ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

ಟೋಕಿಯೋ ಒಲಿಂಪಿಕ್ಸ್‌ 2021ರಲ್ಲಿ ಕರ್ನಾಟಕದಿಂದ ನಾಲ್ವರು ಸ್ಪರ್ಧೆ

By ಪ್ರತಿನಿಧಿ
Four athletes from Karnataka will participate in the Tokyo Olympics 2021

ನವದೆಹಲಿ: ಟೋಕಿಯೊ ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಭಾರತ ತಂಡದಲ್ಲಿ ಕರ್ನಾಟಕದ ನಾಲ್ವರು ಕ್ರಿಡಾಪಟುಗಳು ಆಯ್ಕೆಯಾಗಿದ್ದಾರೆ. ಒಲಿಂಪಿಕ್ ಕ್ರೀಡಾಕೂಟದ ಈಕ್ವೆಸ್ಟ್ರಿಯನ್, ಗಾಲ್ಫ್ ಮತ್ತು ಈಜು ಸ್ಪರ್ಧೆಗಳಲ್ಲಿ ಈ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಈಕ್ವೆಸ್ಟ್ರಿಯನ್ ನಲ್ಲಿ ಫೌವಾದ್ ಮಿರ್ಜಾ, ಮಹಿಳೆಯರ ಗಾಲ್ಫ್ ನಲ್ಲಿ ಅದಿತಿ ಅಶೋಕ್, ಪುರುಷರ ಗಾಲ್ಫ್ ನಲ್ಲಿ ಅನಿರ್ಬನ್ ಲಹಿರಿ ಮತ್ತು ಈಜು ಸ್ಪರ್ಧೆಯ 100 ಮೀ. ಬ್ಯಾಕ್ ಸ್ಟ್ರೋಕ್ ವಿಭಾಗದಲ್ಲಿ ಶ್ರೀಹರಿ ನಟರಾಜ್ ಪಾಲ್ಗೊಳ್ಳಲಿದ್ದಾರೆ.

ಬಡತನದೊಂದಿಗೆ ಹೋರಾಡುತ್ತಲೇ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿದ ರೇವತಿಬಡತನದೊಂದಿಗೆ ಹೋರಾಡುತ್ತಲೇ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿದ ರೇವತಿ

ಟೋಕಿಯೊ ಒಲಿಂಪಿಕ್ ನಲ್ಲಿ ಭಾಗವಹಿಸಲಿರುವ 126 ಕ್ರೀಡಾಪಟುಗಳ ಪಟ್ಟಿಯನ್ನು ಭಾರತೀಯ ಒಲಿಂಪಿಕ್ಸ್ ಅಸೋಸಿಯೇಶನ್ ಬಿಡುಗಡೆ ಮಾಡಿದ್ದು, ಇದರಲ್ಲಿ ಹರಿಯಾಣ ರಾಜ್ಯದ ಕ್ರೀಡಾಪಟುಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಪಂಜಾಬ್ ನ ಕ್ರೀಡಾಪಟುಗಳಿದ್ದಾರೆ. ಟೋಕಿಯೋ ಒಲಿಂಪಿಕ್ಸ್ ಜುಲೈ 23ರಿಂದ ಆಗಸ್ಟ್ 8ರ ವರೆಗೆ ನಡೆಯಲಿದೆ.

ಭಾರತದ ತಂಡದ ಬಗ್ಗೆ ಮಾಹಿತಿ

ಭಾರತದ ತಂಡದ ಬಗ್ಗೆ ಮಾಹಿತಿ

ಭಾರತದಿಂದ 18 ಕ್ರೀಡಾ ವಿಭಾಗಗಳಲ್ಲಿ ಒಟ್ಟು 126 ಕ್ರೀಡಾಪಟುಗಳು ಟೋಕಿಯೊಗೆ ತೆರಳಲಿದ್ದಾರೆ. ಯಾವುದೇ ಒಲಿಂಪಿಕ್ಸ್‌ ಗೆ ಹೋಲಿಸಿದರೆ ಭಾರತ ಕಳುಹಿಸುತ್ತಿರುವ ಅತಿದೊಡ್ಡ ಅಥ್ಲೀಟ್‌ಗಳ ತಂಡ ಇದಾಗಿದೆ. ಭಾರತ 18 ಕ್ರೀಡಾ ವಿಭಾಗಗಳಲ್ಲಿ ಒಟ್ಟು 69 ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದು, ಇದು ಈವರೆಗಿನ ಅತಿ ದೊಡ್ಡ ಸಂಖ್ಯೆಯಾಗಿ ಗುರುತಿಸಿಕೊಂಡಿದೆ.

ಹಲವಾರು ಪ್ರಥಮಗಳು

ಹಲವಾರು ಪ್ರಥಮಗಳು

ಪಾಲ್ಗೊಳ್ಳುವಿಕೆಯ ವಿಚಾರದಲ್ಲಿ ಹಲವಾರು ಗಮನಾರ್ಹ ಪ್ರಥಮಗಳಿವೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತದಿಂದ ಫೆನ್ಸರ್ (ಭವಾನಿ ದೇವಿ) ಒಲಿಂಪಿಕ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿದ್ದಾರೆ. ನೇತ್ರಾ ಕುಮನನ್ ಅವರು ಒಲಿಂಪಿಕ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದ ಭಾರತದ ಮೊದಲ ಮಹಿಳಾ ನಾವೆ ಸ್ಪರ್ಧಾಳುವಾಗಿದ್ದಾರೆ. ಸಾಜನ್ ಪ್ರಕಾಶ್ ಮತ್ತು ಶ್ರೀಹರಿ ನಟರಾಜ್ ಈಜು ಸ್ಪರ್ಧೆಯಲ್ಲಿ 'ಎ' ಅರ್ಹತಾ ಮಾನದಂಡವನ್ನು ಸಾಧಿಸುವ ಮೂಲಕ ಒಲಿಂಪಿಕ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದ ಭಾರತದ ಮೊದಲ ಈಜುಪಟುಗಳಾಗಿದ್ದಾರೆ.

ನರೇಂದ್ರ ಮೋದಿ ಸಂವಾದ

ನರೇಂದ್ರ ಮೋದಿ ಸಂವಾದ

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಟೋಕಿಯೋ ಒಲಿಂಪಿಕ್ಸ್ ಗೆ ತೆರಳಲಿರುವ ಭಾರತೀಯ ಅಥ್ಲೀಟ್ ಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಜುಲೈ 13ರಂದು ಸಂಜೆ 5 ಗಂಟೆಗೆ ಸಂವಾದ ನಡೆಸಲಿದ್ದಾರೆ. ಜಾಗತಿಕ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿರುವ ಅಥ್ಲೀಟ್‌ಗಳಿಗೆ ಪ್ರಧಾನಿ ಶುಭಹಾರೈಸಲಿದ್ದಾರೆ, ಸ್ಫೂರ್ತಿ ತುಂಬಲಿದ್ದಾರೆ.

Story first published: Monday, July 12, 2021, 17:48 [IST]
Other articles published on Jul 12, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X