ಭಾರತದ ಸ್ಟಾರ್ ಸ್ಪ್ರಿಂಟರ್ ಹಿಮಾ ದಾಸ್‌ಗೆ ಕೋವಿಡ್-19 ಪಾಸಿಟಿವ್

ನವದೆಹಲಿ: ಭಾರತದ ಸ್ಟಾರ್ ಓಟಗಾರ್ತಿ ಹಿಮಾ ದಾಸ್‌ಗೆ ಕೋವಿಡ್-19 ಪಾಸಿಟಿವ್ ಬಂದಿದೆ. ಹ್ಯಾಮ್‌ಸ್ಟ್ರಿಂಗ್ ಗಾಯಕ್ಕೀಡಾಗಿ ಚೇತರಿಸಿಕೊಳ್ಳುತ್ತಿರುವ ಹಿಮಾಗೆ ಕೋವಿಡ್ ಪಾಸಿಟಿವ್ ಬಂದಿರುವುದಾಗಿ ತಿಳಿದು ಬಂದಿದೆ. ಆದರೆ ದಾಸ್ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.

ಟಿ20 ವಿಶ್ವಕಪ್‌ ಇತಿಹಾಸದಲ್ಲಿ 6 ಮರೆಯಲಾಗದ ಘಟನೆಗಳಿವು!ಟಿ20 ವಿಶ್ವಕಪ್‌ ಇತಿಹಾಸದಲ್ಲಿ 6 ಮರೆಯಲಾಗದ ಘಟನೆಗಳಿವು!

21ರ ಹರೆಯದ ಹಿಮಾ ದಾಸ್ ಇತ್ತೀಚೆಗಷ್ಟೇ ಪಂಜಾಬ್‌ನ ಪಾಟಿಯಾಲದಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಸ್ಪೋರ್ಟ್ಸ್ (ಎನ್‌ಐಎಸ್)ನಲ್ಲಿ ನಡೆದ ಕ್ಯಾಂಪ್‌ನಲ್ಲಿ ಭಾಗವಹಿಸಿದ್ದರು. ತಾನು ಕೋವಿಡ್‌ಗೆ ಪಾಸಿಟಿವ್ ಆಗಿರುವ ಸಂಗತಿಯನ್ನು ಸ್ವತಃ ಹಿಮಾ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ.

ಟ್ವೀಟ್‌ ಮಾಡಿರುವ ದಾಸ್, "ನಾನು ಈ ಮೂಲಕ ಪ್ರತಿಯೊಬ್ಬರಿಗೂ ಒಂದು ವಿಚಾರ ತಿಳಿಸಬಯಸುತ್ತೇನೆ, ಅದೇನೆಂದರೆ ನನಗೆ ಕೋವಿಡ್-19 ಪಾಸಿಟಿವ್ ಬಂದಿದೆ. ಸದ್ಯ ನನ್ನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ನಾನೀಗ ಐಸೊಲೇಶನ್‌ನಲ್ಲಿದ್ದೇನೆ. ಆರೋಗ್ಯ ಚೇತರಿಕೆಗೆ ಮತ್ತು ಹಿಂದೆಂದಿಗಿಂತಲೂ ಹೆಚ್ಚು ಬಲಿಷ್ಠವಾಗಿ ಕಮ್‌ಬ್ಯಾಕ್‌ ಮಾಡಲು ನಾನೀ ಸಮಯವನ್ನು ಬಳಸಿಕೊಳ್ಳುತ್ತಿದ್ದೇನೆ. ಪ್ರತಿಯೊಬ್ಬರೂ ಸುರಕ್ಷಿತವಾಗಿರಿ, ಮಾಸ್ಕ್ ಧರಿಸಿ," ಎಂದು ಬರೆದುಕೊಂಡಿದ್ದಾರೆ.

ಟಿ20 ವಿಶ್ವಕಪ್‌: ಟೀಮ್ ಇಂಡಿಯಾ ಸೇರಿಕೊಳ್ಳಲಿದ್ದಾರೆ ಆವೇಶ್ ಖಾನ್ಟಿ20 ವಿಶ್ವಕಪ್‌: ಟೀಮ್ ಇಂಡಿಯಾ ಸೇರಿಕೊಳ್ಳಲಿದ್ದಾರೆ ಆವೇಶ್ ಖಾನ್

ಕಳೆದ ಆಗಸ್ಟ್‌ನಲ್ಲಿ ಮುಕ್ತಾಯಗೊಂಡ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ದಾಸ್ ಪಾಲ್ಗೊಂಡಿರಲಿಲ್ಲ. 200 ಮೀಟರ್ ಅರ್ಹತೆಯನ್ನು ಕಳೆದುಕೊಂಡಿದ್ದರಿಂದ ದಾಸ್‌ಗೆ ಒಲಿಂಪಿಕ್ಸ್ ಅವಕಾಶ ಕೈ ತಪ್ಪಿತ್ತು. 200 ಮೀ. ಅರ್ಹತಾ ಕಾಲಾವಧಿ 22.80 ಸೆಕೆಂಡ್ ಇತ್ತು. ಆದರೆ ಕಳೆದ ವರ್ಷ ಫೆಡರೇಶನ್‌ ಕಪ್‌ನಲ್ಲಿ ದಾಸ್ 23.21 ಸೆ. ಕಾಲಾವಧಿ ತೋರಿದ್ದರು. ಅಲ್ಲದೆ ದಾಸ್ ಈಚೆಗೆ ಗಾಯದ ಸಮಸ್ಯೆಯಿಂದಲೂ ಬಳಲುತ್ತಿದ್ದರು.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 5 - October 19 2021, 03:30 PM
ಸ್ಕಾಟ್ಲೆಂಡ್
ಪಪುವಾ ನ್ಯೂ ಗಿನಿವಾ
Predict Now

For Quick Alerts
ALLOW NOTIFICATIONS
For Daily Alerts
Story first published: Wednesday, October 13, 2021, 17:48 [IST]
Other articles published on Oct 13, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X