For Quick Alerts
ALLOW NOTIFICATIONS  
For Daily Alerts

2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕ್ರಿಕೆಟ್- ಸಿನಿಮಾ ಲೋಕದ ಸ್ಟಾರ್ ದಂಪತಿ?

ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಕ್ರಿಕೆಟಿಗ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ ಭಾರತೀಯ ಚಿತ್ರರಂಗದ ಪ್ರತಿಭಾನ್ವಿತ ನಟಿ ಅನುಷ್ಕಾ ಶರ್ಮಾ ದಂಪತಿಗಳು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ? ಹೌದು ಎನ್ನುತ್ತಿವೆ ಕೆಲ ವರದಿಗಳು. ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಗರ್ಭಿಣಿಯಾಗಿದ್ದು ಹಾಗಾಗಿಯೇ ಅವರು ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ ಎಂದು ವರದಿಯಾಗಿದೆ.

ಅಂದಹಾಗೆ ಒಂದು ತಿಂಗಳ ಹಿಂದೆಯೇ 'ರೆಡ್ಡಿಟ್' ನಟಿ ಅನುಷ್ಕಾ ಶರ್ಮಾ ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ಬಗ್ಗೆ ರೂಮರ್‌ಗಳನ್ನು ಪ್ರಕಟಿಸಿತ್ತು. ಇದೀಗ ಹಿಂದೂಸ್ತಾನ್ ಟೈಮ್ಸ್ ಈ ಬಗ್ಗೆ ವರದಿ ಮಾಡಿದ್ದು ಆ ರೂಮರ್‌ಗಳು ನಿಜವಾಗಿರುವ ಸಾಧ್ಯತೆಯಿದೆ ಎಂದು ವರದಿ ಮಾಡಿದೆ. ಮುಂದಿನ ದಿನಗಳಲ್ಲಿ ಸ್ಟಾರ್ ದಂಪತಿಯೇ ಈ ವಿಚಾರವನ್ನು ಅಧಿಕೃತವಾಗಿ ಬಹಿರಂಗಪಡಿಸಲಿದ್ದಾರೆ ಎನ್ನಲಾಗಿದೆ.

Virat Kohli Anushka Sharma

ಈಗಾಗಲೇ ಒಂದು ಮಗುವಿನ ತಾಯಿಯಾಗಿರುವ ಅನುಷ್ಕಾ ಶರ್ಮಾ ಮೊದಲ ಮಗುವಿನ ತಾಯಿಯಾಗುವ ಸಂಗತಿಯನ್ನು ಮಾಧ್ಯಮಗಳ ಮುಂದೆ ಅಧಿಕೃತವಾಗಿ ಹೇಳಿಕೊಂಡಿದ್ದರು. ಅದೇ ಈತಿಯಾಗಿ ಈ ಬಾರಿಯೂ ಕೊಹ್ಲಿ ದಂಪತಿಗಳು ಮಾಧ್ಯಮಗಳ ಮುಂದೆ ಈ ಬಗ್ಗೆ ಹೇಳಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

ಇನ್ನು ಅನುಷ್ಕಾ ಶರ್ಮಾ ಇತ್ತೀಚೆಗೆ ಬಹಿರಂಗವಾಗಿ ಕಾಣಿಸಿಕೊಳ್ಳುವುದು ಬಹಳ ಕಡಿಮೆಯಾಗಿದೆ. ಅಲ್ಲದೆ ವಿರಾಟ್ ಕೊಹ್ಲಿ ಜೊತೆಗೂ ಅವರು ಪ್ರಯಾಣವನ್ನು ಮಾಡುತ್ತಿಲ್ಲ. ಹಾಗಾಗಿ ಅನುಷ್ಕಾ ಗರ್ಭಿಣಿಯಾಗಿರುವುದೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ.

ಮತ್ತೊಂದು ಅಂಶವೆಂದರೆ ಇತ್ತೀಚೆಗೆ ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮುಂಬೈನ ಹೆರಿಗೆ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದ್ದು ಈ ಸಂದರ್ಭದಲ್ಲಿ ಅಲ್ಲಿದ್ದ ಪಾಪರಾಜಿಗಳಲ್ಲಿ ದಂಪತಿ ಫೋಟೋಗಳನ್ನು ಬಹಿರಂಗಪಡಿಸದಂತೆ ಮನವಿ ಮಾಡಿದ್ದರು ಎನ್ನಲಾಗಿದೆ. ಇನ್ನು ಇದೇ ಸಂದರ್ಭದಲ್ಲಿ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಈ ಬಗ್ಗೆ ತಾವೇ ಘೋಷಣೆ ಮಾಡುವುದಾಗಿ ಹೇಳಿಕೊಂಡಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ.

ಮದುವೆಗೂ ಮುನ್ನ ಕೆಲ ವರ್ಷಗಳ ಕಾಲ ಪ್ರೀತಿಯಲ್ಲಿದ್ದ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ 2017ರ ಡಿಸೆಂಬರ್ 11ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. 2021ರಲ್ಲಿ ಈ ದಂಪತಿಗೆ ಹೆಣ್ಣು ಮಗು ಜನಿಸಿತ್ತು.

Story first published: Saturday, September 30, 2023, 13:53 [IST]
Other articles published on Sep 30, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+