ಒಲಿಂಪಿಕ್ಸ್‌ನಿಂದ ಮರಳುವವರಿಗೆ ಕೋವಿಡ್-19 ಪರೀಕ್ಷೆಯಿಂದ ವಿನಾಯಿತಿ

ಟೋಕಿಯೊ: ಟೋಕಿಯೋ ಒಲಿಂಪಿಕ್ಸ್ ಮುಗಿಸಿ ದೇಶಕ್ಕೆ ಮರಳುವ ಕ್ರೀಡಾಪಟುಗಳು, ಅಧಿಕಾರಿಗಳು ಮತ್ತು ಮಾಧ್ಯಮ ಸಿಬ್ಬಂದಿಗಳಿಗೆ ಜಪಾನಿನ ರಾಜಧಾನಿಯಿಂದ ನಿರ್ಗಮಿಸುವ ಮೊದಲು ಕೋವಿಡ್-19ಗಾಗಿ ನಡೆಸುವ ಆರ್‌ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿಗಳನ್ನು ಸಲ್ಲಿಸುವ ಅಗತ್ಯವಿಲ್ಲ ಎಂದು ಭಾರತ ಸರ್ಕಾರ ಭಾನುವಾರ (ಜುಲೈ 25) ತಿಳಿಸಿದೆ.
ಜಪಾನ್‌ನ ಟೋಕಿಯೋದಲ್ಲಿ ಜುಲೈ 23ರಿಂದ ಆರಂಭಗೊಂಡಿರುವ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಸುಮಾರು 127 ಅಥ್ಲೀಟ್‌ಗಳು ಪಾಲ್ಗೊಳ್ಳುತ್ತಿದ್ದಾರೆ. ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಮಾಧ್ಯಮದಲ್ಲಿ ಕೆಲಸ ಮಾಡುವವರನ್ನು ಲೆಕ್ಕ ಹಾಕಿದರೆ ಸಂಖ್ಯೆ ಇನ್ನೂ ದೊಡ್ಡದಾಗುತ್ತದೆ.
ಭಾರತೀಯ ಅಥ್ಲೀಟ್‌ಗಳು ಜಪಾನ್‌ನಿಂದ ಹೊರಡುವ ಮುನ್ನ ಆರ್‌ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಸಲ್ಲಿಸುವುದರಿಂದ ವಿನಾಯಿತಿ ನೀಡುವಂತೆ ಭಾರತ ಸರ್ಕಾರದ ಜೊತೆ ಭಾರತೀಯ ಒಲಿಂಪಿಕ್ಸ್ ಕಮಿಟಿಯ ಅಧ್ಯಕ್ಷ ನರೀಂದರ್ ಬಾತ್ರಾ ಕೇಳಿಕೊಂಡಿದ್ದರು.
ಭಾರತೀಯ ಒಲಿಂಪಿಕ್ಸ್ ಅಥ್ಲೀಟ್‌ಗಳಿಗೆ ಕೋವಿಡ್ ಪರೀಕ್ಷೆಯಿಂದ ವಿನಾಯಿತಿ ನೀಡುವಂತೆ ಒಲಿಂಪಿಕ್ಸ್ ಅಧ್ಯಕ್ಷ ಕೇಳಿಕೊಂಡಿರುವುದರಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹ ಕಾರ್ಯದರ್ಶಿ ಲವ ಅಗರ್ವಾಲ್ ಇದಕ್ಕೆ ಒಪ್ಪಿಗೆ ನೀಡಿ ನಿರ್ಧಾರ ಪ್ರಕಟಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications