ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ
ಗುವಹಾಟಿ: ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೂರನೇ ಟಿ20 ಪಂದ್ಯ ಭಾನುವಾರ ನಡೆಯುತ್ತಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯನ್ನು ವಶಕ್ಕೆ ಪಡೆಯುವ ಆಸೆ ಭಾರತದ್ದಾಗಿದೆ. ಇನ್ನು ಈ ಪಂದ್ಯದಲ್ಲಿ ಗೆಲುವು ದಾಖಲಿಸಿ ಸರಣಿಯನ್ನು ಜೀವಂತವಾಗಿರಿಸಿಕೊಳ್ಳುವ ಆಸೆ ನ್ಯೂಜಿಲೆಂಡ್ ತಂಡದ್ದಾಗಿದೆ. ಮಹತ್ವದ ಪಂದ್ಯದ ಟಾಸ್ ಭಾರತ ಪಾಲಾಗಿದ್ದು, ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಟೀಮ್ ಇಂಡಿಯಾ ಈಗಾಗಲೇ ಸರಣಿಯಲ್ಲಿ ಆಡಿದ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿದೆ. ಹೀಗಾಗಿ ಮೂರನೇ ಪಂದ್ಯದಲ್ಲೂ ಗೆಲುವಿನ ನಗೆ ಬೀರುವ ಆಸೆ ಸೂರ್ಯ ಪಡೆಯದ್ದಾಗಿದೆ. ಎರಡನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಅಮೋಘ ಪ್ರದರ್ಶನ ನೀಡಿದ್ದರಿಂದ ಎಲ್ಲರ ಚಿತ್ತ ಈ ಆಟಗಾರರ ಮೇಲೆ ನೆಟ್ಟಿದೆ.

ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಎರಡು ಬದಲಾವಣೆಗಳೊಂದಿಗೆ ಕಣಕ್ಕೆ ಇಳಿದಿದೆ. ವೇಗದ ಬೌಲರ್ ಅರ್ಷದೀಪ್ ಸಿಂಗ್ ಬದಲಿಗೆ ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ ಸ್ಥಾನ ಪಡೆದಿದ್ದಾರೆ. ಇನ್ನು ಸ್ಪಿನ್ ಬೌಲರ್ ವರುಣ್ ಚಕ್ರವರ್ತಿ ಅವರ ಸ್ಥಾವನ್ನು ರವಿ ಬಿಷ್ಣೋಯಿ ಅವರು ಕಣಕ್ಕೆ ಇಳಿದಿದ್ದಾರೆ.
ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಹರ್ಷಿತ್ ರಾಣಾ, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ.
ನ್ಯೂಜಿಲೆಂಡ್ ತಂಡ: ಟಿಮ್ ಸೀಫರ್ಟ್, ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಡ್ಯಾರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಕೈಲ್ ಜಾಮಿಸನ್, ಮ್ಯಾಟ್ ಹೆನ್ರಿ, ಜೇಕಬ್ ಡಫಿ, ಇಶ್ ಸೋಧಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications