ಮೇ 12ರಿಂದ ನಡೆಯುವ ಬಿಜೆಪಿ ಯುವ ಮೋರ್ಚಾ ಸಭೆಯಲ್ಲಿ ರಾಹುಲ್ ದ್ರಾವಿಡ್ ಭಾಗಿ!

ಶಿಮ್ಲಾ, ಮೇ 10: ಇದೇ ಮೇ 12ರಿಂದ ಮೇ 15 ರವರೆಗೆ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆಯಲಿರುವ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಅಧಿವೇಶನದಲ್ಲಿ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭಾಗವಹಿಸಲಿದ್ದಾರೆ ಎಂದು ಧರ್ಮಶಾಲಾ ಬಿಜೆಪಿ ಶಾಸಕ ವಿಶಾಲ್ ನೆಹ್ರಿಯಾ ಸೋಮವಾರ ತಿಳಿಸಿದ್ದಾರೆ.

ಎಎನ್‌ಐ ಜೊತೆ ಮಾತನಾಡಿದ ಬಿಜೆಪಿ ಶಾಸಕ ವಿಶಾಲ್ ನೆಹ್ರಿಯಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಪಕ್ಷದ ಇತರ ಪದಾಧಿಕಾರಿಗಳು ಮತ್ತು ಕೇಂದ್ರ ಸಚಿವರು ಈ ಕಾರ್ಯಕ್ರಮಕ್ಕೆ ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು.

ಮೂರು ದಿನಗಳ ಅಧಿವೇಶನದಲ್ಲಿ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಕೂಡ ಭಾಗವಹಿಸಲಿದ್ದು, ದೇಶದಾದ್ಯಂತ 139 ಪ್ರತಿನಿಧಿಗಳು ಬಿಜೆಪಿ ಯುವ ಮೋರ್ಚಾ ಅಧಿವೇಶನದಲ್ಲಿ ತಮ್ಮ ಉಪಸ್ಥಿತಿಯನ್ನು ನೋಂದಾಯಿಸಲಿದ್ದಾರೆ.

ಮೇ 12ರಿಂದ 15ರವರೆಗೆ ಧರ್ಮಶಾಲಾದಲ್ಲಿ ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯಲಿದೆ. ಬಿಜೆಪಿಯ ರಾಷ್ಟ್ರೀಯ ನಾಯಕರು ಹಾಗೂ ಹಿಮಾಚಲ ಪ್ರದೇಶದ ನಾಯಕರು ಭಾಗಿಯಾಗಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಸೇರಿದಂತೆ ರಾಷ್ಟ್ರೀಯ ಸಂಘಟಕರು, ಕೇಂದ್ರ ಸಚಿವರು ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ ಎಂದು ಶಾಸಕ ವಿಶಾಲ್ ನೆಹ್ರಿಯಾ ಹೇಳಿದರು.

ಕ್ರಿಕೆಟ್ ಕೋಚ್ ರಾಹುಲ್ ದ್ರಾವಿಡ್ ಅವರ ಉಪಸ್ಥಿತಿಯು ಯುವಕರಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಂದೇಶವನ್ನು ನೀಡುತ್ತದೆ ಎಂದು ನೆಹ್ರಿಯಾ ಹೇಳಿದರು. "ಭಾರತೀಯ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಕೂಡ ಬಿಜೆಪಿ ಯುವ ಮೋರ್ಚಾ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ. ಅವರ ಯಶಸ್ಸಿನಿಂದ ನಾವು ರಾಜಕೀಯದಲ್ಲಿ ಮಾತ್ರವಲ್ಲದೆ ಇತರ ಕ್ಷೇತ್ರಗಳಲ್ಲಿಯೂ ಮುಂದುವರಿಯಬಹುದು ಎಂಬ ಸಂದೇಶವನ್ನು ಯುವಕರಲ್ಲಿ ನೀಡಲಾಗುವುದು," ಎಂದು ವಿಶಾಲ್ ನೆಹ್ರಿಯಾ ಹೇಳಿದರು.

ಇದೇ ವರ್ಷ ನಡೆಯಲಿರುವ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ಯುವ ಮೋರ್ಚಾ ಅಧಿವೇಶನ ನಡೆಯುತ್ತಿದೆ. 2017ರ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ, ಬಿಜೆಪಿ 44 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಒಟ್ಟು 68 ವಿಧಾನಸಭಾ ಸ್ಥಾನಗಳಲ್ಲಿ ಬಹುಮತದ ಮ್ಯಾಜಿಕ್ ನಂಬರ್ 35 ಅನ್ನು ಮೀರಿತ್ತು. ಪ್ರಸ್ತುತ ಕಾಂಗ್ರೆಸ್ 21 ಮತ್ತು ಇತರರು ಮೂರು ಸ್ಥಾನಗಳನ್ನು ಪಡೆದಿದ್ದರು.

For Quick Alerts
ALLOW NOTIFICATIONS
For Daily Alerts
Story first published: Tuesday, May 10, 2022, 14:19 [IST]
Other articles published on May 10, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X