಿನದ ಅಂತ್ಯಕ್ಕೆ ಭಾರತ ಗೆದ್ದ ಒಟ್ಟು ಪದಕಗಳ ಸಂಖ್ಯೆ 13ಕ್ಕೆ ಏರಿಕೆ ಕಂಡಿದ್ದು, ಯಾವ ದೇಶಗಳು ಎಷ್ಟು ಪದಕಗಳನ್ನು ಗೆದ್ದು ಪದಕ ಪಟ್ಟಿಯಲ್ಲಿ ಎಷ್ಟನೇ ಸ್ಥಾನದಲ್ಲಿವೆ ಎಂಬುದರ ಕುರಿತಾದ ವಿವರ ಈ ಕೆಳಕಂಡಂತಿದೆ.

ಪದಕ ಪಟ್ಟಿ
ಕಾಮನ್ ವೆಲ್ತ್ ಗೇಮ್ಸ್ ಐದನೇ ದಿನದ ಮುಕ್ತಾಯದ ಹಂತಕ್ಕೆ ಪದಕ ಪಟ್ಟಿಯಲ್ಲಿ ಟಾಪ್ 10 ಸ್ಥಾನ ಪಡೆದುಕೊಂಡಿರುವ ದೇಶಗಳ ಪಟ್ಟಿ ಕೆಳಕಂಡಂತಿದೆ.
1. 42 ಚಿನ್ನದ ಪದಕಗಳು, 32 ಬೆಳ್ಳಿ ಪದಕಗಳು ಹಾಗೂ 32 ಕಂಚಿನ ಪದಕಗಳನ್ನು ಗೆದ್ದು ಒಟ್ಟು 108 ಪದಕಗಳನ್ನು ತನ್ನದಾಗಿಸಿಕೊಂಡಿರುವ ಆಸ್ಟ್ರೇಲಿಯಾ ಪದಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
2. 31 ಚಿನ್ನದ ಪದಕಗಳು, 34 ಬೆಳ್ಳಿ ಪದಕಗಳು ಹಾಗೂ 21 ಕಂಚಿನ ಪದಕಗಳನ್ನು ಗೆಲ್ಲುವುದರ ಮೂಲಕ ಒಟ್ಟು 88 ಪದಕಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿರುವ ಇಂಗ್ಲೆಂಡ್ ಪದಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ.
3. 13 ಚಿನ್ನದ ಪದಕಗಳು, 7 ಬೆಳ್ಳಿ ಪದಕಗಳು ಹಾಗೂ 6 ಕಂಚಿನ ಪದಕಗಳನ್ನು ಗೆದ್ದಿರುವ ನ್ಯೂಜಿಲೆಂಡ್ ಒಟ್ಟು 26 ಪದಕಗಳನ್ನು ತನ್ನದಾಗಿಸಿಕೊಳ್ಳುವುದರ ಮೂಲಕ ಪದಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
4. 11 ಚಿನ್ನದ ಪದಕಗಳು, 18 ಬೆಳ್ಳಿ ಪದಕಗಳು ಹಾಗೂ 19 ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡಿರುವ ಕೆನಡಾ ಒಟ್ಟು 46 ಪದಕಗಳನ್ನು ಗೆಲ್ಲುವುದರ ಮೂಲಕ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
5. 6 ಚಿನ್ನದ ಪದಕಗಳು, 5 ಬೆಳ್ಳಿ ಪದಕಗಳು ಹಾಗೂ 5 ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡಿರುವ ದಕ್ಷಿಣ ಆಫ್ರಿಕಾ ಒಟ್ಟು 16 ಪದಕಗಳನ್ನು ಗೆಲ್ಲುವುದರ ಮೂಲಕ ಪದಕ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
6. 5 ಚಿನ್ನದ ಪದಕಗಳು, 5 ಬೆಳ್ಳಿ ಪದಕಗಳು ಹಾಗೂ 3 ಕಂಚಿನ ಪದಕಗಳನ್ನು ಗೆದ್ದಿರುವ ಭಾರತ ಒಟ್ಟು 13 ಪದಕಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡು ಪದಕ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
7. 3 ಚಿನ್ನದ ಪದಕಗಳು, 8 ಬೆಳ್ಳಿ ಪದಕಗಳು ಹಾಗೂ 15 ಕಂಚಿನ ಪದಕಗಳನ್ನು ಗೆದ್ದು 26 ಪದಕಗಳನ್ನು ಪಡೆದಿರುವ ಸ್ಕಾಟ್ಲೆಂಡ್ ಪದಕ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
8. 3 ಚಿನ್ನದ ಪದಕಗಳು, 2 ಬೆಳ್ಳಿ ಪದಕಗಳು ಹಾಗೂ 8 ಕಂಚಿನ ಪದಕಗಳು ಸೇರಿದಂತೆ ಒಟ್ಟು 13 ಪದಕಗಳನ್ನು ತನ್ನ ಖಾತೆಯಲ್ಲಿ ಹೊಂದಿರುವ ವೇಲ್ಸ್ ಪದಕ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ.
9. 3 ಚಿನ್ನದ ಪದಕಗಳು, 2 ಬೆಳ್ಳಿ ಪದಕಗಳು ಹಾಗೂ 3 ಕಂಚಿನ ಪದಕಗಳನ್ನು ಗೆದ್ದು ಒಟ್ಟು 8 ಪದಕಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿರುವ ಮಲೇಷ್ಯಾ ಪದಕ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ.
10. 3 ಚಿನ್ನದ ಪದಕಗಳು, 1 ಬೆಳ್ಳಿ ಪದಕ ಹಾಗೂ 4 ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡಿರುವ ನೈಜೀರಿಯಾ ಒಟ್ಟಾರೆ 8 ಪದಕಗಳನ್ನು ಗೆದ್ದು ಪದಕ ಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿದೆ.

ಭಾರತದ ಪರ ಚಿನ್ನ ಗೆದ್ದವರು
ಕ್ರೀಡಾಕೂಟದ ಐದನೇ ದಿನದ ಮುಕ್ತಾಯದವರೆಗೂ ಭಾರತದ ಪರ ಚಿನ್ನ ಗೆದ್ದ ಎಲ್ಲಾ ಕ್ರೀಡಾಪಟುಗಳ ಪಟ್ಟಿ
• ಮೀರಾಬಾಯಿ ಚಾನು - ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಚಿನ್ನದ ಪದಕ
• ಜೆರೆಮಿ ಲಾಲ್ರಿನುಂಗ - ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಚಿನ್ನದ ಪದಕ
• ಅಚಿಂತಾ ಶೆಯುಲಿ - ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಚಿನ್ನದ ಪದಕ
• ಭಾರತೀಯ ವನಿತೆಯರ ತಂಡ - ಲಾನ್ ಬೌಲ್ಸ್ ವಿಭಾಗದಲ್ಲಿ ಚಿನ್ನದ ಪದಕ
• ಭಾರತ ಪುರುಷರ ತಂಡ - ಟೇಬಲ್ ಟೆನಿಸ್ ವಿಭಾಗದಲ್ಲಿ ಚಿನ್ನದ ಪದಕ
ಇತರೆ ಪದಕ ಗೆದ್ದವರು

ಐದನೇ ದಿನದ ಅಂತ್ಯದ ವೇಳೆಗೆ ಕ್ರೀಡಾಕೂಟದಲ್ಲಿ ಬೆಳ್ಳಿ ಹಾಗೂ ಕಂಚಿನ ಪದಕವನ್ನು ಗೆದ್ದ ಭಾರತೀಯ ಕ್ರೀಡಾಪಟುಗಳ ಪಟ್ಟಿ
• ಸಂಕೇತ್ ಮಹದೇವ್ ಸರ್ಗರ್ - ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ
• ಗುರುರಾಜ್ ಪೂಜಾರಿ - ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಕಂಚಿನ ಪದಕ
• ವಿಜಯ್ ಕುಮಾರ್ ಯಾದವ್ - ಪುರುಷರ ವಿಭಾಗದಲ್ಲಿ ಕಂಚಿನ ಪದಕ
• ಹರ್ ಜಿಂದರ್ ಕೌರ್ - ಮಹಿಳಾ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಕಂಚಿನ ಪದಕ
• ಬಿಂದ್ಯಾ ರಾಣಿ ದೇವಿ - ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ
• ಸುಶೀಲಾದೇವಿ - ಜುಡೋ ವಿಭಾಗದಲ್ಲಿ ಬೆಳ್ಳಿ ಪದಕ
• ವಿಕಾಸ್ ಠಾಕೂರ್ - ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ
• ಭಾರತ ಮಿಶ್ರ ತಂಡ - ಬ್ಯಾಡ್ಮಿಂಟನ್ ವಿಭಾಗದಲ್ಲಿ ಬೆಳ್ಳಿ ಪದಕ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications