ಜುಲೈ 30: ಕ್ರಿಕೆಟಿಗರ ಮೇಲೆ ಕಪಿಲ್ ಕಿಡಿ; ಮುಂಬೈ ಇಂಡಿಯನ್ಸ್‌ಗೆ ಮತ್ತೊಂದು ಟ್ರೋಫಿ: ಕ್ರೀಡಾ ಲೋಕದ ಇಂದಿನ ಸುದ್ದಿ
* 1983ರ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಈಗಿನ ಆಟಗಾರರಲ್ಲಿ ಹಣ ಮತ್ತು ದುರಹಂಕಾರದ ಬಗ್ಗೆ ಟೀಕೆಗಳನ್ನು ಮಾಡಿದ್ದಾರೆ. ಆಟಗಾರರು ಭಾರತೀಯ ದಂತಕಥೆ ಸುನಿಲ್ ಗವಾಸ್ಕರ್ ಅವರಂತವರ ಮಾರ್ಗದರ್ಶನವನ್ನು ಏಕೆ ಪಡೆಯುವುದಿಲ್ಲ ಎಂದು ಪ್ರಶ್ನಿಸಿದರು. "ಕೆಲ ಸಂದರ್ಭಗಳಲ್ಲಿ ಬಹಳ ಹಣ ಬಂದರೆ ಅದರ ಜೊತೆಗೆ ಅಹಂಕಾರವೂ ಬರುತ್ತದೆ. ಈ ಕ್ರಿಕೆಟಿಗರು ತಮಗೆ ಎಲ್ಲವೂ ಗೊತ್ತಿದೆ ಎಂದುಕೊಂಡಿದ್ದಾರೆ. ಅದುವೇ ಭಿನ್ನತೆ. ಸಹಾಯದ ಅಗತ್ಯವಿರುವ ಬಹಳ ಆಟಗಾರರು ಇದ್ದಾರೆ ಎಂದು ನಾನು ಹೇಳಬಲ್ಲೆ. ಸುನಿಲ್ ಗವಾಸ್ಕರ್ ಅವರಂಥಾ ಆಟಗಾರ ಇದ್ದಾಗ ಯಾಕೆ ನೀವು ಅವರಿಂದ ಸಹಾಯ ಕೇಳುವುದಿಲ್ಲ? ಅಹಂಕಾರ ಯಾಕೆ? ಅಷ್ಟು ಅಹಂಕಾರ ಇರಬಾರದು" ಎಂದಿದ್ದಾರೆ ಕಪಿಲ್ ದೇವ್(ಸಂಪೂರ್ಣ ವರದಿಗೆ ಇಲ್ಲಿ ಕ್ಲಿಕ್ ಮಾಡಿ)
* ಚೊಚ್ಚಲ ಆವೃತ್ತಿಯ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಮಾಲಿಕತ್ವದ ಎಂಐ ನ್ಯೂಯಾರ್ಕ್ ತಂಡ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿದೆ. ನಿಕೋಲಸ್ ಪೂರನ್ ಅವರ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನದಿಂದಾಗಿ MINY ತಂಡ ಸಿಯಾಟಲ್ ಓರ್ಕಾಸ್ ತಂಡವನ್ನು ಬರೊಬ್ಬರಿ 7 ವಿಕೆಟ್‌ಗಳ ಅಂತರದಿಂದ ಮಣಿಸಿ ಚಾಂಪಿಯನ್ ಎನಿಸಿಕೊಂಡಿದೆ. ಈ ವರ್ಷ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಗೆ ಅದ್ಭುತ ಯಶಸ್ಸಿನ ವರ್ಷವಾಗಿದೆ. ಚೊಚ್ಚಲ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ಮುಂಬೈ ಇಂಡಿಯನ್ಸ್ ಇದೀಗ ವರ್ಷದ ಎರಡನೇ ಲೀಗ್‌ನಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.

* ಭಾರತದಲ್ಲಿ ನಡೆಯಲಿರುವ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯಲ್ಲಿ ಬದಲಾವಣೆಯಾಗುವುದು ದೃಢಪಟ್ಟಿದೆ. ಅಕ್ಟೋಬರ್ 15ರಂದು ನಡೆಯಬೇಕಿದ್ದ ಈ ಪಂದ್ಯವನ್ನು ಭದ್ರತಾ ದೃಷ್ಟಿಯಿಂದ ಬದಲಾವಣೆ ಮಾಡಬೇಕು ಎಂಬ ಅಭಿಪ್ರಾಯಗಳು ಕೇಳಿಬಂದಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು ಈಗ ವೇಳಾಪಟ್ಟಿಯಲ್ಲಿರುವ ದಿನಾಂಕಕ್ಕಿಂತ ಒಂದು ದಿನ ಮುಂಚಿತವಾಗಿಯೇ ಈ ಪಂದ್ಯ ಆಯೋಜನೆಯಾಗಲಿದೆ. ಬದಲಾದ ವೇಳಾಪಟ್ಟಿ ಅಧಿಕೃತವಾಗಿ ಇನ್ನಷ್ಟೇ ಘೋಷಣೆಯಾಗಲಿದೆ.
