For Quick Alerts
ALLOW NOTIFICATIONS  
For Daily Alerts

Karnataka Budget 2023: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ರಾಜ್ಯ ಸರ್ಕಾರ ನೀಡಿದ್ದೇನು?

ಶುಕ್ರವಾರ, ಜುಲೈ 7ರಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2023-24ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದರು. ಹಣಕಾಸು ಖಾತೆಯನ್ನೂ ಹೊಂದಿರುವ ಸಿದ್ದರಾಮಯ್ಯ ವಿಧಾನಸಭೆ ಆಯವ್ಯಯ ಓದಿದರು.

ಇದೇ ವೇಳೆ 2023-24ರ ರಾಜ್ಯ ಬಜೆಟ್‌ನಲ್ಲಿ ಕರ್ನಾಟಕ ಸರ್ಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಹಲವು ಯೋಜನೆಗಳನ್ನು ಘೋಷಿಸಿದೆ. ಅವುಗಳೆಂದರೆ,

Karnataka Budget 2023: Key Highlights For Youth Empowerment and Sports Sector?

* ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವ ಸಾಮರ್ಥ್ಯವುಳ್ಳ ರಾಜ್ಯದ ಕ್ರೀಡಾಪಟುಗಳನ್ನು ತಯಾರಿಸಲು ಬೆಂಗಳೂರಿನಲ್ಲಿ ಬಾಸ್ಕೆಟ್‌ಬಾಲ್‌ ಪ್ರಾದೇಶಿಕ ತರಬೇತಿ ಕೇಂದ್ರ ಮತ್ತು ಮೈಸೂರಿನಲ್ಲಿ ಸೈಕ್ಲಿಂಗ್ ವೇಲೋಡ್ರೋಮ್ ಅನ್ನು ತಲಾ 10 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

* ಕ್ರೀಡಾ ಚಟುವಟಿಕೆಗಳಲ್ಲಿ ವಿಶೇಷಚೇತನರ ಮತ್ತು ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಅಗತ್ಯವಾದ ಮೂಲಭೂತ ಸೌಕರ್ಯಗಳು ಮತ್ತು ನುರಿತ ತರಬೇತುದಾರರ ಸೇವೆಯನ್ನು ನೀಡಲು 10 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.

* ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಕ್ರೀಡಾ ವಸ್ತು ಸಂಗ್ರಹಾಲಯವನ್ನು ಸ್ಥಾಪಿಸಲು 5 ಕೋಟಿ ರೂಪಾಯಿ ಅನುದಾನವನ್ನು ಒದಗಿಸಲಾಗುವುದು.

* ಕಂಠೀರವ ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳಿಗೆ ತಂಗಲು ಅನುಕೂಲವಾಗುವಂತೆ ಸುಸಜ್ಜಿತವಾದ ಕ್ರೀಡಾ ವಸತಿ ನಿಲಯವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು. ಇದಕ್ಕಾಗಿ 10 ಕೋಟಿ ರೂ. ಅನುದಾನವನ್ನು ನೀಡಲಾಗುವುದು.

* ಒಲಂಪಿಕ್‌ ಹಾಗೂ ಪ್ಯಾರಾಲಿಂಪಿಕ್ ಪದಕ ವಿಜೇತರಿಗೆ ಗ್ರೂಪ್‌ ಎ ಹುದ್ದೆ ಮತ್ತು ಏಷಿಯನ್‌ ಹಾಗೂ ಕಾಮನ್‌ವೆಲ್ತ್ ಪದಕ ವಿಜೇತರಿಗೆ ಗ್ರೂಪ್‌-ಬಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಪ್ರಸಕ್ತ ಸಾಲಿನಿಂದ ಕ್ರಮ ಕೈಗೊಳ್ಳಲಾಗುವುದು.

* ಕ್ರೀಡಾಪಟುಗಳಿಗೆ ಪೊಲೀಸ್‌ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಶೇ.3ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು.

* ಕರ್ನಾಟಕ ಈಜು ಅಸೋಸಿಯೇಷನ್‌ ಸಹಭಾಗಿತ್ವದಲ್ಲಿ ರಾಜ್ಯದ ಪ್ರತಿಭಾವಂತ ಈಜು ಕ್ರೀಡಾಪಟುಗಳಿಗೆ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಯಶಸ್ವಿಯಾಗಿ ಭಾಗವಹಿಸಲು ತರಬೇತಿಯನ್ನು ನೀಡುವ ಸಲುವಾಗಿ ಮುಂದಿನ 5 ವರ್ಷಗಳವರೆಗೆ ಪ್ರತಿ ವರ್ಷ 2 ಕೋಟಿ ರೂಪಾಯಿಗಳ ಅನುದಾನ ಒದಗಿಸಲಾಗುವುದು.

Story first published: Friday, July 7, 2023, 16:44 [IST]
Other articles published on Jul 7, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+