ಐಪಿಎಲ್ ಸಮಾರೋಪ ಸಮಾರಂಭದಲ್ಲಿ ಕೆಜಿಎಫ್ ಚಿತ್ರದ ಹಾಡಿಗೆ ಹೆಜ್ಜೆ ಹಾಕಿದ ರಣವೀರ್ ಸಿಂಗ್

15ನೇ ಆವೃತ್ತಿಯ ಐಪಿಎಲ್ ಫೈನಲ್ ಪಂದ್ಯದಲ್ಲಿ ಈ ಬಾರಿ ಗುಜರಾತ್ ಟೈಟನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಸೆಣಸಾಡಲಿವೆ. ಇಂದಿನ ಪಂದ್ಯವು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಈಗಾಗಲೇ ಪಂದ್ಯದ ಟಿಕೆಟ್‌ಗಳನ್ನು ಬಿಸಿಸಿಐ ಈಗಾಗಲೇ ಆನ್‌ಲೈನ್‌ನಲ್ಲಿ ಮಾರಾಟ ಮಾಡಿದೆ. ಕೊರೊನಾ ನಿರ್ಬಂಧಗಳನ್ನು ತೆಗೆದುಹಾಕುವುದರೊಂದಿಗೆ, 100 ಪ್ರತಿಶತ ಪ್ರೇಕ್ಷಕರ ನಡುವೆ ಪಂದ್ಯಗಳನ್ನು ನಡೆಸಲು ಸಿದ್ಧತೆ ಮಾಡಿಕೊಂಡಿದೆ. ಫೈನಲ್ ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿದ್ದು, ಐಪಿಎಲ್ 2022ರ ಸಮಾರೋಪ ಸಮಾರಂಭವು ಟಾಸ್‌ಗೆ ಒಂದು ಗಂಟೆ ಮೊದಲು ನಡೆಯಿತು. ಈ ವೇಳೆ ಬಾಲಿವುಡ್ ನಟ ರಣವೀರ್ ಸಿಂಗ್ ಮೈದಾನದಲ್ಲಿ ಹಾಕಲಾಗಿದ್ದ ಬೃಹತ್ ವೇದಿಕೆಯ ಮೇಲೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಐಪಿಎಲ್ ಸಮಾರೋಪ ಸಮಾರಂಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡದ ಪ್ಯಾನ್ ಇಂಡಿಯಾ ಚಲನಚಿತ್ರ, ರಾಕಿಂಗ್ ಯಶ್ ಅಭಿನಯದ 'ಕೆಜಿಎಫ್-2' ಚಿತ್ರದ ಹಾಡಿಗೆ ರಣವೀರ್ ಸಿಂಗ್ ಹೆಜ್ಜೆ ಹಾಕಿ ಗಮನಸೆಳೆದರು.
ಸಮಾರೋಪ ಸಮಾರಂಭದಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಬಿಸಿಸಿಐ ಗೌರವ ಕಾರ್ಯದರ್ಶಿ ಜಯ್ ಶಾ ಮತ್ತು ಐಪಿಎಲ್ ಅಧ್ಯಕ್ಷ ಬ್ರಿಜೇಶ್ ಪಟೇಲ್ ಸೇರಿದಂತೆ ಭಾರತದ ಮಾಜಿ ನಾಯಕರು ಭಾಗವಹಿಸಿದ್ದರು.
ಸಮಾರೋಪ ಸಮಾರಂಭದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ನೃತ್ಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದರೆ, ಸಂಗೀತ ಮಾಂತ್ರಿಕ, ಆಸ್ಕರ್ ವಿಜೇತ ಎಆರ್ ರೆಹಮಾನ್ ಸಂಗೀತ ಸಂಜೆ ಮೂಲಕ ನೆರೆದಿದ್ದ ಲಕ್ಷಾಂತರ ಪ್ರೇಕ್ಷಕರಿಗೆ ಸಂಗೀತ ರಸದೌತಣ ನೀಡಿದರು.
ಫೈನಲ್ ಪಂದ್ಯ ಆಡುವ 11ರ ಬಳಗ
ಗುಜರಾತ್ ಟೈಟನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಯಶ್ ದಯಾಲ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ.
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಓಬೇದ್ ಮೆಕಾಯ್, ಯುಜ್ವೇಂದ್ರ ಚಹಲ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications