ನಮ್ಮೂರ ಪ್ರತಿಭೆ: ಕೊಹಿನೂರಿನ ಚಿನ್ನದ ಹುಡುಗ ಉಮೇಶ್ ಜಮಾದಾರ್: ಕುಸ್ತಿಯಲ್ಲಿ ಭರವಸೆ ಮೂಡಿಸಿದ ದೇಸಿ ಪ್ರತಿಭೆ

By ಪ್ರತಿನಿಧಿ

ಬೀದರ್‌ನ ಬಸವಕಲ್ಯಾಣ ತಾಲೂಕಿನ ಕೋಹಿನೂರ ಗ್ರಾಮದ ನಿವಾಸಿ ಉಮೇಶ್ ಜಮಾದಾರ್ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಪರವಾಗಿ ಮಿಂಚುತ್ತಿರುವ ಕುಸ್ತಿಪಟು. ಕುಸ್ತಿಯಲ್ಲಿ ಸಾಧನೆ ಮಾಡಲೇಬೇಕಂದು ಹಠತೊಟ್ಟು ಪರಿಶ್ರಮ ಪಟ್ಟ ಉಮೇಶ್ ಜಮಾದಾರ್ ಈಗ ಭಾರತಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕವನ್ನು ತೊಡಿಸಿದ್ದಾರೆ. ಇತ್ತೀಚೆಗಷ್ಟೇ ನಡೆದ ಸೌತ್ ಏಷಿಯನ್ ಕುಸ್ತಿ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಉಮೇಶ್ ಜಮಾದಾರ್‌ಗೆ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.

ಬಡತನದಲ್ಲೇ ಹುಟ್ಟಿ ಬೆಳೆದ ಉಮೇಶ್ ಜಮಾದಾರ್ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಈಗಾಗಲೇ ಎರಡು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದರು. ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ತಮ್ಮ ಛಾಪು ಮೂಡಿಸಿದ್ದಾರೆ. ಬೀದರ್‌ನ ಉಮೇಶ್ ಜಮಾದಾರ್ ಅವರ ಸಾಧನೆಯ ಹಾದಿ ಹೇಗಿತ್ತು? ಮುಂದೆ ಓದಿ

ನಮ್ಮೂರ ಪ್ರತಿಭೆ: ಪ್ರೋ ಕಬಡ್ಡಿ ಮೂಲಕ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ಪ್ರಶಾಂತ್ ಕುಮಾರ್ ರೈನಮ್ಮೂರ ಪ್ರತಿಭೆ: ಪ್ರೋ ಕಬಡ್ಡಿ ಮೂಲಕ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ಪ್ರಶಾಂತ್ ಕುಮಾರ್ ರೈ

ಛಲ ಬಿಡದೆ ಸಾಧನೆಯ ಮೆಟ್ಟಿಲೇರಿದ ಉಮೇಶ್

ಛಲ ಬಿಡದೆ ಸಾಧನೆಯ ಮೆಟ್ಟಿಲೇರಿದ ಉಮೇಶ್

ಕುಸ್ತಿಯಲ್ಲಿ ದೊಡ್ಡ ಸಾಧನೆ ಮಾಡಬೇಕೆಂದು ಕನಸುಕಟ್ಟಿಕೊಂಡಿದ್ದ ಉಮೇಶ್ ಜಮೇದಾರ್ ಕಳೆದ 13 ವರ್ಷಗಳಿಂದ ಕುಸ್ತಿ ಅಭ್ಯಾಸ ಮಾಡುತ್ತಿದ್ದಾರೆ. ಸದ್ಯ ದಾವಣಗೆರೆಯ ಕ್ರೀಡಾ ಹಾಸ್ಟೆಲ್​ನಲ್ಲಿದ್ದುಕೊಂಡು ತರಬೇತಿ ಪಡೆಯುತ್ತಿರುವ ಯುವಕ ಉಮೇಶ್ ಜಮಾದಾರ್ ಇಲ್ಲಿನ ಕುಸ್ತಿ ಕೋಚ್ ಶಿವಾನಂದ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ

