Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ವ್ಯಕ್ತಿಯ ಬಂಧನ ಒಂದೂವರೆ ಲಕ್ಷ ವಶಕ್ಕೆ

Man Arrested For Betting On Cricket Match

ಬೆಟ್ಟಿಂಗ್‌ಗೆ ಸಂಬಂಧ ಪಟ್ಟಂತೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದು ಆತನಿಂದ 1,52,000 ರೂಪಾಯಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ದಿನಾಂಕ 29.01.2020 ರಂದು ಕೆ.ಆರ್.ಮಾರ್ಕೆಟ್ ಪೊಲೀಸ್ ಠಾಣಾ ಸರಹದ್ದಿನ ಹಳೇತರಗುಪೇಟೆ, ಬಿ.ವಿ.ಕೆ ಅಯ್ಯಂಗಾರ್ ರಸ್ತೆಯಲ್ಲಿರುವ ರಾಘವೇಂದ್ರ ಹೋಟೆಲ್ ಮುಂಭಾಗದಲ್ಲಿ ಜೂಜಾಟಕ್ಕೆ ಸಂಬಂಧಿಸಿದ ಚಟುವಟಿಕೆಯಲ್ಲಿ ತೊಡಗಿದ್ದ ಎಂದು ತಿಳಿದುಬಂದಿದೆ.

ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಪಂದ್ಯದಲ್ಲಿ ಬೆಟ್ಟಿಂಗ್ ನಡೆಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಕೇಂದ್ರ ಅಪರಾಧ ವಿಭಾಗ ಮತ್ತು ವಿಶೇಷ ವಿಚಾರಣಾ ದಳದ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯನ್ನು ನಡೆಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಬೆಂಗಳೂರಿನ ಶ್ರೀರಾಂಪುರ ನಿವಾಸಿ 26 ವರ್ಷದ ರಾಕೇಶ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಒಂದೂವರೆ ಲಕ್ಷ ನಗದು ಮತ್ತು ಒಂದು ಮೊಬೈಲ್ ಫೋನನ್ನು ಆರೋಪಿಯಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ. ಕೆ.ಆರ್.ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈ ಕಾರ್ಯಚರಣೆಯನ್ನು ಬೆಂಗಳೂರು ನಗರ ಜಂಟಿ ಪೊಲೀಸ್ ಆಯುಕ್ತ ಸಂದೀಪ್‌ ಪಾಟೀಲ್ ಉಪ-ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್ ಮಾರ್ಗದರ್ಶನದಲ್ಲಿ, ಸಿಸಿಬಿ, ವಿಶೇಷ ವಿಚಾರಣಾ ದಳದ ಸಹಾಯಕ ಪೊಲೀಸ್ ಆಯುಕ್ತರಾದ .ಡಿ.ಟಿ.ವಿರೂಪಾಕ್ಷಪ್ಪರವರ ನೇತೃತ್ವದಲ್ಲಿ ಪೊಲೀಸ್ ಇನ್ಸ್‍ಪೆಕ್ಟರ್ ಎಚ್.ಎಸ್. ಜಗದೀಶ್ ಹಾಗೂ ಸಿಬ್ಬಂದಿರವರುಗಳು ಕೈಗೊಂಡಿದ್ದರು.

Story first published: Thursday, January 30, 2020, 21:18 [IST]
Other articles published on Jan 30, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+