ಕುಸ್ತಿಪಟು ನರಸಿಂಗ್ ಯಾದವ್ ವಿರುದ್ಧ ಎಫ್‌ಐಆರ್

ಮುಂಬೈ. ಏಪ್ರಿಲ್ 24: ಲೋಕ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಜಯ್ ನಿರುಪಮ್ ಅವರ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಕುಸ್ತಿಪಟು ಹಾಗೂ ಸಹಾಯಕ ಪೊಲೀಸ್ ಕಮಿಷನರ್ ನರಸಿಂಗ್ ಯಾದವ್ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಮುಂಬೈ ನಾರ್ತ್ ವೆಸ್ಟ್‌ನಲ್ಲಿ ಶಿವಸೇನೆಯ ಎಂಪಿ ಗಜಾನನ್ ಕೀರ್ತಿಕಾರ್ ವಿರುದ್ಧ ಸ್ಪರ್ಧಿಸುತ್ತಿರುವ ನಿರುಪಮ್ ಅವರ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಕಾರಣಕ್ಕೆ ಅಂಬೋಲಿ ಪೊಲೀಸರು ನರಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಭಾನುವಾರ ರಾತ್ರಿ ಅಂಧೇರಿ ವೆಸ್ಟ್ ಭಾಗದಲ್ಲಿ ನರಸಿಂಗ್ ಯಾದವ್ ನಿರುಪಮ್ ಪರವಾಗಿ ಮತ ಪ್ರಚಾರ ಕಾರ್ಯ ನಡೆಸಿದ್ದಾರೆ.
ಸೆಕ್ಷನ್ 129 (2) (ಅಧಿಕಾರಿಗಳು, ಚುನಾವಣೆಯಲ್ಲಿ ನಿಂತಿರುವ ಅಭ್ಯರ್ಥಿಗಳ ಪರ ಪ್ರಚಾರ ಮಾಡುವಂತಿಲ್ಲ) ಅಡಿಯಲ್ಲಿ ನರಸಿಂಗ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಕುರಿತಾಗಿ ಇಲಾಖೆ ಮೂಲಕ ವಿಚಾರಣೆ ನಡೆಯಲಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.
2010ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ನರಸಿಂಗ್ 74 ಕೆಜಿ ವಿಭಾಗದ ಫ್ರೀಸ್ಟೈಲ್ ಕುಸ್ತಿಯಲ್ಲಿ ಚಿನ್ನ ಗೆದ್ದಿದ್ದರು. ಆದರೆ, 2016ರ ರಿಯೊ ಒಲಿಂಪಿಕ್ಸ್‌ಗೂ ಮುನ್ನ ಡೋಪಿಂಗ್‌ನಲ್ಲಿ ಸಿಕ್ಕಿಬಿದ್ದು ಭಾರಿ ಸುದ್ದಿಯಾಗಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications