Road Accident: ಭೀಕರ ರಸ್ತೆ ಅಪಘಾತದಲ್ಲಿ ಕುಟುಂಬಸ್ಥರನ್ನು ಕಳೆದುಕೊಂಡ ಡಬಲ್ ಮೆಡಲಿಸ್ಟ್ ಮನು ಭಾಕರ್
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಡಬಲ್ ಪದಕ ವಿಜೇತೆ ಮತ್ತು ಭಾರತದ ಸ್ಟಾರ್ ಶೂಟರ್ ಮನು ಭಾಕರ್ ಅವರ ಕುಟುಂಬಸ್ಥರು ಭೀಕರ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಎರಡು ದಿನಗಳ ಹಿಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪಡೆದ ಖುಷಿಯಲ್ಲಿದ್ದ ಮನು ಭಾಕರ್ ಅವರ ಕುಟುಂಬಸ್ಥರು ದುಃಖದಲ್ಲಿ ಮುಳುಗಿದ್ದಾರೆ. ಮನು ಭಾಕರ್ ಅವರ ಚಿಕ್ಕಪ್ಪ ಮತ್ತು ಅಜ್ಜಿ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಹರಿಯಾಣದ ಚಕ್ರಿದಾದ್ರಿಯಲ್ಲಿ ಭೀಕರ ರಸ್ತೆ ಸಂಭವಿಸಿದೆ.
ವರದಿಗಳ ಪ್ರಕಾರ, ಮಹೇಂದ್ರಗಢ ಬೈಪಾಸ್ ರಸ್ತೆಯಲ್ಲಿ ಮನು ಭಾಕರ್ ಅವರ ತಾಯಿಯ ಚಿಕ್ಕಪ್ಪ ಯುಧವೀರ್ ಸಿಂಗ್ ಮತ್ತು ಅಜ್ಜಿ ಸಾವಿತ್ರಿ ದೇವಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ವರದಿಗಳ ಪ್ರಕಾರ, ತಪ್ಪು ದಿಕ್ಕಿನಿಂದ ಬಂದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹರಿಯಾಣ ರಾಜ್ಯ ಸಾರಿಗೆ ಇಲಾಖೆಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿರುವ ಯುಧವೀರ್ ಸಿಂಗ್ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಈ ವೇಳೆ ಯುಧವೀರ್ ಸಿಂಗ್ ಜೊತೆಗೆ ಸಾವಿತ್ರಿ ದೇವಿ ಕೂಡ ತಮ್ಮ ಕಿರಿಯ ಮಗನನ್ನು ಭೇಟಿಯಾಗಲು ಹೋಗುತ್ತಿದ್ದರು. ಈ ಸಂದರ್ಭದಲ್ಲಿ ವೇಗವಾಗಿ ರಸ್ತೆಯ ತಪ್ಪು ದಿಕ್ಕಿನಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ.
ಚಾಲಕ ಪರಾರಿ
ಅಪಘಾತ ಸಂಭವಿಸಿದ ತಕ್ಷಣ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳೀಯ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಅಪಘಾತಕ್ಕೆ ಕಾರಣರಾದ ಆರೋಪಿ ಚಾಲಕನ ಬಂಧನಕ್ಕೆ ಪೋಲಿಸರು ಬಲೆ ಬೀಸಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಮನು ಭಾಕರ್ ಇತಿಹಾಸ ಸೃಷ್ಟಿಸಿದ್ದರು. 10 ಮೀಟರ್ ಏರ್ ಪಿಸ್ತೂಲ್ ವೈಯಕ್ತಿಕ ಸ್ಪರ್ಧೆ ಮತ್ತು 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು, ಒಂದೇ ಒಲಿಂಪಿಕ್ ಆವೃತ್ತಿಯಲ್ಲಿ ಎರಡು ಪದಕಗಳನ್ನು ಗೆದ್ದ ಸ್ವತಂತ್ರ ಭಾರತದ ಮೊದಲ ಕ್ರೀಡಾಪಟು ಎನಿಸಿಕೊಂಡಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications