For Quick Alerts
ALLOW NOTIFICATIONS  
For Daily Alerts

ಮೊಬೈಲ್‌ನಲ್ಲಿ ಉಚಿತವಾಗಿ ವಿಶ್ವಕಪ್ 2023, ಏಷ್ಯಾ ಕಪ್ 2023 ಲೈವ್ ವೀಕ್ಷಣೆ ಹೇಗೆ? ಇಲ್ಲಿದೆ ವಿವರ

ಭಾರತದಾದ್ಯಂತ ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಅದು ಏನೆಂದರೆ, 2023ರಲ್ಲಿ ಐಸಿಸಿ ಏಕದಿನ ವಿಶ್ವಕಪ್ ಮತ್ತು ಏಷ್ಯಾ ಕಪ್ ಪಂದ್ಯಾವಳಿಗಳು ನಡೆಯಲಿವೆ. ಎರಡು ದೊಡ್ಡ ಕ್ರಿಕೆಟ್ ಪಂದ್ಯಾವಳಿಗಳು ಪಂದ್ಯಾವಳಿಗಳನ್ನು ಭಾರತದಲ್ಲಿ ಮೊಬೈಲ್ ಫೋನ್‌ಗಳಲ್ಲಿ ಉಚಿತ ಪ್ರಸಾರ ಮಾಡಲಾಗುತ್ತದೆ.

2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಾವಳಿಯನ್ನು ಉಚಿತವಾಗಿ ಸ್ಟ್ರೀಮ್ ಮಾಡಿದ ಓಟಿಟಿ ಪ್ರತಿಸ್ಪರ್ಧಿ ಜಿಯೋ ಸಿನಿಮಾದ ನಿರ್ಧಾರವನ್ನೇ ಅನುಸರಿಸಿ, ವಿಶ್ವಕಪ್ 2023 ಮತ್ತು ಏಷ್ಯಾ ಕಪ್ 2023ರ ಪಂದ್ಯಾವಳಿಗಳ ಹಕ್ಕುಗಳನ್ನು ಹೊಂದಿರುವ ಡಿಸ್ನಿ + ಹಾಟ್‌ಸ್ಟಾರ್ ಮೊಬೈಲ್‌ನಲ್ಲಿ ಉಚಿತವಾಗಿ ಲೈವ್ ಸ್ಟ್ರೀಮ್ ಮಾಡಲು ನಿರ್ಧರಿಸಿದೆ.

ICC World Cup 2023, Asia Cup Will Be Streamed Free On Disney+ Hotstar On Mobile Devices

ಐಪಿಎಲ್ 2023ರಲ್ಲಿ ಸ್ಟಾರ್ ಸ್ಪೋರ್ಟ್ಸ್ ಮೂಲಕ ದಾಖಲೆಯ ವೀಕ್ಷಕರನ್ನು ಸೆಳೆದ ನಂತರ, ಇದೀಗ ಡಿಸ್ನಿ + ಹಾಟ್‌ಸ್ಟಾರ್ ತಮ್ಮ ಮೊಬೈಲ್ ಬಳಕೆದಾರರಿಗೆ ನಿರ್ದಿಷ್ಟವಾಗಿ ಈ ಎರಡು ಪಂದ್ಯಾವಳಿಗಳನ್ನು ಉಚಿತವಾಗಿ ಪ್ರಸಾರ ಮಾಡಲು ನಿರ್ಧರಿಸಿದೆ.

ಇದರೊಂದಿಗೆ, ಭಾರತದಾದ್ಯಂತ 540 ದಶಲಕ್ಷಕ್ಕೂ ಹೆಚ್ಚು ಮೊಬೈಲ್ ಬಳಕೆದಾರರು ಈಗ ಏಷ್ಯಾ ಕಪ್ ಮತ್ತು ಐಸಿಸಿ ಪುರುಷರ ಏಕದಿನ ವಿಶ್ವಕಪ್ ಪಂದ್ಯಾವಳಿಯನ್ನು ಉಚಿತವಾಗಿ ವೀಕ್ಷಿಸಲು ಪ್ರವೇಶವನ್ನು ಹೊಂದಿರುತ್ತಾರೆ ಎಂದು ಡಿಸ್ನಿ + ಹಾಟ್‌ಸ್ಟಾರ್ ತಿಳಿಸಿದೆ.

