Manu Bhaker: ಸೋನಿಯಾ ಗಾಂಧಿ ನಿವಾಸಕ್ಕೆ ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಭೇಟಿ
ಆಗಸ್ಟ್ 8 ಗುರುವಾರ, ಭಾರತಕ್ಕೆ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದು ಕೊಟ್ಟ ಸ್ಟಾರ್ ಶೂಟರ್ ಮನು ಭಾಕರ್ ಬುಧವಾರ ತವರಿಗೆ ಮರಳಿದರು. ನವದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮನು ಭಾಕರ್ ಅವರಿಗೆ ಅದ್ದೂರಿ ಸ್ವಾಗತ ದೊರೆಯಿತು.
ಇದಾದ ನಂತರ ಮನು ಭಾಕರ್ ಅವರು ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು ಭೇಟಿ ಮಾಡಿದರು. ಬಳಿಕ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ಮನು ಭಾಕರ್ ಆಗಮಿಸಿ ಆರ್ಶೀವಾದ ಪಡೆದಿದ್ದಾರೆ. ಈ ವೇಳೆ ಸೋನಿಯಾ ಗಾಂಧಿ ಅವರೊಂದಿನ ಮನು ಭಾಕರ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಫೋಟೋಗಳು ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ನೆಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಒಲಿಂಪಿಕ್ ಡಬಲ್ ಪದಕ ವಿಜೇತೆ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡದೆ, ಸೋನಿಯ ಗಾಂಧಿ ಅವರನ್ನು ಭೇಟಿ ಮಾಡಿದ್ದೇಕೆ? ಎಂದು ಕೇಳಲಾರಂಭಿಸಿದ್ದಾರೆ. ಮುಂದಿನ ದಿನಗಳಲ್ಲಿ ಪ್ರಧಾನಿ ಮೋದಿ ಅವರನ್ನು ಮನು ಭಾಕರ್ ಭೇಟಿ ಮಾಡುವ ನಿರೀಕ್ಷೆಯಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications