ಬಿಜೆಪಿ ಸೇರಿದ ಪ್ಯಾರಾಲಂಪಿಕ್ಸ್ ನಲ್ಲಿ ಪದಕ ಗೆದ್ದ ದೀಪಾ ಮಲಿಕ್

ಚಂಡಿಗಢ, ಮಾರ್ಚ್ 26: ರಿಯೋ 2016ರಲ್ಲಿ ಪದಕ ಬೆಳ್ಳಿ ಗೆದ್ದ ದೀಪಾ ಮಲಿಕ್ ಅವರು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಸೇರಿಕೊಂಡಿದ್ದಾರೆ.
ಪ್ಯಾರಾ ಒಲಂಪಿಕ್‌ನಲ್ಲಿ ಮೊದಲ ಪದಕವನ್ನು ಗೆದ್ದ ಮಹಿಳಾ ಆಟಗಾರ್ತಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿರುವ ದೀಪಾ ಮಲಿಕ್ ಅವರು, ಹರ್ಯಾಣದಲ್ಲಿ ಬಿಜೆಪಿ ಅಧ್ಯಕ್ಷ ಸುಭಾಷ್ ಬರಾಲ ಸಮ್ಮುಖದಲ್ಲಿ ಬಿಜೆಪಿ ಸೇರಿದರು. ರಾಜ್ಯದಲ್ಲಿ ಬಿಜೆಪಿಯನ್ನು ಬಲವರ್ಧಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ಘೋಷಿಸಿದರು.
ರಿಯೋ 2016 ಪ್ಯಾರಾಲಿಂಪಿಕ್ಸ್ ನ ಶಾಟ್ ಪುಟ್ ವಿಭಾಗದ ಎಫ್ 33 ಸ್ಪರ್ಧೆಯಲ್ಲಿ ದೀಪಾ ಮಲಿಕ್ ಅವರು ಭಾರತಕ್ಕೆ ಬೆಳ್ಳಿ ಪದಕ ಗೆದ್ದು ಕೊಟ್ಟ ಸಾಧನೆ ಮಾಡಿದ್ದಾರೆ.

ಹರ್ಯಾಣ ರಾಜ್ಯದ ಸ್ವರ್ಣ ಮಹೋತ್ಸವ ಸಮಾರಂಭದಲ್ಲಿ 4 ಕೋಟಿ ರು ನಗದು ಪ್ರೋತ್ಸಾಹ ಬಹುಮಾನವನ್ನು ನೀಡಲಾಗಿತ್ತು. ಪ್ರಧಾನಿ ಮೋದಿ ಅವರು ಸನ್ಮಾನ ಮಾಡಿದ್ದು ವಿಶೇಷವಾಗಿತ್ತು.
ದೀಪಾ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನ ಕಾರ್ಯದರ್ಶಿ ಅನಿಲ್ ಜೈನ್, ದೀಪಾ ಅವರು ನಮ್ಮೆಲ್ಲರಿಗೂ ಸ್ಪೂರ್ತಿ. ಇಡೀ ದೇಶವನ್ನು ವಿಶ್ವಮಟ್ಟದಲ್ಲಿ ಹೆಮ್ಮೆ ಪಡುವ ಕೆಲಸ ಮಾಡಿದ್ದಾರೆ. ಅವರು ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಸಂತಸದ ವಿಚಾರ ಎಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications