ಟೋಕಿಯೋ ಒಲಿಂಪಿಕ್ಸ್ ಗ್ರಾಮದಲ್ಲಿ ಮೊದಲ ಕೋವಿಡ್ ಪ್ರಕರಣ ಪತ್ತೆ

ಟೋಕಿಯೋ: ಟೋಕಿಯೋ ಒಲಿಂಪಿಕ್ಸ್ ಆರಂಭಕ್ಕಿನ್ನು ಒಂದು ವಾರಕ್ಕೂ ಕಡಿಮೆ ದಿನಗಳಿಗೆ. ಆದರೆ ಅದಕ್ಕೂ ಮುನ್ನವೇ ಒಲಿಂಪಿಕ್ಸ್ ಕ್ರೀಡಾ ಗ್ರಾಮದಲ್ಲಿ ಮೊದಲ ಕೋವಿಡ್-19 ಪ್ರಕರಣ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಹೀಗಾಗಿ ಇಡೀ ಪ್ರತಿಷ್ಠಿತ ಕ್ರೀಡಾಕೂಟಕ್ಕೇ ಕೋವಿಡ್ ಭೀತಿ ಶುರುವಾಗಿದೆ.
ಜುಲೈ 23ರಿಂದ ಆಗಸ್ಟ್ 8ರ ವರೆಗೆ ಜಪಾನ್ ಟೋಕಿಯೋದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯಲಿದೆ. ಕೋವಿಡ್ ಆತಂಕದ ಮಧ್ಯೆಯೇ ನಡೆಯುತ್ತಿರುವ ಈ ಕ್ರೀಡಾಕೂಟದಲ್ಲಿ ಕೊರೊನಾ ಪ್ರಕರಣ ಕಾಣಿಸಿಕೊಂಡಿರುವುದು ಆಯೋಜಕರಿಗೂ ಎಚ್ಚರಿಕೆಯ ಸಂದೇಶ ರವಾನಿಸಿದಂತಾಗಿದೆ.
ಟೋಕಿಯೋದಲ್ಲಿ ಈಗ ಕೋವಿಡ್ ಕಾರಣಕ್ಕಾಗಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಆದರೂ ಈ ಬಾರಿ ಒಲಿಂಪಿಕ್ಸ್ ನಡೆಸಿಯೇ ನಡೆಸುತ್ತೇವೆ ಎಂದು ಇಂಟರ್ ನ್ಯಾಷನಲ್ ಒಲಿಂಪಿಕ್ಸ್ ಸಮಿತಿ (ಐಒಸಿ) ಹೇಳಿತ್ತು. ಕ್ರೀಡಾಕೂಟ ಆರಂಭಕ್ಕೂ ಮುನ್ನವೇ ಕೋವಿಡ್ ಪ್ರಕರಣ ಕಾಣಿಸಿಕೊಂಡಿದ್ದು ಒಂದರ್ಥದಲ್ಲಿ ಕ್ರೀಡಾಕೂಟಕ್ಕೆ ಹಿನ್ನಡೆಯಾದಂತಾಗಿದೆ.
ಅಸಲಿಗೆ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟ 2020ರಲ್ಲಿ ನಡೆಯಬೇಕಿತ್ತು. ಕೋವಿಡ್-19 ಭೀತಿಯಿಂದಾಗಿ ಈ ಕ್ರೀಡಾಕೂಟ ಒಂದು ವರ್ಷ ಮುಂದೂಡಲ್ಪಟ್ಟಿತ್ತು. ಈ ಬಾರಿಯ ಕ್ರೀಡಾಕೂಟದಲ್ಲಿ ಬಹಳಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದರೂ ಕ್ರೀಡಾ ಗ್ರಾಮದಲ್ಲಿ ಒಂದು ಪ್ರಕರಣ ವರದಿಯಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications