Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಬೆಂಗಳೂರಿನಲ್ಲಿ ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್‌ಶಿಪ್; ಪ್ರಶಸ್ತಿ ಮೇಲೆ ಕಣ್ಣಿಟ್ಟ 9 ವರ್ಷದ ಅತಿಕಾ ಮೀರ್‌

ಭಾರತದ ನೂತನ ರೇಸಿಂಗ್ ಪ್ರತಿಭೆ, 9 ವರ್ಷದ ಅತಿಕಾ ಮೀರ್‌ ಈ ವಾರಾಂತ್ಯದಲ್ಲಿ ಬೆಂಗಳೂರಿನ ಮೆಕೊ ಕಾರ್ಟೊಪಿಯಾದಲ್ಲಿ ನಡೆಯಲಿರುವ ಎಫ್‌ಎಂಎಸ್‌ಸಿಐ ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್‌ಶಿಪ್‌ ರೊಟಾಕ್ಸ್ ಮ್ಯಾಕ್ಸ್‌ 2024ರಲ್ಲಿ ಪದಾರ್ಪಣೆ ಮಾಡಲಿದ್ದಾಳೆ.

ಅಂತಾರಾಷ್ಟ್ರೀಯ ಆಟೋಮೊಬೈಲ್‌ ಫೆಡರೇಶನ್‌ (ಎಫ್‌ಐಎ) ಹಾಗೂ ಅಂತಾರಾಷ್ಟ್ರೀಯ ಕಾರ್ಟಿಂಗ್ ಆಯೋಗ (ಸಿಐಕೆ) ಪ್ರಕಾರ 10 ವರ್ಷದೊಳಗಿನ ಮಹಿಳಾ ರೇಸರ್‌ಗಳ ಪೈಕಿ ಯಾವುದೇ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳಲ್ಲಿ ಅಗ್ರಸ್ಥಾನ ಪಡೆದಿರುವ ಅತಿಕಾ, 2022ರಲ್ಲೇ ತಮಗೆ 7 ವರ್ಷ ವಯಸ್ಸಿದ್ದಾಗ ಚಾಂಪಿಯನ್‌ಶಿಪ್‌ನ ಎರಡು ರೇಸ್‌ಗಳಲ್ಲಿ ಪಾಲ್ಗೊಂಡಿದ್ದಳು.

National Karting Championship in Bengaluru 9-year-Old Atika Mir Eyes On Trophy

ಕಾಶ್ಮೀರ ಮೂಲದ ಬಾಲಕಿ ಇದೇ ಮೊದಲ ಬಾರಿಗೆ ಚಾಂಪಿಯನ್‌ಶಿಪ್‌ನ ಎಲ್ಲಾ 5 ರೇಸ್‌ಗಳಲ್ಲೂ ಸ್ಪರ್ಧಿಸಲಿದ್ದಾರೆ. 7ರಿಂದ 12 ವರ್ಷದೊಳಗಿನವರ ವಿಭಾಗದಲ್ಲಿ ಅತಿಕಾ ಮೀರ್, ಎಂಸ್ಪೋರ್ಟ್ ರೇಸಿಂಗ್ ತಂಡವನ್ನು ಪ್ರತಿನಿಧಿಸಲಿದ್ದಾರೆ.

"ಬಹಳ ಸ್ಪರ್ಧಾತ್ಮಕತೆಯಿಂದ ಕೂಡಿರಲಿರುವ ಭಾರತೀಯ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ನಮ್ಮ ಸಾಮರ್ಥ್ಯ ಪ್ರದರ್ಶಿಸಲು ಬಹಳ ಉತ್ಸುಕತೆಯಿಂದ ನಾವು ಕಾಯುತ್ತಿದ್ದೇವೆ," ಎಂದು ಭಾರತದ ಮೊದಲ ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್, ಮಾಜಿ ಫಾರ್ಮುಲಾ ಏಷ್ಯಾ ರೇಸರ್ ಆಗಿರುವ ಅತಿಕಾಳ ತಂದೆ ಆಸಿಫ್ ಮೀರ್‌ ಹೇಳಿದ್ದಾರೆ.

ಅತಿಕಾ ಮೀರ್ ಈಗಾಗಲೇ ಕಾಶ್ಮೀರದಲ್ಲಿ ರೇಸಿಂಗ್ ತಾರೆಯಾಗಿ ಗುರುತಿಸಿಕೊಂಡಿದ್ದಾರೆ. ಸದ್ಯ ದುಬೈನಲ್ಲಿ ನೆಲೆಸಿರುವ ಅತಿಕಾ, ಅಲ್ಲಿನ ಜಾರ್ಜ್‌ ಗಿಬ್ಬೊನ್ಸ್ ಮೋಟಾರ್‌ಸ್ಪೋರ್ಟ್ಸ್‌ನೊಂದಿಗೆ ಅಭ್ಯಾಸ ನಡೆಸುತ್ತಾಳೆ. ಅತಿಕಾ ಯುರೋಪಿಯನ್‌ ಹಾಗೂ ಯುಎಇ ಕಾರ್ಟಿಂಗ್ ಚಾಂಪಿಯನ್‌ಶಿಪ್‌ಗಳಲ್ಲೂ ಸ್ಪರ್ಧಿಸಿ ಈಗಾಗಲೇ ಯಶಸ್ಸು ಗಳಿಸಿದ್ದಾಳೆ.

"ಅತಿಕಾಳನ್ನು ಭಾರತಕ್ಕೆ ಮರಳಿ ಸ್ವಾಗತಿಸಲು ಎಂಸ್ಪೋರ್ಟ್ ಬಹಳ ಸಂತೋಷಪಡುತ್ತದೆ. ಆಕೆ ಈಗಾಗಲೇ ಸಾಕಷ್ಟು ಅನುಭವ ಗಳಿಸಿದ್ದು, ಈ ಬಾರಿ ಮೈಕ್ರೋ ಮ್ಯಾಕ್ಸ್‌ ವಿಭಾಗದಲ್ಲಿ ಪ್ರಶಸ್ತಿ ರೇಸ್‌ನಲ್ಲಿ ಸಹಜವಾಗಿಯೇ ಮುಂಚೂಣಿಯಲ್ಲಿ ಇರಲಿದ್ದಾರೆ. ನಾವು ಖಂಡಿತವಾಗಿಯೂ ಜೊತೆಯಾಗಿ ಯಶಸ್ಸು ಕಾಣಲಿದ್ದೇವೆ," ಎಂಬ ವಿಶ್ವಾಸವನ್ನು ಎಂಸ್ಪೋರ್ಟ್‌ನ ಮುಖ್ಯಸ್ಥ ಅರ್ಮಾನ್ ಇಬ್ರಾಹಿಂ ತಿಳಿಸಿದ್ದಾರೆ.

ಅತಿಕಾ ತಾನು 6 ವರ್ಷವಿದ್ದಾಗಲೇ ಕಾರ್ಟಿಂಗ್ ಆರಂಭಿಸಿದ್ದಳು. 2021ರಲ್ಲಿ ಅವರು ಮೊದಲ ಸ್ಪರ್ಧಾತ್ಮಕ ರೇಸ್‌ನಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದಳು.

ಮೈಕ್ರೋ ಮ್ಯಾಕ್ಸ್‌ ಹಾಗೂ ಮಿನಿ ಎಕ್ಸ್‌30 ವಿಭಾಗಗಳಲ್ಲಿ ಸ್ಪರ್ಧಿಸುವ ಅತಿಕಾ ಮೀರ್, ಸದ್ಯ ಯುಎಇ ಐಎಎಂಇ ರಾಷ್ಟ್ರೀಯ ಚಾಂಪಿಯನ್‌ಶಿಪ್‌, ಮೆನಾ ಕಪ್‌ಗಳಲ್ಲಿ ರನ್ನರ್-ಅಪ್‌ ಆಗಿದ್ದಾರೆ. ಡಿಎಎಂಸಿ ಕಪ್‌ನಲ್ಲಿ 3ನೇ ಸ್ಥಾನ ಗಳಿಸಿದ್ದು ಸೇರಿ ಇನ್ನೂ ಅನೇಕ ಸ್ಪರ್ಧೆಗಳಲ್ಲಿ ಯಶಸ್ಸು ಸಾಧಿಸಿದ್ದಾಳೆ.

ಅತಿಕಾ ಯುಎಇ ಐಎಎಂಇ ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್‌ಶಿಪ್‌ (ಮಿನಿ ಆರ್‌ ವಿಭಾಗ)ದಲ್ಲಿ ರೇಸ್‌ ವಿಜೇತೆಯಾಗಿದ್ದು, ಹಲವು ರೇಸ್‌ಗಳಲ್ಲಿ ಪೋಲ್‌ ಪೊಸಿಷನ್ ಪಡೆದಿದ್ದಾಳೆ. ಅಲ್ಲದೇ ಅತಿವೇಗದ ಲ್ಯಾಪ್‌ ಹಾಗೂ ಲ್ಯಾಪ್‌ ದಾಖಲೆಗಳನ್ನೂ ಹೊಂದಿದ್ದಾಳೆ.

"ನನಗೆ ಕೇವಲ 3 ವರ್ಷ ವಯಸ್ಸಿದ್ದಾಗಿನಿಂದಲೇ ನಮ್ಮ ತಂದೆ ರೇಸ್‌ನಲ್ಲಿ ಪಾಲ್ಗೊಳ್ಳುವುದನ್ನು ನಾನು ನೋಡಿದ್ದೇನೆ. ಅವರೊಂದಿಗೆ ನಾನು ಡ್ರೈವಿಂಗ್ ಟೆಕ್ನಿಕ್‌ಗಳನ್ನು ಹಾಗೂ ರೇಸಿಂಗ್ ಬಗ್ಗೆ ಚರ್ಚೆ ನಡೆಸುತ್ತೇನೆ. ಭಾರತೀಯ ರಾಷ್ಟ್ರೀಯ ರೇಸಿಂಗ್‌ನಲ್ಲಿ ಪಾಲ್ಗೊಳ್ಳುವುದು ನನಗೆ ಬಹಳ ಹೆಮ್ಮೆ ತಂದಿದೆ. 2022ರಲ್ಲಿ ಭಾರತದಲ್ಲೇ ನಾನು ಮೈಕ್ರೋ ಮ್ಯಾಕ್ಸ್‌ ವಿಭಾಗದಲ್ಲಿ ನನ್ನ ಮೊದಲ ರೇಸ್‌ನಲ್ಲಿ ಪಾಲ್ಗೊಂಡಿದ್ದೆ," ಎಂದು ಅತಿಕಾ ಮೀರ್ ಹೇಳಿದ್ದಾಳೆ.

Story first published: Saturday, June 8, 2024, 7:47 [IST]
Other articles published on Jun 8, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+