ಅಧಿಕೃತ ಬಿಡುಗಡೆಯ ಪ್ರಕಾರ, ಡಿಸ್ನಿ+ ಹಾಟ್‌ಸ್ಟಾರ್‌ನ ಈ ನಿರ್ಧಾರವು "ಕ್ರಿಕೆಟ್ ಆಟವನ್ನು ಪ್ರಜಾಪ್ರಭುತ್ವಗೊಳಿಸುವ' ಗುರಿಯನ್ನು ಹೊಂದಿದೆ. ಇದರ ಮೂಲಕ ಕಂಪನಿಯು ಕ್ರಿಕೆಟ್ ಮತ್ತು ಡಿಸ್ನಿ + ಹಾಟ್‌ಸ್ಟಾರ್ ಎರಡನ್ನೂ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್ ಅನ್ನು ಭಾರತದಲ್ಲಿ ಸಾಧ್ಯವಾದಷ್ಟು ಮೊಬೈಲ್ ಬಳಕೆದಾರರಿಗೆ ಹೆಚ್ಚು ಪ್ರವೇಶಿಸುವಂತೆ ಮಾಡಲು ಯೋಜಿಸಿದೆ.

ICC World Cup 2023, Asia Cup Will Be Streamed Free On Disney+ Hotstar On Mobile Devices

"ಡಿಸ್ನಿ + ಹಾಟ್‌ಸ್ಟಾರ್ ಭಾರತದಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಓಟಿಟಿ ಉದ್ಯಮವಾಗಿ ಮುಂಚೂಣಿಯಲ್ಲಿದೆ. ವೀಕ್ಷಕರ ಅನುಭವವನ್ನು ಹೆಚ್ಚಿಸುವುದನ್ನು ಮುಂದುವರಿಸಲು ನಾವು ಪರಿಚಯಿಸಿದ ವಿವಿಧ ಆವಿಷ್ಕಾರಗಳು ಪ್ರದೇಶದಾದ್ಯಂತ ನಮ್ಮ ಪ್ರೇಕ್ಷಕರನ್ನು ಸಂತೋಷಪಡಿಸಲು ನಮಗೆ ಅವಕಾಶ ಮಾಡಿಕೊಟ್ಟಿವೆ," ಎಂದಿದೆ.

"ಏಷ್ಯಾ ಕಪ್ ಮತ್ತು ಐಸಿಸಿ ಪುರುಷರ ಏಕದಿನ ವಿಶ್ವಕಪ್ ಪಂದ್ಯಾವಳಿಯನ್ನು ಹೆಚ್ಚಿನ ಪ್ರೇಕ್ಷಕರಿಗೆ ಲಭ್ಯವಾಗುವಂತೆ ಮಾಡುವುದು, ಒಟ್ಟಾರೆ ಪರಿಸರ ವ್ಯವಸ್ಥೆಯನ್ನು ಬೆಳೆಸಲು ನಮಗೆ ಸಹಾಯ ಮಾಡುತ್ತದೆ ಎಂದು ನಾವು ನಂಬುತ್ತೇವೆ," ಎಂದು ಡಿಸ್ನಿ+ ಹಾಟ್‌ಸ್ಟಾರ್‌ನ ಮುಖ್ಯಸ್ಥ ಸಜಿತ್ ಶಿವಾನಂದನ್ ಹೇಳಿದ್ದಾರೆ.

ಇಲ್ಲಿಯವರೆಗೆ , ಡಿಸ್ನಿ+ ಹಾಟ್‌ಸ್ಟಾರ್‌ ಪ್ಲಾಟ್‌ಫಾರ್ಮ್ ಏಷ್ಯಾ ಕಪ್ 2022, ಐಸಿಸಿ ಪುರುಷರ ಟಿ20 ವಿಶ್ವಕಪ್ 2022, ಐಸಿಸಿ ಮಹಿಳಾ ಟಿ20 ವಿಶ್ವಕಪ್ 2023 ಮತ್ತು ಈ ವರ್ಷದ ಆರಂಭದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಭಾರತ vs ಶ್ರೀಲಂಕಾ ಸರಣಿಯಂತಹ ಹಲವಾರು ಆಟಗಳಿಗೆ ಭಾರಿ ವೀಕ್ಷಕರನ್ನು ಗಳಿಸಿದೆ.

ಇದೇ ವೇಳೆ 2023ರ ಪುರುಷರ ಏಕದಿನ ವಿಶ್ವಕಪ್‌ಗಾಗಿ ಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಲು ಐಸಿಸಿ ಉದ್ದೇಶಿಸಿದ್ದು, ಮುಖ್ಯ ಕಾರ್ಯನಿರ್ವಾಹಕ ಜಿಯೋಫ್ ಅಲ್ಲಾರ್ಡಿಸ್ ಪ್ರಕಾರ, ಶೀಘ್ರದಲ್ಲೇ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ಭಾರತ ಆಯೋಜಿಸಿರುವ ಏಕದಿನ ವಿಶ್ವಕಪ್‌ ಪಂದ್ಯಾವಳಿಗೆ ಕೇವಲ ನಾಲ್ಕು ತಿಂಗಳು ಮಾತ್ರ ಬಾಕಿ ಇದ್ದು, ಸ್ಥಳಗಳು ಮತ್ತು ಪಂದ್ಯಗಳ ದಿನಾಂಕಗಳನ್ನು ಇನ್ನೂ ದೃಢೀಕರಿಸಲಾಗಿಲ್ಲ.

ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿ ನಡೆದ 2019ರ ಏಕದಿನ ವಿಶ್ವಕಪ್‌ನ ವೇಳಾಪಟ್ಟಿಯನ್ನು ಏಪ್ರಿಲ್ 26, 2018ರಂದು, ಆರಂಭಿಕ ಪಂದ್ಯಕ್ಕೆ 13 ತಿಂಗಳ ಮೊದಲೇ ಬಿಡುಗಡೆ ಮಾಡಲಾಲಾಗಿತ್ತು. ಇನ್ನು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನಲ್ಲಿ ನಡೆದ 2015ರ ವಿಶ್ವಕಪ್ ಪಂದ್ಯಾವಳಿಯ ವೇಳಾಪಟ್ಟಿಯನ್ನು ಜುಲೈ 30, 2013ರಂದು, ಅಂದರೆ 18 ತಿಂಗಳ ಮೊದಲೇ ಬಿಡುಗಡೆ ಮಾಡಲಾಗಿತ್ತು.

ಐಸಿಸಿ ಏಕದಿನ ವಿಶ್ವಕಪ್ 2023 ನಡೆಯುವ ದಿನಾಂಕ:

2023ರ ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ನಡೆಯಲಿದೆ. ಏಕದಿನ ವಿಶ್ವಕಪ್ ಪಂದ್ಯಾವಳಿಯನ್ನು ಮೊಬೈಲ್ ಸಾಧನಗಳಲ್ಲಿ ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್‌ಸ್ಟ್ರೀಮ್‌ ಆಗಿ ಉಚಿತವಾಗಿ ಲಭ್ಯವಿರುತ್ತದೆ.

ಏಷ್ಯಾ ಕಪ್ 2023 ನಡೆಯುವ ದಿನಾಂಕ

2023ರ ಏಷ್ಯಾ ಕಪ್ ಪಂದ್ಯಾವಳಿಯು ಸೆಪ್ಟೆಂಬರ್ 2ರಿಂದ ಸೆಪ್ಟೆಂಬರ್17ರವರೆಗೆ ನಡೆಯಲಿದೆ. ಮೊಬೈಲ್ ಸಾಧನಗಳಲ್ಲಿ ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್‌ಸ್ಟ್ರೀಮಿಂಗ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ.

Story first published: Friday, June 9, 2023, 15:55 [IST]
Other articles published on Jun 9, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+