ಇತ್ತೀಚೆಗಷ್ಟೇ ಥೈಲ್ಯಾಂಡ್ ನಲ್ಲಿ ನಡೆದ ಸೌತ್ ಏಷ್ಯನ್ ಇಂಟರ್ನ್ಯಾಷನಲ್ ಕುಸ್ತಿ ಚಾಂಪಿಯನ್ ಶಿಪ್‌ನಲ್ಲಿ ಉಮೇಶ್ ಜಮಾದಾರ್ ಭಾರತ ದೇಶವನ್ನು ಪ್ರತಿನಿಧಿಸಿ ಚಿನ್ನದ ಪದಕ ಗೆದ್ದಿದ್ದಾರೆ. 65 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿರುವ ಉಮೇಶ್ ಭಾರತಕ್ಕೆ ಚಿನ್ನ ತಂದುಕೊಟ್ಟಿದ್ದಾರೆ. ಮಲೇಷಿಯಾದ ರೆಸ್ಲರ್ ವಿರುದ್ಧ ಭರ್ಜರಿ 10-0 ಅಂತರದಿಂದ ಗೆದ್ದು ಈ ಸಾಧನೆ ಮಾಡಿದ್ದಾರೆ. ಇದಕ್ಕೂ ಮುನ್ನ ಉಮೇಶ್ ಮಲೇಷಿಯಾ, ಥೈಲ್ಯಾಂಡ್, ಇಂಡೋನೇಷ್ಯಾ, ಸಿಂಗಾಪುರ್, ನೇಪಾಳ್ ದೇಶದ ಕುಸ್ತಿಪಟುಗಳನ್ನು ಮಣಿಸಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ.

ರಾಷ್ಟ್ರಮಟ್ಟದಲ್ಲಿಯೂ ಉಮೇಶ್ ಸಾಧನೆ

ರಾಷ್ಟ್ರಮಟ್ಟದಲ್ಲಿಯೂ ಉಮೇಶ್ ಸಾಧನೆ

ಬಡತನದಲ್ಲಿ ಅರಳಿದ ಈ ಕ್ರೀಡಾ ಪ್ರತಿಭೆ ಉಮೇಶ್ ಕಷ್ಟಪಟ್ಟು ಸಾಧನೆ ಮಾಡಿ ತೋರಿಸಿದ್ದಾರೆ. ಈ ಹಿಂದೆ ನ್ಯಾಷನಲ್ ಚಾಂಪಿಯನ್ ಶಿಪ್ ನಲ್ಲಿಯೂ ಚಿನ್ನದ ಪದಕ ಪಡೆದಿದ್ದರು. ಇದೀಗ ಥೈಲ್ಯಾಂಡ್ ನಲ್ಲಿ ಮತ್ತೊಮ್ಮೆ ಚಿನ್ನದ ಪದಕ ಗೆದ್ದು ದಾವಣಗೆರೆ ಹಾಗು ಬೀದರ್ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಉಮೇಶ್ ಅವರ ಈ ಸಾಧನೆಗೆ ಕುಸ್ತಿ ತರಬೇತುದಾರರಾದ ಶಿವಾನಂದ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ‌. ಸದ್ಯ ಉಮೇಶ್ ಅವರು ದಾವಣಗೆರೆಯ ಕ್ರೀಡಾ ಹಾಸ್ಟೆಲ್ ನದಲ್ಲಿದ್ದುಕೊಂಡೇ ಹೆಚ್ಚಿನ ತರಬೇತಿ ಪಡೆಯುತ್ತಿದ್ದಾರೆ.

For Quick Alerts
ALLOW NOTIFICATIONS
For Daily Alerts
Story first published: Friday, June 17, 2022, 19:45 [IST]
Other articles published on Jun 17, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X