Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Mary Kom: ನಾನು ಇನ್ನೂ ನಿವೃತ್ತಿ ಘೋಷಿಸಿಲ್ಲ: ಮೇರಿ ಕೋಮ್ ಸ್ಪಷ್ಟನೆ

ಭಾರತದ ಲೆಜೆಂಡರಿ ಮಹಿಳಾ ಬಾಕ್ಸರ್ ಮೇರಿ ಕೋಮ್ ಅವರು ಬುಧವಾರ, ಜನವರಿ 24ರಂದು ಬಾಕ್ಸಿಂಗ್‌ನಿಂದ ನಿವೃತ್ತಿ ನಿರ್ಧಾರ ಪ್ರಕಟಿಸಿರುವುದಾಗಿ ವರದಿಯಾಗಿದ್ದವು.

ಇದರ ಬೆನ್ನಲ್ಲೇ, ಗುರುವಾರ, ಜನವರಿ 25ರಂದು ಸ್ಪಷ್ಟನೆ ನೀಡಿರುವ ವಿಶ್ವ ಚಾಂಪಿಯನ್ ಬಾಕ್ಸರ್ ಮೇರಿ ಕೋಮ್ ತಾನು ಇನ್ನೂ ನಿವೃತ್ತಿ ಘೋಷಿಸಿಲ್ಲ ಎಂದು ಹೇಳಿದ್ದು, ನಿವೃತ್ತಿ ವರದಿಗಳನ್ನು ನಿರಾಕರಿಸಿದರು.

Indian Legendary Boxer Mary Kom Denies Retirement From Boxing

ಇದೇ ವೇಳೆ ಬುಧವಾರದ ಸಾರ್ವಜನಿಕ ಸಮಾರಂಭದಲ್ಲಿ ತಾವು ನೀಡಿದ ಹೇಳಿಕೆಯ ಬಗ್ಗೆ ಸ್ಪಷ್ಟಪಡಿಸಿದರು. ತಮ್ಮ ವಯಸ್ಸಿನ ಮಿತಿಯು ಮುಂಬರುವ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲು ಅವಕಾಶ ನೀಡುವುದಿಲ್ಲ ಎಂದು ಹೇಳಿರುವುದನ್ನು ಮೇರಿ ಕೋಮ್ ತಿಳಿಸಿದರು.

ಈ ಕುರಿತು ಮಾತನಾಡಿರುವ ಮೇರಿ ಕೋಮ್, "ನಾನು ಇನ್ನೂ ನಿವೃತ್ತಿ ಘೋಷಿಸಿಲ್ಲ ಮತ್ತು ನನ್ನ ಹೇಳಿಕೆಯನ್ನು ತಪ್ಪಾಗಿ ಉಲ್ಲೇಖಿಸಲಾಗಿದೆ. ನಾನು ನಿವೃತ್ತಿ ಘೋಷಿಸಲು ಬಯಸಿದಾಗ ನಾನೇ ವೈಯಕ್ತಿಕವಾಗಿ ಮಾಧ್ಯಮಗಳ ಮುಂದೆ ಬರುತ್ತೇನೆ".

"ನಾನು ನಿವೃತ್ತಿ ಘೋಷಿಸಿದ್ದೇನೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ನಿಜವಲ್ಲ, ನಾನು ಜನವರಿ 24ರಂದು ದಿಬ್ರುಗಢ್‌ನಲ್ಲಿ ಶಾಲಾ ಕಾರ್ಯಕ್ರಮಕ್ಕೆ ಹಾಜರಾಗಿದ್ದೆ, ಅದರಲ್ಲಿ ನಾನು ಮಕ್ಕಳನ್ನು ಪ್ರೇರೇಪಿಸುತ್ತಿದ್ದೆ ಮತ್ತು ನಾನು ಹೇಳಿದೆ, ನನಗೆ ಇನ್ನೂ ಕ್ರೀಡೆಯಲ್ಲಿ ಸಾಧನೆ ಮಾಡುವ ಹಸಿವಿದೆ. ಆದರೆ ಒಲಿಂಪಿಕ್ಸ್‌ನಲ್ಲಿನ ವಯಸ್ಸಿನ ಮಿತಿಯು ನನಗೆ ಭಾಗವಹಿಸಲು ಅವಕಾಶ ನೀಡುವುದಿಲ್ಲ. ನನ್ನ ಕ್ರೀಡೆಯೊಂದಿಗೆ ನಾನು ಇನ್ನೂ ನನ್ನ ಫಿಟ್ನೆಸ್ ಮೇಲೆ ಕೇಂದ್ರೀಕರಿಸುತ್ತಿದ್ದೇನೆ ಮತ್ತು ನಾನು ನಿವೃತ್ತಿಯನ್ನು ಘೋಷಿಸಿದಾಗ ನಾನು ಎಲ್ಲರಿಗೂ ತಿಳಿಸುತ್ತೇನೆ," ಎಂದು ಮೇರಿ ಕೋಮ್ ತಮ್ಮ ಹೇಳಿಕೆಯನ್ನು ಸ್ಪಷ್ಟಪಡಿಸಿದರು.

ಮೇರಿ ಕೋಮ್ 2012ರಲ್ಲಿ ಲಂಡನ್ ಒಲಿಂಪಿಕ್ಸ್‌ನಲ್ಲಿ 51 ಕೆಜಿ ವಿಭಾಗದಲ್ಲಿ ಕಂಚು ಗೆದ್ದಾಗ ಮಹಿಳಾ ಬಾಕ್ಸಿಂಗ್‌ನಲ್ಲಿ ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಬಾಕ್ಸರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಮೇರಿ ಕೋಮ್ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಮೊದಲು, ಅವರು ಈಗಾಗಲೇ 5 ಬಾರಿ ವಿಶ್ವ ಚಾಂಪಿಯನ್ ಆಗಿದ್ದರು. ಒಟ್ಟು ಆರು ಬಾರಿ ವಿಶ್ವ ಚಾಂಪಿಯನ್ ಆಗಿರುವ ಮೇರಿ ಕೋಮ್, 2021ರಲ್ಲಿ ನಡೆದ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಕೊನೆಯ ಬಾರಿಗೆ ಅತ್ಯುನ್ನತ ಮಟ್ಟದಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ.

8 ವಿಶ್ವ ಚಾಂಪಿಯನ್‌ಶಿಪ್ ಪದಕಗಳು ಮತ್ತು 7 ಏಷ್ಯನ್ ಚಾಂಪಿಯನ್‌ಶಿಪ್ ಪದಕಗಳು, 2 ಏಷ್ಯನ್ ಗೇಮ್ಸ್ ಪದಕಗಳು ಮತ್ತು ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕವನ್ನು ಮೇರಿ ಕೋಮ್ ಗೆದ್ದಿದ್ದಾರೆ.

Story first published: Thursday, January 25, 2024, 10:53 [IST]
Other articles published on Jan 25, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+