ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

SSLC Result: 621 ಅಂಕಗಳಿಸಿ ಅತ್ಯುತ್ತಮ ಸಾಧನೆ ಮಾಡಿದ ದೊಡ್ಡ ಗಣೇಶ್ ಪುತ್ರಿ ಸಮೆತಾ

Dodda Ganesh Daughter Sametha Scored 621/625 Marks in Karnataka SSLC Exam 2022

ಇಂದು 2021/22ನೇ ಸಾಲಿನ ಎಲ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಈ ಫಲಿತಾಂಶದಲ್ಲಿ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಪುತ್ರಿ ಸಮೆತಾ ಅತ್ಯುತ್ತಮ ಸಾಧನೆ ಮಾಡಿದ್ದಾರೆ. 625 ಅಂಕಗಳಿಗೆ 621 ಅಂಕಗಳನ್ನು ಸಮೆತಾ ಪಡೆದುಕೊಂಡಿದ್ದು ಹೆತ್ತವರು ಹಾಗೂ ತನ್ನ ಶಾಲೆ ಸಂಭ್ರಮಿಸುವಂತೆ ಮಾಡಿದ್ದಾರೆ.

ತಮ್ಮ ಮಗಳ ಸಾಧನೆಯ ಬಗ್ಗೆ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಸಂಭ್ರಮ ಹಂಚಿಕೊಂಡಿದ್ದಾರೆ . ಎಸ್‌ಎಸ್‌ಎಲ್‌ಸಿಯಲ್ಲಿ ತೇರ್ಗಡೆ ಹೊಂದಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಾಶಯ ತಿಳಿಸಿರುವ ದೊಡ್ಡ ಗಣೇಶ್ ಅವರು ತಂದೆಯಾಗಿ ಮಗಳ ಸಾಧನೆಗೆ ಹರ್ಷಗೊಂದಿದ್ದೇನೆ ಎಂದಿದ್ದಾರೆ. ಒಬ್ಬ ತಂದೆಯಾಗಿ ನನ್ನ ಮಗಳ ಬಗ್ಗೆ ತುಂಬಾ ಹೆಮ್ಮೆ ಅನ್ನಿಸ್ತಾ ಇದೆ. ಒಳ್ಳೆಯದಾಗಲಿ ಮಗಳೆ" ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ ದೊಡ್ಡ ಗಣೇಶ್.

ಇನ್ನು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8,53,436 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಉತ್ತೀರ್ಣ ಪ್ರಮಾಣ ಶೇ.85.63ರಷ್ಟು ಇದೆ. ಉತ್ತೀರ್ಣ ಪ್ರಮಾಣ ಬಾಲಕಿಯರು- ಶೇ. 90.29 ಮತ್ತು ಬಾಲಕರು ಬಾಲಕರು- ಶೇ. 81.30 ಇದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆಸಿ ಮಾಧ್ಯಮಗೋಷ್ಠಿಯಲ್ಲಿ ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಇನ್ನು ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಗಳ 21 ವಿದ್ಯಾರ್ಥಿಗಳು ಹಾಗೂ ಅನುದಾನಿತ ಶಾಲೆಗಳ 8 ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಗಳಿಸಿದ್ದಾರೆ. ಅನುದಾನ ರಹಿತ ಖಾಸಗಿ ಶಾಲೆಗಳ 116 ಮಕ್ಕಳು 625 ಕ್ಕೆ 625 ಅಂಕ ಗಳಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಒಟ್ಟಾರೆ ಶೇ. 85 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

Story first published: Thursday, May 19, 2022, 19:14 [IST]
Other articles published on May 19, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X