For Quick Alerts
ALLOW NOTIFICATIONS  
For Daily Alerts

ಜುಲೈ 26: ಏಷ್ಯಾಡ್‌ನಲ್ಲಿ ಆಡಲಿದೆ ಫುಟ್ಬಾಲ್ ತಂಡ, ಭಾರತ ಪಾಕ್ ಪಂದ್ಯ ಸ್ಥಳಾಂತರ?: ಕ್ರೀಡಾ ಲೋಕದ ಇಂದಿನ ಸುದ್ದಿ

* ಸಾಂಪ್ರದಾಯಿಕ ಎದುರಾಳಿಗಳು ಅಕ್ಟೋಬರ್ 15ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ ಎಂದು ಐಸಿಸಿ ವೇಳಾಪಟ್ಟಿಯಲ್ಲಿ ತಿಳಿಸಲಾಗಿದೆ. ಆದರೆ, ದಿನಾಂಕದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಈಗಿರುವ ವೇಳಾಪಟ್ಟಿಯ ದಿನಾಂಕವು ನವರಾತ್ರಿಯ ಆರಂಭದ ದಿನವಾಗಿದ್ದು ಗುಜರಾತಿನಾದ್ಯಂತ ನವರಾತ್ರಿಯನ್ನು ಜನರು ಸಾಮೂಹಿಕವಾಗಿ ಆಚರಿಸಲಾಗುತ್ತದೆ. ಹೀಗಾಗಿ, ಭದ್ರತಾ ಪಡೆಗಳು ಬಿಸಿಸಿಐ ಮತ್ತು ಐಸಿಸಿಗೆ ದಿನಾಂಕವನ್ನು ಬದಲಾಯಿಸುವ ಬಗ್ಗೆ ಈಗಾಗಲೇ ಸಲಹೆ ನೀಡಿವೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ನಿರ್ಧಾರದ ತೆಗೆದುಕೊಳ್ಳಲಿದೆ.

* ಮೂರು ಪಂದ್ಯಗಳ ಏಕದಿನ ಸರಣಿ ನಾಳೆ(ಜುಲೈ 27 ಶುಕ್ರವಾರ)ಯಿಂದಲೇ ಆರಂಭವಾಗಲಿದೆ. ಸರಣಿಯ ಮೊದಲ ಪಂದ್ಯ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ಆಯೋಜನೆಯಾಗಲಿದೆ. ಎರಡನೇ ಪಂದ್ಯ ಜುಲೈ 29ರಂದು ನಡೆಯಲಿದ್ದು ಈ ಪಂದ್ಯವೂ ಬಾರ್ಡೋಸ್‌ನಲ್ಲಿಯೇ ನಡೆಯಲಿದೆ. ಇನ್ನು ಸರಣಿಯ ಕೊನೆಯ ಪಂದ್ಯ ಟ್ರಿನಿಡಾಡ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಆಯೋಜನೆಯಾಗಲಿದ್ದು ಆಗಸ್ಟ್ 1ರಂದು ಈ ಪಂದ್ಯ ನಡೆಯಲಿದೆ.

July 26 what happened in sports World: Todays Top sports news and headlines

* ಇದೀಗ ಭಾರತ ತಂಡದ ಮಾಜಿ ನಾಯಕ ಮತ್ತು ಭಾರತಕ್ಕೆ ವಿಶ್ವಕಪ್ ಜಯಿಸಿಕೊಟ್ಟ ಮೊದಲ ನಾಯಕ ಕಪಿಲ್ ದೇವ್ ಅವರು ಭಾರತದ ಅವಕಾಶಗಳ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎಲ್ಲ ಕಡೆಯಿಂದ ಬರುತ್ತಿರುವ ನಿರೀಕ್ಷೆಗಳ ಒತ್ತಡವನ್ನು ಹೇಗೆ ನಿಭಾಯಿಸಬೇಕು ಎಂಬುದರ ಕುರಿತು ತಂಡಕ್ಕೆ ಕೆಲವು ಸಲಹೆ ನೀಡಿದ್ದಾರೆ. ಎರಡು ಬಾರಿ ಚಾಂಪಿಯನ್ ಆಗಿರುವ ಭಾರತ ತಂಡ 12 ವರ್ಷಗಳ ನಂತರ ಮತ್ತೊಮ್ಮೆ ವಿಶ್ವಕಪ್ ಗೆಲ್ಲುವ ಗುರಿ ಹೊಂದಿದೆ. ಕರ್ನಾಟಕ ಗಾಲ್ಫ್ ಅಸೋಸಿಯೇಷನ್‌ನಲ್ಲಿ ಚಾಲನೆ ನೀಡಿ ಮಾತನಾಡಿದ ಕಪಿಲ್ ದೇವ್, ಐಸಿಸಿ ಟೂರ್ನಿಯಲ್ಲಿ ಭಾರತವನ್ನು ದೊಡ್ಡ ಫೇವರಿಟ್ ಎಂದು ಪರಿಗಣಿಸಲಾಗಿದೆ.

* ಭಾರತ ತಂಡದ ಯುವ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರು ಬುಧವಾರ ಬಿಡುಗಡೆಯಾದ ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ‌ ತಮ್ಮ ಏರಿಕೆಯನ್ನು ಮುಂದುವರೆಸಿದ್ದು, 11 ಸ್ಥಾನಗಳನ್ನು ಮೇಲಕ್ಕೇರಿ 63ನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ. ಇನ್ನು ಭಾರತದ ನಾಯಕ ರೋಹಿತ್ ಶರ್ಮಾ ಬ್ಯಾಟರ್‌ಗಳ ಪಟ್ಟಿಯಲ್ಲಿ 9ನೇ ಸ್ಥಾನ ತಲುಪಿದ್ದಾರೆ. ಪೋರ್ಟ್ ಆಫ್ ಸ್ಪೇನ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಡ್ರಾಗೊಂಡ ಎರಡನೇ ಟೆಸ್ಟ್ ಪಂದ್ಯದಲ್ಲಿ 57 ಮತ್ತು 38 ರನ್ ಗಳಿಸಿದ 21 ವರ್ಷದ ಯಶಸ್ವಿ ಜೈಸ್ವಾಲ್ 466 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದಾರೆ.

* ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಗುರುವಾರ ಆರಂಭವಾಗಲಿದೆ. ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ಈ ಪಂದ್ಯ ಆಯೋಜನೆಯಾಗಲಿದ್ದು ಎರಡು ತಂಡಗಳು ಕೂಡ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಆಸ್ಟ್ರೇಲಿಯಾ 2-1 ಅಂತರದಿಂದ ಮುನ್ನಡೆಯಲ್ಲಿದ್ದು ಎರಡು ದಶಕದ ಬಳಿಕ ಇಂಗ್ಲೆಂಡ್ ನೆಲದಲ್ಲಿ ಆಶಸ್ ಗೆಲ್ಲುವ ಕನಸು ಕಾಣುತ್ತಿದ್ದರೆ ಇಂಗ್ಲೆಂಡ್ ತಂಡ ಸರಣಿ ಸಮಬಲಗೊಳಿಸುವ ಪ್ರಯತ್ನ ನಡೆಸಲಿದೆ.

Story first published: Wednesday, July 26, 2023, 23:57 [IST]
Other articles published on Jul 26, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+