ಕರ್ನಾಟಕ ಬಜೆಟ್: ಮಂಡ್ಯ ಕ್ರೀಡಾಂಗಣ ಅಭಿವೃದ್ಧಿಗೆ 10 ಕೋ.ರೂ. ಘೋಷಣೆ

ಬೆಂಗಳೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾರ್ಚ್ 8ರ ಸೋಮವಾರ 2021ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಕೃಷಿ, ನೀರಾವರಿ, ಮೂಲಭೂತ ಸೌಕರ್ಯ ಅಭಿವೃದ್ಧಿ, ಮಹಿಳಾ ಸಬಲೀಕರಣ ಇತ್ಯಾದಿಗಳಿಗೆ ಸಂಬಂಧಿಸಿ ಹಲವಾರು ಯೋಜನೆಗಳನ್ನು ಈ ವೇಳೆ ಘೋಷಿಸಲಾಗಿದೆ.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಾಗಿರುವುದರಿಂದ ಈ ಬಾರಿಯ ಬಜೆಟ್ ವೇಳೆ ಮಹಿಳಾ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆಗಳನ್ನು ನೀಡಿದ್ದು ಕಂಡುಬಂತು. ಆನ್‌ಲೈನ್ ಮಾರುಕಟ್ಟೆ, ಭದ್ರತೆ, ಸ್ವಾವಲಂಬನೆಗೆ ಸಂಬಂಧಿಸಿ ಮಹಿಳೆಯರಿಗೆ ಹಲವಾರು ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸಲಾಗಿದೆ.
ಈ ಬಾರಿಯ ಬಜೆಟ್‌ನಲ್ಲಿ ಕ್ರೀಡಾಕ್ಷೇತ್ರಕ್ಕೆ ಅಂಥ ಆದ್ಯತೆ ನೀಡಿದಂತೆ ಕಾಣುತ್ತಿಲ್ಲ. ಆದರೂ ಕ್ರೀಡಾ ಕ್ಷೇತ್ರಕ್ಕೆ ಸಂಬಂಧಿಸಿ ನಾಲ್ಕು ವಿಚಾರಗಳನ್ನು ಬಜೆಟ್ ವೇಳೆ ತಿಳಿಸಲಾಗಿದೆ. ಇದರಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕ್ರೀಡಾಂಗಣದ ಅಭಿವೃದ್ಧಿಗೆ 10 ಕೋ.ರೂ. ಮೀಸಲಿಡಲಾಗಿದೆ.
ರಾಜ್ಯ ಬಜೆಟ್‌ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಸಂಬಂಧಿಸಿ ಕೇಳಿ ಬಂದ ಪ್ರಮುಖ 4 ಸಂಗತಿಗಳಿವು
* 2 ಕೋ.ರೂ. ವೆಚ್ಚದಲ್ಲಿ ರಾಜ್ಯದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪನೆ.
* ದೇವನಹಳ್ಳಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಮೂಲಸೌಲಭ್ಯ ನಿರ್ಮಾಣ.
* 10 ಕೋ.ರೂ. ವೆಚ್ಚದಲ್ಲಿ ಮಂಡ್ಯ ನಗರ ಕ್ರೀಡಾಂಗಣದ ಉನ್ನತೀಕರಣ.
* 2022ರಲ್ಲಿ ಬೆಂಗಳೂರಿನಲ್ಲಿ ರಾಷ್ಟ್ರೀಯ ಮಟ್ಟದ ವಿಶ್ವವಿದ್ಯಾನಿಲಯ ಕ್ರೀಡಾಕೂಟ ಆಯೋಜನೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications