Paralympics 2024: ಶೂಟಿಂಗ್‌ನಲ್ಲಿ ಭಾರತಕ್ಕೆ ಡಬಲ್ ಪದಕ; ಅವನಿ ಲೆಖರಾ ಇತಿಹಾಸ
2024ರ ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಎರಡನೇ ದಿನ ಭಾರತ ಅದ್ದೂರಿ ಆರಂಭ ಮಾಡಿದೆ. ಎರಡು ಪದಕಗಳನ್ನು ಗೆಲ್ಲುವ ಮೂಲಕ ಭಾರತದ ಪ್ಯಾರಾ ಮಹಿಳಾ ಶೂಟರ್‌ಗಳು ವಿಶೇಷ ಸಾಧನೆ ಮಾಡಿದ್ದಾರೆ.
ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್‌ಎಚ್1 ವಿಭಾಗದ ಫೈನಲ್ ಪಂದ್ಯದಲ್ಲಿ ಭಾರತ ಅವನಿ ಲೆಖರಾ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಇನ್ನೊಂದೆಡೆ ಮೋನಾ ಅಗರ್ವಾಲ್ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದಾರೆ.
ಕಂಚಿನ ಪದಕದ ಸ್ಪರ್ಧೆಯಲ್ಲಿ ಮೋನಾ ಅಗರ್ವಾಲ್ 228.7 ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನ ಪಡೆದರು. ಕೊರಿಯಾದ ಲೀ ಯುನ್ರಿ 286.8 ಅಂಕಗಳೊಂದಿಗೆ ಬೆಳ್ಳಿ ಪದಕ ಗೆದ್ದರು.

ಅವನಿ ಇತಿಹಾಸ
ಪ್ಯಾರಾಲಿಂಪಿಕ್ಸ್‌ನಲ್ಲಿ ಅವನಿ ಲೆಖರಾ ಅವರು ಸತತ ಎರಡನೇ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಇದಕ್ಕೂ ಮುನ್ನ ಅವರು ಟೋಕಿಯೊ ಪ್ಯಾರಾಲಿಂಪಿಕ್ಸ್ 2020ರಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಇದರೊಂದಿಗೆ ಎರಡು ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಆದರೆ ಇದು ಮೋನಾ ಅಗರ್ವಾಲ್ ಅವರ ಮೊದಲ ಪ್ಯಾರಾಲಿಂಪಿಕ್ಸ್ ಆಗಿದ್ದು, ಚೊಚ್ಚಲ ಪದಕ ಗೆದ್ದು ಸಂಭ್ರಮಿಸಿದ್ದಾರೆ.
ಛಲ ಬಿಡದ ಸಾಧಕಿ
ಅವನಿ ಪ್ಯಾರಾಲಿಂಪಿಕ್ಸ್‌ನಲ್ಲಿ ಎರಡು ಚಿನ್ನದ ಪದಕಗಳನ್ನು ಗೆದ್ದ ಏಕೈಕ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2012ರಲ್ಲಿ ನಡೆದ ಕಾರು ಅಪಘಾತದಲ್ಲಿ ಅವರು ತಮ್ಮ ಕಾಲು ಕಳೆದುಕೊಂಡರು.
ಇದಾದ ನಂತರ ಗಾಲಿಕುರ್ಚಿಯನ್ನು ತನ್ನ ಸಂಗಾತಿಯನ್ನಾಗಿ ಮಾಡಿಕೊಂಡರು. ಧೃತಿಗೆಡದ ಅವರು 2015 ರಲ್ಲಿ ಜೈಪುರ ಶೂಟಿಂಗ್ ರೇಂಜ್‌ನಲ್ಲಿ ಮೊದಲ ಬಾರಿಗೆ ಸ್ಪರ್ಧೆ ಮಾಡಿದ್ದರು. ಈವೆಂಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದರು.
ಆರ್ಚರಿಯಲ್ಲಿ ವಿಶ್ವ ದಾಖಲೆ
ತಮ್ಮ ಚೊಚ್ಚಲ ಪ್ಯಾರಾಲಿಂಪಿಕ್ ಆಡುತ್ತಿರುವ 17 ವರ್ಷದ ಶೀತಲ್ ದೇವಿ ವಿಶ್ವ ದಾಖಲೆ ಬರೆದಿದ್ದಾರೆ. ಆರ್ಚರಿ ಶ್ರೇಯಾಂಕ ಸುತ್ತಿನಲ್ಲಿ ಅವರು 720 ಅಂಕಗಳಿಗೆ 702 ಅಂಕಗಳನ್ನು ಗಳಿಸುವ ಮೂಲಕ ಸಾಧನೆ ಗೈದಿದ್ದಾರೆ. ಆದರೆ ಇದೇ ವೇಳೆ ಟರ್ಕಿಯಾ ಓಜ್ನೊರ್ ಗಿರ್ಡಿ ಕ್ಯೂರ್ ಅವರು 704 ಅಂಕಗಳನ್ನು ಗಳಿಸಿ ಶೀತಲ್ ಅವರನ್ನು ಹಿಂದಿಕ್ಕಿ ಈ ದಾಖಲೆಯನ್ನು ತಮ್ಮ ಹೆಸರಿನಲ್ಲಿ ನೋಂದಾಯಿಸಿಕೊಂಡಿದ್ದಾರೆ.
ಶ್ರೇಯಾಂಕದಲ್ಲಿ 2ನೇ ಸ್ಥಾನದ ಪಡೆದಿರುವ ಶೀತಲ್ ಮುಂದಿನ ಸುತ್ತಿನಲ್ಲಿ ಬೈ ಸಿಕ್ಕದ್ದು, ನೇರವಾಗಿ ಕ್ವಾರ್ಟರ್ ಫೈನಲ್ ಪಂದ್ಯವನ್ನು ನಾಳೆ (ಆಗಸ್ಟ್ 31) ರಾತ್ರಿ 9 ಗಂಟೆಗೆ ಆಡಲಿದ್ದಾರೆ. ಈ ಸಾಧನೆಗೆ ಶೀತಲ್ ಅವರನ್ನು ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿನಂದಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications