ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

ಕಾಮನ್‌ವೆಲ್ತ್ ಗೇಮ್ಸ್ 2022: ಭಾರತದ ಧ್ವಜ ಹಿಡಿದು ಮುನ್ನಡೆಸಲಿದ್ದಾರೆ ಪಿವಿ ಸಿಂಧು

Commonwealth Games: IOA announced PV Sindhu as Indias flagbearer for Opening Ceremony

ಕಾಮನ್‌ವೆಲ್ತ್ ಗೇಮ್ಸ್‌ನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಜುಲೈ 28 ಗುರುವಾರದಂದು ಬರ್ಮಿಂಗ್‌ಹ್ಯಾಮ್‌ನಲ್ಲಿರುವ ಅಲೆಕ್ಸಾಂಡರ್ ಕ್ರೀಡಾಂಗಣದಲ್ಲಿ ಈ ಪ್ರತಿಷ್ಠಿತ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ನಡೆಯಲಿದೆ. ಈ ಬಾರಿಯ ಈ ಕಾಮನ್‌ವೆಲ್ತ್ ಗೇಮ್ಸ್‌ನ ಉದ್ಘಾಟನಾ ಸಮಾರಂಭದಲ್ಲಿ ಎರಡು ಬಾರಿಯ ಒಲಿಂಪಿಕ್ಸ್ ಪದಕ ವಿಜೇತೆ ಪಿವಿ ಸಿಂಧು ಭಾರತೀಯ ಕ್ರೀಡಾಪಟುಗಳ ತಂಡವನ್ನು ಧ್ವಜ ಹಿಡಿದು ಮುನ್ನಡೆಸುವ ಗೌರವಕ್ಕೆ ಪಾತ್ರವಾಗಿದ್ದಾರೆ.

ಕುತೂಹಲಕಾರಿ ಸಂಗತಿಯೆಂದರೆ 2018ರಲ್ಲಿ ಗೋಲ್ಡ್‌ ಕೋಸ್ಟ್‌ನಲ್ಲಿ ನಡೆದಿದ್ದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕೂಡ ಪಿವಿ ಸಿಂಧು ಭಾರತದ ಪರವಾಗಿ ಧ್ವಜಧಾರಿಯಾಗಿದ್ದರು. ಆ ಕ್ರೀಡಾ ಕೂಟದಲ್ಲಿ ಪಿವಿ ಸಿಂಧು ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದುಕೊಂಡಿದ್ದರು. ಇದೀಗ ಈ ಬಾರಿ ಚಿನ್ನದ ಪದಕದ ಮೇಲೆ ಸಿಂಧು ಗುರಿಯಿಟ್ಟಿದ್ದಾರೆ.

ಭಾರತ vs ವಿಂಡೀಸ್ 3rd ODI: ಈ ಮೈಲಿಗಲ್ಲುಗಳ ಮೇಲೆ ಧವನ್ ಮತ್ತು ಸೂರ್ಯಕುಮಾರ್ ಯಾದವ್ ಕಣ್ಣುಭಾರತ vs ವಿಂಡೀಸ್ 3rd ODI: ಈ ಮೈಲಿಗಲ್ಲುಗಳ ಮೇಲೆ ಧವನ್ ಮತ್ತು ಸೂರ್ಯಕುಮಾರ್ ಯಾದವ್ ಕಣ್ಣು

ಅಧಿಕೃತವಾಗಿ ಘೋಷಿಸಿದ IOA

ಅಧಿಕೃತವಾಗಿ ಘೋಷಿಸಿದ IOA

ಇಂಡಿಯನ್ ಒಲಿಂಪಿಕ್ಸ್ ಅಸೊಸಿಯೇಶನ್ ಇಂದು ಈ ವಿಚಾರವಾಗಿ ಅಧಿಕೃತವಾಗಿ ಪ್ರಕಟಣೆ ಹೊರಡಿಸಿದೆ. " ಭಾರತೀಯ ಒಲಿಂಪಿಕ್ಸ್ ಅಸೊಸಿಯೇಶನ್ ಎರಡು ಬಾರಿಯ ಒಲಿಂಪಿಕ್ಸ್ ಪದಕ ವಿಜೇತೆ ಶಟ್ಲರ್ ಪಿವಿ ಸಿಂಧು ಅವರು ಕಾಮನ್‌ವೆಲ್ತ್ ಗೇಮ್ಸ್‌ನ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಕ್ರೀಡಾಪಟುಗಳ ತಂಡದ ಧ್ವಜಧಾರಿಯಾಗಲಿದ್ದಾರೆ ಎಂಬುದನ್ನು ಘೋಷಿಸಲು ಹರ್ಷಿಸುತ್ತದೆ" ಎಂದು ಪ್ರಕಟಣೆಯಲ್ಲಿ ಹೇಳಿದೆ.

