ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಪಾಂಡ್ಯ ಬ್ರದರ್ಸ್

Hardik Pandya And Krunal Pandya Met Union Home Minister Amit Shah in Bengaluru

ಭಾರತ ಟಿ20 ತಂಡದ ಹಂಗಾಮಿ ನಾಯಕ ಹಾರ್ದಿಕ್ ಪಾಂಡ್ಯ ಅವರು ಹೊಸ ವರ್ಷದ ಮುನ್ನಾದಿನ ಶನಿವಾರದಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾದರು. ಜನವರಿ 3ರಂದು ಪ್ರಾರಂಭವಾಗುವ ಶ್ರೀಲಂಕಾ ವಿರುದ್ಧದ ಸರಣಿಗೂ ಮುನ್ನ ಭೇಟಿಯಾಗಿದ್ದು ವಿಶೇಷವಾಗಿತ್ತು.

ಇದೇ ವೇಳೆ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಸಹೋದರ ಸಹೋದರ ಕೃನಾಲ್ ಪಾಂಡ್ಯ ಸಹ ಜೊತೆಗಿದ್ದರು. ಹಾರ್ದಿಕ್ ಪಾಂಡ್ಯ ತಮ್ಮ ಸಹೋದರ ಕೃನಾಲ್‌ನೊಂದಿಗೆ ಕೇಂದ್ರ ಗೃಹ ಸಚಿವರನ್ನು ಭೇಟಿಯಾಗುತ್ತಿರುವ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಪಾಂಡ್ಯ ಸಹೋದರರೂ ಮೂಲತಃ ಗುಜರಾತಿನವರೇ ಆಗಿದ್ದಾರೆ.

2022 ಭಾರತದ ಈ ಸ್ಟಾರ್ ಬ್ಯಾಟ್ಸ್‌ಮನ್‌ಗೆ ಸೇರಿದ್ದು; ಆಕಾಶ್ ಚೋಪ್ರಾ2022 ಭಾರತದ ಈ ಸ್ಟಾರ್ ಬ್ಯಾಟ್ಸ್‌ಮನ್‌ಗೆ ಸೇರಿದ್ದು; ಆಕಾಶ್ ಚೋಪ್ರಾ

"ಗೌರವಾನ್ವಿತ ಗೃಹ ಸಚಿವ ಅಮಿತ್ ಶಾ ಜಿ ಅವರು ತಮ್ಮೊಂದಿಗೆ ಅಮೂಲ್ಯ ಸಮಯವನ್ನು ಕಳೆಯಲು ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗಿದ್ದು ಗೌರವದ ಸೂಚಕವಾಗಿದೆ," ಎಂದು ಹಾರ್ದಿಕ್ ಪಾಂಡ್ಯ ಟ್ವೀಟ್ ಮಾಡಿದ್ದಾರೆ.

Hardik Pandya And Krunal Pandya Met Union Home Minister Amit Shah in Bengaluru

29ರ ಹರೆಯದ ಹಾರ್ದಿಕ್ ಪಾಂಡ್ಯ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಜನವರಿ ಎರಡನೇ ವಾರದಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಹಾರ್ದಿಕ್ ಪಾಂಡ್ಯರನ್ನು ಉಪನಾಯಕನಾಗಿ ನೇಮಿಸಲಾಗಿದೆ. ರೋಹಿತ್ ಶರ್ಮಾ ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

ಹಾರ್ದಿಕ್ ಪಾಂಡ್ಯ 2022ರಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿದ್ದಾರೆ. ಐಪಿಎಲ್‌ನಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ತಮ್ಮ ಮೊದಲ ಋತುವಿನಲ್ಲಿ ಚಾಂಪಿಯನ್ ಪಟ್ಟಕ್ಕಾಗಿ ಮುನ್ನಡೆಸಿದರು.

ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ
ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ಉಪನಾಯಕ), ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಶ್‌ದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಶಿವಂ ಮಾವಿ ಮತ್ತು ಮುಖೇಶ್ ಕುಮಾರ್.

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್ ಮತ್ತು ಅರ್ಶ್‌ದೀಪ್ ಸಿಂಗ್.

Story first published: Saturday, December 31, 2022, 18:44 [IST]
Other articles published on Dec 31, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X