For Quick Alerts
ALLOW NOTIFICATIONS  
For Daily Alerts

Mitchell Marsh Wedding: ನನ್ನ ಜೀವನದ ಅತ್ಯುತ್ತಮ ದಿನ: ಮದುವೆಯ ಸಂತಸ ಹಂಚಿಕೊಂಡ ಸ್ಟಾರ್ ಆಲ್‌ರೌಂಡರ್

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಆಸ್ಟ್ರೇಲಿಯಾದ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಏಪ್ರಿಲ್ 9ರ ಭಾನುವಾರ ತಮ್ಮ ಗೆಳತಿ ಗ್ರೆಟಾ ಮ್ಯಾಕ್ ಅವರೊಂದಿಗೆ ಮದುವೆಯಾದ ಕ್ಷಣಗಳನ್ನು, ಸೋಮವಾರ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬ್ಲಾಕ್ ಅಂಡ್ ವೈಟ್ ಚಿತ್ರಗಳನ್ನು ಹಂಚಿಕೊಂಡಿರುವ ಅವರು, "ನನ್ನ ಜೀವನದ ಅತ್ಯುತ್ತಮ ದಿನ" ಎಂದು ಶೀರ್ಷಿಕೆ ನೀಡಿದ್ದಾರೆ.

ಮಿಚೆಲ್ ಮಾರ್ಷ್ ಮತ್ತು ಗ್ರೆಟಾ ಮ್ಯಾಕ್ ಎರಡು ವರ್ಷಗಳ ಡೇಟಿಂಗ್ ಮಾಡಿದ ಬಳಿಕ, ಸೆಪ್ಟೆಂಬರ್ 11, 2021 ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ನಿಶ್ಚಿತಾರ್ಥ ಆದ ಸುಮಾರು ಒಂದೂವರೆ ವರ್ಷದ ಬಳಿಕ ಮದುವೆಯ ಬಂಧನಕ್ಕೆ ಒಳಗಾಗಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಆಡುತ್ತಿರುವ ಮಿಚೆಲ್ ಮಾರ್ಷ್ ಮದುವೆಗಾಗಿ ಆಸ್ಟ್ರೇಲಿಯಾಗೆ ತೆರಳಿದ್ದರು.

Mitchell Marsh Wedding:

ಹಲವಾರು ವರದಿಗಳ ಪ್ರಕಾರ, ಗ್ರೆಟಾ ಮ್ಯಾಕ್ ಅವರು ಪಶ್ಚಿಮ ಆಸ್ಟ್ರೇಲಿಯಾ ವಿಶ್ವವಿದ್ಯಾಲಯದಿಂದ ವಾಣಿಜ್ಯ ಪದವೀಧರರಾಗಿದ್ದಾರೆ ಎಂದು ಹೇಳಲಾಗಿದೆ. ಮೊಂಟಾನಾ ಸ್ಟೇಟ್ ಯೂನಿವರ್ಸಿಟಿಯಲ್ಲಿ ಅಂತರರಾಷ್ಟ್ರೀಯ ವಿನಿಮಯ ಪ್ರೋಗ್ರಾಮ್ ಅನ್ನು ಮುಗಿಸಿದ್ದಾರೆ. ಮಾರ್ಗರೇಟ್ ರಿವರ್ ಕಂಪನಿಯ ಸಹ ನಿರ್ದೇಶಕರಲ್ಲಿ ಒಬ್ಬರಾಗಿ ಮತ್ತು ಅವರ ಕುಟುಂಬದ ವ್ಯವಹಾರದ ಸಾಗರೋತ್ತರ ಕಾರ್ಯಾಚರಣೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಇದನ್ನು ಹೊರತುಪಡಿಸಿ ಅವರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ, ಗ್ರೆಟಾ ಮ್ಯಾಕ್ ಯಾವುದೇ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯವಾಗಿಲ್ಲ. ಪ್ರಸ್ತುತ ಅವರು ಯಾವ ಕೆಲಸ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಕೂಡ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಮಿಚೆಲ್ ಮಾರ್ಷ್ ಗಾಯದಿಂದ ಚೇತರಿಸಿಕೊಂಡ ಬಳಿಕ ಮುಂದಿನ ದಿನಗಳಲ್ಲಿ ಬಿಡುವಿಲ್ಲದೆ ಕ್ರಿಕೆಟ್‌ ಆಡಬೇಕಾಗಿರುವ ಕಾರಣ ಈಗ ಮದುವೆಯಾಗಲು ನಿರ್ಧರಿಸಿದ್ದರು ಎನ್ನಲಾಗಿದೆ.

