ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts

ಇರಾನ್ ನಿಯಮ ವಿರೋಧಿಸಿ ಸ್ಪರ್ಧೆಯಿಂದ ದೂರಸರಿದ ಚೆಸ್ ತಾರೆ

indian chess player soumya withdraw Iran event over headscarf rule

ಪುಣೆ, ಜೂನ್ 13: ತಲೆಗೆ ಸ್ಕಾರ್ಫ್ ಧರಿಸುವುದು ಕಡ್ಡಾಯ ಎಂಬ ನಿಯಮವನ್ನು ಖಂಡಿಸಿ ಭಾರತದ ಚೆಸ್ ತಾರೆ ಸೌಮ್ಯಾ ಸ್ವಾಮಿನಾಥನ್ ಅವರು ಇರಾನ್‌ನಲ್ಲಿ ನಡೆಯಲಿರುವ ಏಷ್ಯಾ ಟೀಮ್ ಚೆಸ್ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸದೆ ಇರಲು ತೀರ್ಮಾನಿಸಿದ್ದಾರೆ.

ಇರಾನ್‌ನ ಹಮದಾನ್‌ನಲ್ಲಿ ಜೂನ್ 26ರಿಂದ ಆಗಸ್ಟ್ 4ರವರೆಗೆ ಚೆಸ್ ಚಾಂಪಿಯನ್‌ಷಿಪ್‌ ನಡೆಯಲಿದೆ. ಇರಾನ್‌ ಕಾನೂನಿನ ಪ್ರಕಾರ ಮಹಿಳೆಯರು ತಲೆಗೆ ಸ್ಕಾರ್ಫ್ ಕಟ್ಟಿಕೊಳ್ಳಬೇಕಿರುವುದು ಕಡ್ಡಾಯವಾಗಿರುವುದರಿಂದ ಅದು ತಮ್ಮ ವೈಯಕ್ತಿಕ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಈ ಕಾರಣದಿಂದ ಟೂರ್ನಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಸೌಮ್ಯಾ ಹೇಳಿದ್ದಾರೆ.

'ಚದುರಂಗದ ಕಿಂಗ್' ಗ್ಯಾರಿ ಕ್ಯಾಸ್ಪರೋವ್ ಮತ್ತೆ ಎಂಟ್ರಿǃ'ಚದುರಂಗದ ಕಿಂಗ್' ಗ್ಯಾರಿ ಕ್ಯಾಸ್ಪರೋವ್ ಮತ್ತೆ ಎಂಟ್ರಿǃ

ಈ ಕುರಿತು ಫೇಸ್‌ಬುಕ್ ಪುಟದಲ್ಲಿ ಬರೆದಿರುವ ಸೌಮ್ಯಾ, 'ಮಹಿಳೆಯರು ಕಡ್ಡಾಯವಾಗಿ ತಲೆಗೆ ಸ್ಕಾರ್ಫ್ ಧರಿಸಬೇಕೆಂಬ ಇರಾನ್‌ನ ಕಾನೂನು ನನ್ನ ಅಭಿವ್ಯಕ್ತಿ ಸ್ವಾತಂತ್ರ್ಯ, ಚಿಂತನೆ, ಆತ್ಮಸಾಕ್ಷಿ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಹಕ್ಕುಗಳು ಸೇರಿದಂತೆ ನನ್ನ ಮೂಲ ಮಾಣವ ಹಕ್ಕುಗಳನ್ನು ನೇರವಾಗಿ ಹತ್ತಿಕ್ಕುತ್ತದೆ.

ಇರಾನ್‌ ನಿಯಮ ವಿರೋಧಿಸಿ ಚೆಸ್‌ ಟೂರ್ನಿಯಿಂದ ಹೊರಬಂದ ಸೌಮ್ಯಾ

ಪ್ರಸ್ತುತದ ಸಂದರ್ಭದಲ್ಲಿ ನನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ನಾನು ಇರಾನ್‌ಗೆ ತೆರಳದೆ ಇರುವುದೇ ಸೂಕ್ತ ಎಂದೆನಿಸಿದೆ ಎಂಬುದಾಗಿ ಹೇಳಿದ್ದಾರೆ.

ಕ್ರೀಡಾಪಟುಗಳ ಮೇಲೆ ಧಾರ್ಮಿಕ ವಸ್ತ್ರಸಂಹಿತೆಯನ್ನು ಹೇರುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸಂಸಾರ ಚದುರಂಗಕ್ಕೆ ಅಡಿಯಿಟ್ಟ ಕೋನೇರು ಹಂಪಿ ಸಂಸಾರ ಚದುರಂಗಕ್ಕೆ ಅಡಿಯಿಟ್ಟ ಕೋನೇರು ಹಂಪಿ

ಅಧಿಕೃತ ಚಾಂಪಿಯನ್‌ಷಿಪ್‌ಗಳಲ್ಲಿ ನಾವು ರಾಷ್ಟ್ರೀಯ ತಂಡದ ದಿರಿಸು ಅಥವಾ ಕ್ರೀಡಾ ಉಡುಪನ್ನು ಧರಿಸಿರುವುದನ್ನು ಆಯೋಜಕರು ನಿರೀಕ್ಷಿಸುತ್ತಾರೆ. ಆದರೆ, ಕ್ರೀಡೆಯಲ್ಲಿ ಧಾರ್ಮಿಕ ವಸ್ತ್ರಸಂಹಿತೆಯನ್ನು ಬಲವಂತವಾಗಿ ಹೇರುವಂತಿಲ್ಲ ಎಂದಿದ್ದಾರೆ.

ವಸ್ತ್ರಸಂಹಿತೆಯ ನಿಯಮವನ್ನು ವಿರೋಧಿಸಿ ಭಾರತದ ಕ್ರೀಡಾಪಟು ಸ್ಪರ್ಧೆಯಲ್ಲಿ ಭಾಗವಹಿಸುವುದರಿಂದ ಹಿಂದೆ ಸರಿದಿರುವುದು ಇದು ಮೊದಲೇನಲ್ಲ.

2016ರಲ್ಲಿ ಭಾರತದ ಶೂಟರ್ ಹೀನಾ ಸಿಧು ಅವರು ಇರಾನ್‌ನಲ್ಲಿ ಆಯೋಜಿಸಿದ್ದ ಏಷ್ಯನ್ ಏರ್‌ಗನ್ ಸ್ಪರ್ಧೆಯಿಂದ ಇದೇ ಕಾರಣದಿಂದ ಹಿಂದಕ್ಕೆ ಸರಿದಿದ್ದರು.

Story first published: Wednesday, June 13, 2018, 15:13 [IST]
Other articles published on Jun 13, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X