ಜುಲೈ 25: ಹರ್ಮನ್‌ಗೆ 2 ಪಂದ್ಯ ನಿಷೇಧ; ಏಕದಿನ ಸರಣಿಗೆ ವಿಂಡೀಸ್ ತಂಡ ಪ್ರಕಟ: ಕ್ರೀಡಾ ಲೋಕದ ಇಂದಿನ ಸುದ್ದಿ
* ಆತಿಥೇಯ ವೆಸ್ಟ್ ಇಂಡೀಸ್ ತಮ್ಮ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ಏಕದಿನ ವಿಶ್ವಕಪ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದ್ದು, ಸದ್ಯ ಅವರ ಪರಿಸ್ಥಿತಿ ಹೀನಾಯ ಸ್ಥಿತಿಯಲ್ಲಿದೆ. ನಿರಾಶಾದಾಯಕ ಏಕದಿನ ವಿಶ್ವಕಪ್ 2023ರ ಅರ್ಹತಾ ಪಂದ್ಯಾವಳಿಯ ಇಬ್ಬರು ಆಟಗಾರರಾದ ನಿಕೋಲಸ್ ಪೂರನ್ ಮತ್ತು ಜೇಸನ್ ಹೋಲ್ಡರ್ ಅವರನ್ನು ಭಾರತದ ವಿರುದ್ಧ ಏಕದಿನ ಸರಣಿಗೆ ಕೈಬಿಡಲಾಗಿದೆ.
* ವಿಂಡೀಸ್ ತಂಡ ಹೀಗಿದೆ: ಶಾಯ್ ಹೋಪ್ (ನಾಯಕ), ರೋವ್ಮನ್ ಪೊವೆಲ್ (ಉಪನಾಯಕ), ಅಲಿಕ್ ಅಥಾನಾಜೆ, ಯಾನಿಕ್ ಕ್ಯಾರಿಯಾ, ಕೀಸಿ ಕಾರ್ಟಿ, ಡೊಮಿನಿಕ್ ಡ್ರೇಕ್ಸ್, ಶಿಮ್ರಾನ್ ಹೆಟ್ಮೆಯರ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಗುಡಾಕೇಶ್ ಮೋಟಿ, ಜೇಡನ್ ಸೀಲ್ಸ್, ರೊಮಾರಿಯೊ ಶೆಫರ್ಡ್, ಕೆವಿನ್ ಸಿಂಕ್ಲೇರ್, ಓಶೇನ್ ಥಾಮಸ್.

* ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ನಡೆದುಕೊಂಡ ರೀತಿಗೆ ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್‌ಗೆ ಎರಡು ಅಂತಾರಾಷ್ಟ್ರೀಯ ಪಂದ್ಯಗಳ ನಿಷೇಧ ಹೇರಲಾಗಿದೆ. ಅಲ್ಲದೆ ಪಂದ್ಯದ ಸಂಭಾವನೆಯ ಶೇಕಡಾ 75ರಷ್ಟು ದಂಡವನ್ನು ಕೂಡ ವಿಧಿಸಲಾಗಿದೆ. ಬಾಂಗ್ಲಾದೇಶ ವಿರುದ್ಧದ ಸರಣಿಯ ಕೊನೆಯ ಪಂದ್ಯದಲ್ಲಿ ಹರ್ಮನ್ ಪ್ರೀತ್ ಎರಡು ಪ್ರತ್ಯೇಕ ನಿಯಮಗಳನ್ನು ಉಲ್ಲಂಘಿಸಿದ ಪರಿಣಾಮವಾಗಿ ಈ ಶಿಕ್ಷೆಗೆ ಗುರಿಯಾಗಿದ್ದಾರೆ.
* ಮಂಗಳವಾರ, ಜುಲೈ 25ರಂದು ನಡೆದ 2023ರ ಮೇಜರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಟೆಕ್ಸಾಸ್ ಸೂಪರ್ ಕಿಂಗ್ಸ್ (ಟಿಎಸ್‌ಕೆ) ತಂಡವು ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ (ಎಸ್‌ಎಫ್‌ಯು) ತಂಡದ ವಿರುದ್ಧ 3 ವಿಕೆಟ್‌ಗಳ ಜಯ ಸಾಧಿಸಿ, ಪ್ಲೇಆಫ್‌ಗೆ ಪ್ರವೇಶ ಪಡೆಯಿತು.
* ಎಂಎಸ್ ಧೋನಿಯ ಬೈಕ್ ಕಾರುಗಳನ್ನು ಸಂಗ್ರಹಿಸುವ ಹವ್ಯಾಸದ ಬಗ್ಗೆ ಕ್ರಿಕೆಟ್ ಅಭಿಮಾನಿಗಳೆಲ್ಲರಿಗೂ ಮಾಹಿತಿ ಇದ್ದೇ ಇದೆ. ಇತ್ತೀಚೆಗೆ ಮಾಜಿ ಕ್ರಿಕೆಟಿಗರಾದ ವೆಂಕಟೇಶ್ ಪ್ರಸಾದ್ ಹಾಗೂ ಸುನಿಲ್ ಜೋಶಿ ಧೋನಿ ನಿವಾಸಕ್ಕೆ ಭೇಟಿ ನೀಡಿದ್ದಾಗ ಅವರ ಬೈಕ್ ಹಾಗೂ ಕಾರುಗಳ ಸಂಗ್ರಹದ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು. ಇದೀಗ ಸ್ವತಃ ಧೋನಿ ರೋಲ್ಸ್ ರಾಯ್ಸ್ ಕಾರಿನಲ್ಲಿ ಸುತ್ತಾಡಿದ ವಿಡಿಯೋ ಕೂಡ ವೈರಲ್ ಆಗಿದೆ.
* ವಿಶ್ವಕಪ್‌ಗೆ 15 ಸದಸ್ಯರ ತಂಡ ಆಯ್ಕೆ ಮಾಡಿದ ವಾಸಿಂ ಜಾಫರ್
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್.
* ಬ್ಯಾಡ್ಮಿಂಟನ್‌ನ ಸ್ಟಾರ್ ಜೋಡಿಯಾದ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ. ಭಾರತದ ಈ ಜೋಡಿ ಪುರುಷರ ಡಬಲ್ಸ್‌ನಲ್ಲಿ ಎರಡನೇ ಶ್ರೇಯಾಂಕವನ್ನು ಪಡೆದುಕೊಂಡಿದ್ದು ವೃತ್ತಿ ಜೀವನದ ಅತ್ಯಯನ್ನತ ಶ್ರೇಯಾಂಕವನ್ನು ಪಡೆದುಕೊಂಡಂತಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications