ಕೆಎಲ್ ರಾಹುಲ್‌ಗೆ ಐಷಾರಾಮಿ ಕಾರು ಗಿಫ್ಟ್ ನೀಡಿದ ವಿರಾಟ್ ಕೊಹ್ಲಿ; ಧೋನಿಯಿಂದಲೂ ದುಬಾರಿ ಉಡುಗೊರೆ!

ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಸೋಮವಾರ, ಜನವರಿ 23ರಂದು ಮುಂಬೈನ ಖಂಡಾಲಾದಲ್ಲಿರುವ ಸುನೀಲ್ ಶೆಟ್ಟಿ ಅವರ ಫಾರ್ಮ್‌ಹೌಸ್‌ನಲ್ಲಿ ಗೆಳತಿ ಅಥಿಯಾ ಶೆಟ್ಟಿಯನ್ನು ವಿವಾಹವಾದರು.
ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಜೋಡಿಯ ಸುಂದರ ಮದುವೆ ಫೋಟೋಗಳು ಸೋಮವಾರ ಸಂಜೆ ವೇಳೆಗೆ ವೈರಲ್ ಆಗಿ, ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಮತ್ತು ಸ್ನೇಹಿತರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂತು.
ಕೆಲವೇ ಅತಿಥಿಗಳ ಸಮ್ಮುಖದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ್ಟಿ ಪುತ್ರಿಯಾದ ಅಥಿಯಾ ಶೆಟ್ಟಿಯನ್ನು ಕೆಎಲ್ ರಾಹುಲ್ ವರಿಸಿದ್ದು, ದೇಶದೆಲ್ಲೆಡೆ ಭಾರೀ ಸುದ್ದಿಯಾಯಿತು. ಮದುವೆ ಸಮಾರಂಭದಲ್ಲಿ ಬಾಲಿವುಡ್‌ನ ಪ್ರಸಿದ್ಧ ಸೆಲೆಬ್ರಿಟಿಗಳು ಭಾಗವಹಿಸಿದ್ದರು.
ಇನ್ನು ಕೆಎಲ್ ರಾಹುಲ್ ಅವರ ವಿವಾಹ ಕಾರ್ಯಕ್ರಮದಲ್ಲಿ ಟೀಂ ಇಂಡಿಯಾ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಸೇರಿದಂತೆ ಇತರ ಆಟಗಾರರು ಗೈರಾಗಿದ್ದರು. ಏಕೆಂದರೆ, ಅವರೆಲ್ಲರೂ ಭಾರತ ತಂಡದ ಪಂದ್ಯದಲ್ಲಿ ನಿರತರಾಗಿರುವ ಕಾರಣ ವಿವಾಹ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ ಎಂಬುದು ಗಮನಿಸಬೇಕಾದ ಸಂಗತಿ.

ಮಂಗಳವಾರ, ಜನವರಿ 24ರಂದು ಭಾರತ ತಂಡ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯವನ್ನು ಆಡಬೇಕಿತ್ತು. ಹೀಗಾಗಿ ಭಾರತ ತಂಡದ ಸಹ ಆಟಗಾರರು ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ವಿವಾಹದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ.
ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಮದುವೆಗೆ ಬರಲು ಸಾಧ್ಯವಾಗದಿದ್ದರೂ, ನವವಿವಾಹಿತರಾದ ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಜೋಡಿಗೆ ದುಬಾರಿ ಉಡುಗೊರೆ ನೀಡಿ ಹಾರೈಸಿದ್ದಾರೆ.
ವಿರಾಟ್ ಕೊಹ್ಲಿ ತಮ್ಮ ಮದುವೆಗೆ ಕೆಎಲ್ ರಾಹುಲ್ ಅವರಿಗೆ 2.17 ಕೋಟಿ ರೂಪಾಯಿ ಮೌಲ್ಯದ ಬಿಎಂಡಬ್ಲ್ಯು ಐಷಾರಾಮಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ವರದಿಗಳ ಪ್ರಕಾರ, ವಿರಾಟ್ ಕೊಹ್ಲಿ ಅವರು ಕೆಎಲ್ ರಾಹುಲ್‌ಗೆ 2.17 ಕೋಟಿ ರೂಪಾಯಿ ಮೌಲ್ಯದ ಬಿಎಂಡಬ್ಲ್ಯು ಐಷಾರಾಮಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.
ಇದೇ ವೇಳೆ, ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಕೂಡ ನವ ವಿವಾಹಿತ ಕೆಎಲ್ ರಾಹುಲ್‌ಗೆ ಮರೆಯಲಾಗದ ಉಡುಗೊರೆಯಾಗಿ ನೀಡಿದ್ದಾರೆ. ಸುಮಾರು 80 ಲಕ್ಷ ರೂ. ಮಾರುಕಟ್ಟೆ ಮೌಲ್ಯದ ಕವಾಸಕಿ ನಿಂಜಾ ಬೈಕ್ ಅನ್ನು ಲಕ್ನೋ ಸೂಪರ್‌ಜೈಂಟ್ಸ್ ನಾಯಕ ಕೆಎಲ್ ರಾಹುಲ್ ಉಡುಗೊರೆಯಾಗಿ ಸ್ವೀಕರಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications