Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟೋಕಿಯೋ ಒಲಿಂಪಿಕ್ಸ್‌ನಿಂದ ಸ್ಟಾರ್ ಅಥ್ಲೀಟ್ ಹಿಮಾ ದಾಸ್ ಹೊರಕ್ಕೆ

Indian Sprinter Hima Das to miss Tokyo Olympics 2020 due to injury

ನವದೆಹಲಿ: ಭಾರತದ ಸ್ಟಾರ್ ಅಥ್ಲೀಟ್ ಹಿಮಾ ದಾಸ್ ಟೋಕಿಯೋ ಒಲಿಂಪಿಕ್ಸ್‌ನಿಂದ ಹೊರ ಬಿದ್ದಿದ್ದಾರೆ. ಗಾಯಕ್ಕೀಡಾಗಿರುವ ದಾಸ್ ಮುಂಬರಲಿರುವ ಒಲಿಂಪಿಕ್ಸ್‌ನಲ್ಲಿ ಪಾಲ್ಗಳ್ಳುತ್ತಿಲ್ಲವೆಂದು ಸ್ವತಃ ಅವರೇ ಸಾಮಾಜಿಕ ಜಾಲತಾಣದ ಮೂಲಕ ಮಂಗಳವಾರ (ಜುಲೈ 6) ತಿಳಿಸಿದ್ದಾರೆ.

ಟ್ವಿಟರ್ ಮತ್ತು ಫೇಸ್ಬುಕ್ ಪೇಜ್‌ನಲ್ಲಿ ಹಿಮಾ ದಾಸ್ ತಾನು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ತಿಳಿಸಿದ್ದಾರೆ. 'ನನ್ನ ಹೊಸ ಈವೆಂಟ್ 100 ಮೀಟರ್ ಮತ್ತು 200 ಮೀಟರ್‌ನಲ್ಲಿ ಅರ್ಹತೆ ಗಿಟ್ಟಿಸಿಕೊಳ್ಳಲು ಹತ್ತಿರದಲ್ಲಿದ್ದಾಗ ಅಕಾಲಿಕ ಗಾಯದಿಂದಾಗಿ ನನ್ನ ಮೊದಲ ಒಲಿಂಪಿಕ್ಸ್ ಅವಕಾಶವನ್ನು ನಾನು ಕಳೆದುಕೊಂಡಿದ್ದೇನೆ' ಎಂದು ದಾಸ್ ಬರೆದುಕೊಂಡಿದ್ದಾರೆ.

ಗಾನು ಗಾಯದಿಂದ ಚೇತರಿಸಿಕೊಂಡು ಬಲಿಷ್ಠಳಾಗಿ ಕಮ್‌ಬ್ಯಾಕ್‌ ಮಾಡುವುದಾಗಿ ದಾಸ್ ತನ್ನ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಾಮನ್ವೆಲ್ತ್ ಗೇಮ್ಸ್, ಏಷ್ಯನ್ ಗೇಮ್ಸ್ ಮತ್ತು ವಿಶ್ವ ಚಾಂಪಿಯನ್‌ಶಿಪ್‌ನತ್ತ ತಾನು ಗಮನ ಹರಿಸುವುದಾಗಿ ದಾಸ್ ತಿಳಿಸಿದ್ದಾರೆ. ಈ ಕ್ರೀಡಾಕೂಟಗಳು 2022ಕ್ಕೆ ನಡೆಯಲಿವೆ.

ಪಂಜಾಬ್‌ನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮಟ್ಟದ ಅಂತಾರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ 100 ಮೀ. ಹೀಟ್ಸ್‌ನಲ್ಲಿ ಪಾಲ್ಗೊಳ್ಳುವಾಗ ದಾಸ್‌ಗೆ ಸ್ನಾಯುಸೆಳೆತ ಕಾಣಿಸಿಕೊಂಡಿತ್ತು. ಹೀಗಾಗಿ ದಾಸ್ ಪ್ರತಿಷ್ಠಿತ ಕ್ರೀಡಾಕೂಟದಿಂದ ಹೊರಗುಳಿಯಬೇಕಾಗಿ ಬಂದಿದೆ.

Story first published: Tuesday, July 6, 2021, 19:49 [IST]
Other articles published on Jul 6, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+