ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

IND vs NZ: ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಜೂ. ಎನ್‌ಟಿಆರ್ ಭೇಟಿಯಾದ ಟೀಂ ಇಂಡಿಯಾ

IND vs NZ: Indian Cricketers Met Telugu Actor Jr. NTR In Hyderabad

ಬುಧವಾರ, ಜನವರಿ 18ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ತಂಡದ ಕ್ರಿಕೆಟಿಗರು ಹೈದರಾಬಾದ್‌ನಲ್ಲಿ ತೆಲುಗು ಚಲನಚಿತ್ರ ನಟ ಜೂನಿಯರ್ ಎನ್‌ಟಿಆರ್ ಅವರನ್ನು ಭೇಟಿ ಮಾಡಿದರು.

ಭಾರತದ ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಜೊತೆಗೆ ಶುಭ್ಮನ್ ಗಿಲ್, ಯುಜ್ವೇಂದ್ರ ಚಹಾಲ್, ಇಶಾನ್ ಕಿಶನ್ ಮತ್ತು ಶಾರ್ದೂಲ್ ಠಾಕೂರ್ ಅವರು ಸೋಮವಾರ, ಜನವರಿ 16ರಂದು ಸ್ಟಾರ್ ನಟನನ್ನು ಭೇಟಿಯಾಗಿ, ಆರ್‌ಆರ್‌ಆರ್‌ ಚಿತ್ರದ "ನಾಟು ನಾಟು' ಹಾಡಿಗೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಗೆದ್ದಿದ್ದಕ್ಕಾಗಿ ಅಭಿನಂದಿಸಿದರು.

IND vs SL: 'ನಮ್ಮ ಸಂಜು ಸ್ಯಾಮ್ಸನ್ ಎಲ್ಲಿ' ಎಂಬ ಫ್ಯಾನ್ಸ್ ಪ್ರಶ್ನೆಗೆ ಉತ್ತರಿಸಿ ಹೃದಯ ಗೆದ್ದ ಸೂರ್ಯಕುಮಾರ್IND vs SL: 'ನಮ್ಮ ಸಂಜು ಸ್ಯಾಮ್ಸನ್ ಎಲ್ಲಿ' ಎಂಬ ಫ್ಯಾನ್ಸ್ ಪ್ರಶ್ನೆಗೆ ಉತ್ತರಿಸಿ ಹೃದಯ ಗೆದ್ದ ಸೂರ್ಯಕುಮಾರ್

ಹೈದರಾಬಾದ್‌ನಲ್ಲಿ ನಟ ಜೂನಿಯರ್ ಎನ್‌ಟಿಆರ್ ಜೊತೆಗಿನ ಭಾರತೀಯ ಕ್ರಿಕೆಟಿಗರನ್ನು ಅಭಿಮಾನಿಗಳು ಗುರುತಿಸಿದ್ದಾರೆ. ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ಇದೀಗ ಫೋಟೋಗಳು ವೈರಲ್ ಆಗಿವೆ.

IND vs NZ: Indian Cricketers Met Telugu Actor Jr. NTR In Hyderabad

ಜೂನಿಯರ್ ಎನ್‌ಟಿಆರ್ ಕ್ಯಾಲಿಫೋರ್ನಿಯಾದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಗೋಲ್ಡನ್ ಗ್ಲೋಬ್ ಪ್ರಶಸ್ತಿಗಳಲ್ಲಿ ಭಾಗವಹಿಸಿದ್ದರು. ಅಲ್ಲಿ ಅವರು ಅಭಿನಯಿಸಿದ "ಆರ್‌ಆರ್‌ಆರ್‌' ಚಿತ್ರದ ಹಾಡಿಗಾಗಿ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ನ್ಯೂಜಿಲೆಂಡ್ ವಿರುದ್ಧ ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯ
ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಮೂರು ಏಕದಿನ ಪಂದ್ಯಗಳು ಮತ್ತು ಮೂರು ಟಿ20 ಪಂದ್ಯಗಳಲ್ಲಿ ತವರಿನಲ್ಲಿ ಸೆಣಸಾಟ ನಡೆಸಲು ಸಜ್ಜಾಗಿದೆ. 50 ಓವರ್‌ಗಳ ಸರಣಿಯ ಮೊದಲ ಪಂದ್ಯ ಬುಧವಾರ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಜನವರಿ 21 ಮತ್ತು 24ರಂದು ರಾಯ್‌ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣ ಮತ್ತು ಇಂದೋರ್‌ನ ಹೋಳ್ಕರ್ ಸ್ಟೇಡಿಯಂನಲ್ಲಿ ಕ್ರಮವಾಗಿ ಎರಡನೇ ಮತ್ತು ಮೂರನೇ ಏಕದಿನ ಪಂದ್ಯಗಳು ನಡೆಯಲಿವೆ.

2023ರ ಏಷ್ಯಾ ಕಪ್ ಆತಿಥ್ಯಕ್ಕಾಗಿ ಜಯ್ ಶಾ ಭೇಟಿ ಬಯಸಿದ ಪಿಸಿಬಿ ಮುಖ್ಯಸ್ಥ ನಜಮ್ ಸೇಥಿ2023ರ ಏಷ್ಯಾ ಕಪ್ ಆತಿಥ್ಯಕ್ಕಾಗಿ ಜಯ್ ಶಾ ಭೇಟಿ ಬಯಸಿದ ಪಿಸಿಬಿ ಮುಖ್ಯಸ್ಥ ನಜಮ್ ಸೇಥಿ

ಇನ್ನು ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಂದಿನ ಟಿ20 ಸರಣಿಯು ಜನವರಿ 27ರಿಂದ ರಾಂಚಿ, ಲಕ್ನೋ ಮತ್ತು ಅಹಮದಾಬಾದ್‌ನ ಕ್ರೀಡಾಂಗಣಗಳಲ್ಲಿ ಆಡಲಿದೆ. ಇತ್ತೀಚಿಗೆ ಶ್ರೀಲಂಕಾ ವಿರುದ್ಧ ಪ್ರಚಂಡ ಫಾರ್ಮ್ ಪ್ರದರ್ಶಿಸಿದ ಭಾರತ ತಂಡ, ಟಿ20 ಮತ್ತು ಏಕದಿನ ಸರಣಿಯನ್ನು ಗೆದ್ದರು.

IND vs NZ: Indian Cricketers Met Telugu Actor Jr. NTR In Hyderabad

ಪ್ರವಾಸಿ ನ್ಯೂಜಿಲೆಂಡ್ ತಂಡದ ವಿರುದ್ಧದ ಏಕದಿನ ಸರಣಿಗೆ ರೋಹಿತ್ ಶರ್ಮಾ ಆತಿಥೇಯ ತಂಡವನ್ನು ಮುನ್ನಡೆಸಲಿದ್ದರೆ, ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಭಾರತ ತಂಡದ ನಾಯಕನಾಗಿ ನೇಮಕಗೊಂಡಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಸರಣಿಗಳಿಗೆ ಭಾರತದ ಪ್ರತ್ಯೇಕ ತಂಡ
ಏಕದಿನ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.

ಟಿ20 ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಪೃಥ್ವಿ ಶಾ, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ (ಉಪನಾಯಕ), ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶ್‌ದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ, ಮುಖೇಶ್ ಕುಮಾರ್.

Story first published: Tuesday, January 17, 2023, 13:01 [IST]
Other articles published on Jan 17, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X