ಕೆಲವೇ ದಿನಗಳಲ್ಲಿ ಭಾರತಕ್ಕೆ ವಾಪಸ್?

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಆಟಗಾರರಾಗಿರುವ ಅವರು ಇನ್ನು ಕೆಲವೇ ದಿನಗಳಲ್ಲಿ ಭಾರತಕ್ಕೆ ಮರಳಲಿದ್ದಾರೆ ಎಂದು ಹೇಳಲಾಗಿದೆ. ಮಾರ್ಷ್ ಇದ್ದರೂ ಸಹ ಡೆಲ್ಲಿ ಕ್ಯಾಪಿಟಲ್ಸ್ ಮೊದಲ ಎರಡು ಪಂದ್ಯಗಳಲ್ಲಿ ಸೋಲನುಭವಿಸಿತ್ತು, ಮಾರ್ಷ್ ತವರಿಗೆ ಮರಳಿದ ಬಳಿಕ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯವನ್ನು ಕೂಡ ಸೋತು ಮುಖಭಂಗ ಅನುಭವಿಸಿದೆ.

ಕ್ರಿಕ್‌ಬಝ್ ವರದಿ ಮಾಡಿರುವ ಪ್ರಕಾರ, ಮಾರ್ಷ್ ಕೆಲವೇ ದಿನಗಳಲ್ಲಿ ಭಾರತಕ್ಕೆ ವಾಪಸಾಗಲಿದದಾರೆ. ಭಾರತದ ವಿರುದ್ಧದ ಏಕದಿನ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಮಿಚೆಲ್ ಮಾರ್ಷ್ ಐಪಿಎಲ್‌ನಲ್ಲಿ ಮಾತ್ರ ವಿಫಲವಾಗಿದ್ದಾರೆ. ಇಗ ಮದುವೆಯ ಬಳಿಕ ಮತ್ತೆ ತಂಡವನ್ನು ಸೇರಿಕೊಳ್ಳಲಿದ್ದು, ಮತ್ತೆ ಫಾರ್ಮ್‌ಗೆ ಮರಳುತ್ತಾರ ಎಂದು ನೋಡಬೇಕಿದೆ.

Mitchell Marsh Wedding:

ಮುಂಬೈ ಇಂಡಿಯನ್ಸ್ ವಿರುದ್ಧ ಮುಂದಿನ ಪಂದ್ಯ

ಸತತ ಮೂರು ಪಂದ್ಯಗಳನ್ನು ಸೋತ ಬಳಿಕ ಮುಂದಿನ ಪಂದ್ಯವನ್ನು ಐದು ಬಾರಿ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಏಪ್ರಿಲ್ 11ರಂದು ಮಂಗಳವಾರ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಈಗಾಗಲೇ ತವರಿನಲ್ಲಿ ಆಡಿದ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಸೋಲನುಭವಿಸಿದ್ದು ಮುಂಬೈ ಇಂಡಿಯನ್ಸ್ ವಿರುದ್ಧ ಗೆಲ್ಲುವ ಲೆಕ್ಕಾಚಾರದಲ್ಲಿದೆ.

ಮುಂಬೈ ಇಂಡಿಯನ್ಸ್ ಕೂಡ ಮೊದಲ ಎರಡು ಪಂದ್ಯಗಳಲ್ಲಿ ಸೋಲನುಭವಿಸಿದ್ದು ಡೆಲ್ಲಿ ವಿರುದ್ಧ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಖಾತೆ ತೆರೆಯುವ ಉತ್ಸಾಹದಲ್ಲಿದೆ. ಎರಡೂ ತಂಡಗಳು ಈ ಬಾರಿ ಐಪಿಎಲ್‌ನಲ್ಲಿ ಮೊದಲ ಗೆಲುವಿಗಾಗಿ ಹುಡುಕಾಡುತ್ತಿದ್ದು, ಮಂಗಳವಾರ ಒಂದು ತಂಡ ಗೆಲುವಿನ ಖಾತೆ ತೆರೆಯುವುದು ಖಚಿತವಾಗಿದೆ.

Story first published: Monday, April 10, 2023, 18:09 [IST]
Other articles published on Apr 10, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+