* 3ನೇ ಏಕದಿನ ಪಂದ್ಯವು ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಲು ಸೂರ್ಯಕುಮಾರ್ ಯಾದವ್‌ಗೆ ಅಂತಿಮ ಅವಕಾಶವಾಗಿದೆ ಎಂದು ಭಾರತದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ವಾಸಿಂ ಜಾಫರ್ ತಿಳಿಸಿದ್ದಾರೆ. "ಸೂರ್ಯಕುಮಾರ್ ಯಾದವ್ ಬಹುಶಃ ಮೂರನೇ ಏಕದಿನ ಪಂದ್ಯದಲ್ಲಿ ಇನ್ನೂ ಒಂದು ಅವಕಾಶವನ್ನು ಪಡೆಯುತ್ತಾರೆ ಮತ್ತು ವಿಶ್ವಕಪ್ ವೇಳೆಗೆ ನಾಲ್ಕನೇ ಸ್ಥಾನಕ್ಕೆ ಬಹುಶಃ ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಹಿಂತಿರುಗುತ್ತಾರೆ. ನಂತರ ಸೂರ್ಯಕುಮಾರ್ ತಂಡಕ್ಕೆ ಬರಲು ಕಷ್ಟವಾಗುತ್ತದೆ," ಎಂದು ವಾಸಿಂ ಜಾಫರ್ ಹೇಳಿದರು.
* ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿಗೆ ಮತ್ತೊಮ್ಮೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ವರದಿಗಳ ಪ್ರಕಾರ, ವಿರಾಟ್ ಕೊಹ್ಲಿ ಅವರು ಭಾರತ ತಂಡದೊಂದಿಗೆ ಟ್ರಿನಿಡಾಡ್‌ಗೆ ಪ್ರಯಾಣಿಸಿಲ್ಲ ಎಂಬುದನ್ನು ಗಮನದಲ್ಲಿಟ್ಟುಕೊಂಡು ಆಡುವ 11ರ ಬಳಗದಿಂದ ಹೊರಗಿಡಲಾಗುತ್ತದೆಯೇ ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ತಿಳಿದುಬಂದಿಲ್ಲ.
* ಇಂಗ್ಲೆಂಡ್ ತಂಡದ ದಿಗ್ಗಜ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ನಿವೃತ್ತಿಯ ವಿಚಾರವಾಗಿ ಮಾತನಾಡಿದ್ದು ಸ್ಪಷ್ಟನೆ ನೀಡಿದ್ದಾರೆ. ಸದ್ಯಕ್ಕೆ ನಿವೃತ್ತಿಯ ಬಗ್ಗೆ ನಾನು ಯೋಚನೆ ಮಾಡಿಲ್ಲ ಎಂದು ಆಂಡರ್ಸನ್ ಹೇಳಿದ್ದು ಇನ್ನಷ್ಟು ಕಾಲ ಆಡುವ ಇಚ್ಚೆಯಿದೆ ಎಂದು ಹೇಳಿಕೊಂಡಿದ್ದಾರೆ. ಈ ಮೂಲಕ ಬ್ರಾಡ್ ನಿವೃತ್ತಿಯ ಬಳಿಕ ಆಂಡರ್ಸನ್ ವಿಚಾರವಾಗಿ ನಡೆಯುತ್ತಿರುವ ಚರ್ಚೆಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪಂದ್ಯದ ಕೊನೆಯ ದಿನದಾಟ ಆರಂಭಕ್ಕೂ ಮುನ್ನ ಸ್ಕೈ ಸ್ಪೋರ್ಟ್ಸ್ ಜೊತೆಗೆ ಮಾತನಾಡಿದ ಆಂಡರ್ಸನ್ "ನಾನು ಸಾಕಷ್ಟು ಸದೃಢವಾಗಿದ್ದು ಮುಂದುವರಿಯಲು ಬಯಸುತ್ತೇನೆ. ನಾನ್ನ ದೇಹ ಚೆನ್ನಾಗಿದೆ, ನನ್ನ ಕೌಶಲ್ಯಗಳು ಉತ್ತಮವಾಗಿದೆ. ನನ್ನಿಂದ ನಿರೀಕ್ಷಿಸಿದ ಮಟ್ಟದ ಬೌಲಿಂಗ್ ಪ್ರದರ್ಶನ ನೀಡಲು ಸಾಧ್ಯವಾಗದಿದ್ದರು ಕೂಡ ನಾನು ಬೌಲಿಂಗನ್ನು ಉತ್ತಮವಾಗಿಯೇ ಮಾಡುತ್ತಿದ್ದೇನೆ" ಎಂದಿದ್ದಾರೆ ಜೇಮ್ಸ್ ಆಂಡರ್ಸನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications