ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

2 ಸ್ಪೋರ್ಟ್ಸ್ ಹಾಸ್ಟೇಲ್ ನಿರ್ಮಾಣಕ್ಕೆ ಹೆಚ್‌ಎಎಲ್ ಒಪ್ಪಿಗೆ: ಧನ್ಯವಾದ ಸಲ್ಲಿಸಿದ ಸಚಿವ ನಾರಾಯಣ ಗೌಡ

By ಪ್ರತಿನಿಧಿ
HAL agreed to build two sports hostel, minister Narayana Gowda reaction

ಸಿಎಸ್‌ಆರ್‌ ನಿಧಿಯಿಂದ ಎರಡು ಸ್ಪೋರ್ಟ್ಸ್ ಹಾಸ್ಟೆಲ್ ನಿರ್ಮಿಸಿಕೊಡಲು ಹೆಚ್‌ಎಎಲ್‌ಗೆ ಕ್ರೀಡಾ ಇಲಾಖೆ ಮನವಿ ಮಾಡಲಾಗಿತ್ತು. ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಹೆಚ್‌ಎಎಲ್ ತಮ್ಮ ಸಿಎಸ್‌ಆರ್ ನಿಧಿಯಲ್ಲಿ ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಕ್ರೀಡಾ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಒಪ್ಪಿಗೆ ನೀಡಿದೆ.

ಕಾಮನ್ ವೆಲ್ತ್ , ಒಲಂಪಿಕ್ ಸೇರಿದಂತೆ ಇತರೆ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ಕರ್ನಾಟಕದ ಕ್ರೀಡಾಪಟುಗಳು ಪದಕಗಳನ್ನು ಪಡೆಯಬೇಕಾದರೇ ಕ್ರೀಡಾಪಟುಗಳಿಗೆ ತರಬೇತಿಯ ಅಗತ್ಯವಿದೆ. ಕ್ರೀಡಾ ವಿದ್ಯಾರ್ಥಿಗಳಿಗೆ ಸ್ಪೋರ್ಟ್ಸ್ ಹಾಸ್ಟೆಲ್ ನಿರ್ಮಾಣ ಮಾಡುವುದರಿಂದಾಗಿ ಬಹಳ ಅನುಕೂಲವಾಗಲಿದೆ. ಇದಕ್ಕಾಗಿ ಕ್ರೀಡಾ ವಿದ್ಯಾರ್ಥಿಗಳಿಗೆ ಸ್ಪೋರ್ಟ್ಸ್ ಹಾಸ್ಟೆಲ್ ನಿರ್ಮಾಣ ಮಾಡಲು ಕ್ರಮವನ್ನು ಕೈಗೊಳ್ಳಲಾಗುತ್ತಿದೆ.

ಕ್ರೀಡಾ ವಿದ್ಯಾರ್ಥಿಗಳನ್ನು ಉತ್ತೇಜಿಸುವ ಸಲುವಾಗಿ ಸಿಎಸ್‌ಆರ್ ನಿಧಿಯಲ್ಲಿ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಕ್ರೀಡಾ ವಸತಿ ನಿಲಯ ನಿರ್ಮಾಣಕ್ಕೆ ಟೆಂಡರ್ ಆಹ್ವಾನಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ತಿಳಿಸಿದರು.

ಸಿಎಸ್‌ಆರ್ ನಿಧಿಯಲ್ಲಿ ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಕ್ರೀಡಾ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಹೆಚ್‌ಎಎಲ್ ಒಪ್ಪಿದೆ. ಕೋಲಾರದಲ್ಲಿ 2.07 ಕೋಟಿ ಹಾಗೂ ಚಿಕ್ಕಬಳ್ಳಾಪುರದಲ್ಲಿ 3.36 ಕೋಟಿ ವೆಚ್ಚದಲ್ಲಿ ಸ್ಪೋರ್ಟ್ಸ್ ಹಾಸ್ಟೆಲ್ ನಿರ್ಮಾಣಕ್ಕೆ ಟೆಂಡರ್ ಆಹ್ವಾನಿಸಲಾಗಿದ್ದು, ಎರಡು ತಿಂಗಳಲ್ಲಿ ನಿರ್ಮಾಣ ಕಾಮಗಾರಿ ಆರಂಭಿಸಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

ಸಚಿವ ನಾರಾಯಣ ಗೌಡ ಹೇಳಿದ್ದೇನು?
"ಸಿಎಸ್‌ಆರ್‌ ನಿಧಿಯಿಂದ ಎರಡು ಸ್ಪೋರ್ಟ್ಸ್ ಹಾಸ್ಟೆಲ್ ನಿರ್ಮಿಸಿಕೊಡಲು ಹೆಚ್‌ಎಎಲ್‌ಗೆ ಮನವಿ ಮಾಡಲಾಗಿತ್ತು. ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಹೆಚ್‌ಎಎಲ್ ತಮ್ಮ ಸಿಎಸ್‌ಆರ್ ನಿಧಿಯಲ್ಲಿ ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಕ್ರೀಡಾ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಒಪ್ಪಿಗೆ ನೀಡಿದೆ. ಇದಕ್ಕಾಗಿ ಹೆಚ್‌ಎಎಲ್ ಆಡಳಿತ ಮಂಡಳಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಸಚಿವ ಡಾ.ನಾರಾಯಣಗೌಡ ಹೇಳಿದರು

Story first published: Thursday, August 11, 2022, 10:27 [IST]
Other articles published on Aug 11, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X