ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

FIBA ಅಂಡರ್-18 ಮಹಿಳಾ ಏಷ್ಯನ್ ಬ್ಯಾಸ್ಕೆಟ್‌ಬಾಲ್‌ ಚಾಂಪಿಯನ್ ಶಿಪ್‌ಗೆ ಸಕಲ ಸಿದ್ಧತೆ

FIBA Under-18 Basketball championship

ಬೆಂಗಳೂರಿನಲ್ಲಿ ಸೆಪ್ಟೆಂಬರ್ 5 ರಿಂದ 11 ರವರೆಗೂ ಫಿಬಾ ಅಂಡರ್ 18 ಮಹಿಳಾ‌ ಏಷ್ಯನ್ ಬ್ಯಾಸ್ಕೆಟ್‌ಬಾಲ್‌ ಚಾಂಪಿಯನ್ ಶಿಪ್ ನಡೆಯಲಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣ ಹಾಗೂ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್ ನಡೆಯಲಿದೆ. ಭಾರತ, ಜಪಾನ್, ಚೀನಾ, ಇಂಡೋನೇಷ್ಯಾ, ಮಲೇಷ್ಯಾ ಸೇರಿದಂತೆ ಒಟ್ಟು 16 ತಂಡಗಳು ಭಾಗಿಯಾಗಲಿವೆ. ಈ ಕ್ರೀಡಾಕೂಟದಲ್ಲಿ 16 ಅಂತರಾಷ್ಟ್ರೀಯ ತಂಡಗಳ 192 ಕ್ರೀಡಾಪಟುಗಳು, 96 ಅಧಿಕಾರಿಗಳು, 100 ಸ್ವಯಂಸೇವಕರು ಭಾಗವಹಿಸಲಿದ್ದಾರೆ.

IND vs ZIM 1st ODI: ಧವನ್-ಗಿಲ್ 192 ರನ್‌ ಜತೆಯಾಟ; 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ಭಾರತIND vs ZIM 1st ODI: ಧವನ್-ಗಿಲ್ 192 ರನ್‌ ಜತೆಯಾಟ; 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ಭಾರತ

ಈ ಕ್ರೀಡಾಕೂಟದಲ್ಲಿ ವಿಜೇತರಾದ ಮೊದಲ 4 ತಂಡಗಳು 2023ರ ಜುಲೈನಲ್ಲಿ ಸ್ಪೇನ್‌ನಲ್ಲಿ ನಡೆಯಲಿರುವ ಅಂಡರ್- 19 ಮಹಿಳೆಯರ ಫಿಬಾ ವಿಶ್ವ ಕಪ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿದ್ದಾರೆ ಎಂದು ಸಚಿವರು ತಿಳಿಸಿದರು.

''ಈ ಕ್ರೀಡಾಕೂಟಕ್ಕೆ ಫೆಡರೇಷನ್ ಆಫ್ ಬ್ಯಾಸ್ಕೆಟ್ ಬಾಲ್ ಅಸೋಸಿಯೇಷನ್ ಮಾರ್ಗಸೂಚಿ ಪ್ರಕಾರ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದ್ದು, ನಮ್ಮ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯೂ ಈ ಟೂರ್ನಿಗೆ ಅಗತ್ಯವಿರುವ ಎಲ್ಲಾ ಸಹಕಾರ ನೀಡುತ್ತಿದೆ. ಮುಕ್ತಾಯ ಸಮಾರಂಭ 11 ನೇ ತಾರೀಖಿನಂದು ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಗೌರವಾನ್ವಿತ ರಾಜ್ಯಪಾಲರು, ಸನ್ಮಾನ್ಯ ಮುಖ್ಯಮಂತ್ರಿಗಳು ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದಾರೆ. ಬೆಂಗಳೂರಿಗೆ ಈ ಕ್ರೀಡಾಕೂಟದ ಆತಿಥ್ಯವಹಿಸಲು ಅವಕಾಶ ಸಿಕ್ಕಿರುವುದು ನಮ್ಮೆಲ್ಲರಿಗೆ ಸಂತಸ ತಂದಿದೆ. ವಿಶ್ವದರ್ಜೆಯ ಯಾವುದೇ ಕ್ರೀಡಾಕೂಟವನ್ನು ಆಯೋಜಿಸಲು ನಾವು ಸಶಕ್ತರಾಗಿದ್ದೇವೆ'' ಎಂದು ಸಚಿವ ಡಾ. ನಾರಾಯಣಗೌಡ ಅವರು ಹೇಳಿದರು.

FIBA Under-18 Basketball championship

ಇದೇ ವೇಳೆ ಇರಾನ್‌ನಲ್ಲಿ ನಡೆಯಲಿರುವ ಫಿಬಾ ಅಂಡರ್ 18 ಪುರುಷರ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್‌ನಲ್ಲಿ ಪಾಲ್ಗೊಳ್ಳುವ ಭಾರತ ತಂಡದ ಆಟಗಾರರಿಗೆ ಕಿಟ್‌ಗಳನ್ನು ನೀಡಿ ಶುಭ ಹಾರೈಸಿದರು.

ಇಂಡಿಯನ್ ಬ್ಯಾಸ್ಕೆಟ್ ಬಾಲ್ ಫೆಡರೇಷನ್ ಅಧ್ಯಕ್ಷ ಕೆ. ಗೋವಿಂದರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ ಉಪಸ್ಥಿತರಿದ್ದರು.

Story first published: Thursday, August 18, 2022, 18:47 [IST]
Other articles published on Aug 18, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X