ಮತ್ತೆ ಭರವಸೆ ಮೂಡಿಸಿರುವ ಸಿಂಧು

ಮತ್ತೆ ಭರವಸೆ ಮೂಡಿಸಿರುವ ಸಿಂಧು

ಪಿವಿ ಸಿಂಧು ಕಳೆದ ವರ್ಷ ನಡೆದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ. ನಂತರ ಸಿಂಗಾಪುರ ಓಪನ್‌ನಲ್ಲಿಯೂ ಚಾಂಪಿಯನ್ ಪಟ್ಟಕ್ಕೇರಿದ್ದಾರೆ. ಇನ್ನು ಈ ವರ್ಷಾರಂಭದಲ್ಲಿ ಸೈಯದ್ ಮೋದಿ ಇಂಟರ್ನ್ಯಾಷನಲ್ ಮತ್ತು ಸ್ವಿಸ್ ಓಪನ್ ಅನ್ನು ಕೂಡ ಗೆದ್ದುಕೊಂಡಿದ್ದಾರೆ. ಇನ್ನು ಪಿವಿ ಸಿಂಧು ಈ ಬಾರಿಯ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ತನ್ನ ಅಭಿಯಾನವನ್ನು ಆಗಸ್ಟ್ 3 ರಂದು ಪ್ರಾರಂಭಿಸಲಿದ್ದಾರೆ. ಗುರುವಾರ (ಜುಲೈ 28) ಬರ್ಮಿಂಗ್ಹ್ಯಾಮ್‌ನ ಅಲೆಕ್ಸಾಂಡರ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ.

ಕಾಮನ್‌ವೆಲ್ತ್ ಕ್ರೀಡಾಕೂಟದಿಂದ ಹೊರಗುಳಿದ ನೀರಜ್

ಕಾಮನ್‌ವೆಲ್ತ್ ಕ್ರೀಡಾಕೂಟದಿಂದ ಹೊರಗುಳಿದ ನೀರಜ್

ಇನ್ನು ಕಳೆದ ವರ್ಷ ನಡೆದ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದು ಇತ್ತೀಚೆಗಷ್ಟೇ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದುಕೊಂಡ ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರ ಗಾಯದ ಕಾರಣದಿಂದಾಗಿ ಈ ಬಾರಿಯ ಕಾಮನ್‌ವೆಲ್ತ್ ಗೇಮ್ಸ್‌ನಿಂದ ಅನಿವಾರ್ಯವಾಗಿ ಹೊರಗುಳಿಯಬೇಕಾಗಿದೆ. ಹೀಗಾಗಿ ಅವರು ಭಾರತದ ಧ್ವಜವನ್ನು ಹಿಡಿದು ಮುನ್ನಡೆಸುವ ಅವಕಾಶವನ್ನು ಕೂಡ ಕಳೆದುಕೊಂಡಿದ್ದಾರೆ. ಈ ಬಗ್ಗೆ ಸ್ವತಃ ನೀರಜ್ ಚೋಪ್ರ ಕುಡ ಪ್ರತಿಕ್ರಿಯಿಸಿದ್ದು ತೀವ್ರ ನಿರಾಸೆಯನ್ನು ವ್ಯಕ್ತಪಡಿಸಿದ್ದಾರೆ.

ಬಲಿಷ್ಠ ಪಡೆಯೊಂದಿಗೆ ಕಣಕ್ಕಿಳಿದ ಭಾರತ

ಬಲಿಷ್ಠ ಪಡೆಯೊಂದಿಗೆ ಕಣಕ್ಕಿಳಿದ ಭಾರತ

ಇನ್ನು ಈ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬಲಿಷ್ಠ ಆಟಗಾರರ ಪಡೆಯೊಂದಿಗೆ ಭಾರತ ಕಣಕ್ಕಿಳಿಯುತ್ತಿದೆ. 322 ಸದಸ್ಯರ ಬೃಹತ್ ಪಡೆಯನ್ನು ಐಒಸಿ ಹೆಸರಿಸಿದ್ದು ಇದರಲ್ಲಿ 21 ಅಥ್ಲೀಟ್‌ಗಳು ಹಾಗೂ 107 ಅಧಿಕಾರಿಗಳು ಹಾಗೂ ಸಹಾಯಕ ಸಿಬ್ಬಂದಿಗಳು ಸೇರಿದ್ದಾರೆ. ಇನ್ನು ಭಾರತೀಯ ಕ್ರೀಡಾಪಟುಗಳ ತಂಡ ಈ ಬಾರಿ ಕಳೆದ ಕಾಮನ್‌ವೆಲ್ತ್ ಗೇಮ್ಸ್‌ಗಿಂತ ಉತ್ತಮ ಸ್ಆಧನೆ ಮಾಡುವ ನಿರೀಕ್ಷೆ ಮೂಡಿಸಿದೆ. 2018ರಲ್ಲಿ ನಡೆದಿದ್ದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತೀಯ ಆಟಗಾರರ ತಂಡ ಒಟ್ಟು ಪದಕಗಳನ್ನು ಗೆದ್ದುಕೊಂಡಿತ್ತು. ಇದರಲ್ಲಿ 2 ಚಿನ್ನ 9 ಬೆಳ್ಳಿ ಹಾಗೂ 20 ಕಂಚಿನ ಪದಕಗಳು ಸೇರಿತ್ತು. ಇನ್ನು ಕಾಮನ್‌ವೆಲ್ತ್ ಗೇಮ್ಸ್‌ನ ಇತಿಹಾಸದಲ್ಲಿ ಭಾರತ 2010ರಲ್ಲಿ ಅತಿ ಹೆಚ್ಚು ಪದಕಗಳನ್ನು ಗೆದ್ದ ಸಾಧನೆ ಮಾಡಿತ್ತು. 39 ಚಿನ್ನ, 26 ಬೆಳ್ಳಿ ಹಾಗೂ 36 ಕಂಚಿನ ಪದಕಗಳನ್ನು ಗೆದ್ದು ಪದಕ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿತ್ತು

Story first published: Thursday, July 28, 2022, 10:47 [IST]
Other articles published on Jul 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X