For Quick Alerts
ALLOW NOTIFICATIONS  
For Daily Alerts

ನವೆಂಬರ್ 1: ಲಂಕಾ ವಿರುದ್ಧ ಸೆಣೆಸಾಡಲು ಭಾರತ ಸಜ್ಜು; ನಿವೃತ್ತಿ ಘೋಷಿಸಿದ ಇಂಗ್ಲೆಂಡ್ ಕ್ರಿಕೆಟರ್: ಕ್ರೀಡಾ ಲೋಕದ ಇಂದಿನ ಸುದ್ದಿ

* ಏಕದಿನ ವಿಶ್ವಕಪ್‌ ಬೆನ್ನಲ್ಲೇ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 5 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಕೆಲವೇ ದಿನಗಳಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಲಿದೆ. ವಿಶ್ವಕಪ್ ಫೈನಲ್ ಪಂದ್ಯದ ಮೂರು ದಿನಗಳ ಬಳಿಕ ಸರಣಿ ಆರಂಭವಾಗಲಿದ್ದು, ಆಟಗಾರರಿಗೆ ವಿಶ್ರಾಂತಿ ಸಿಗುವುದು ಕಷ್ಟವಾಗಲಿದೆ ಆಟಗಾರರ ಕೆಲಸದ ಹೊರೆ ನಿರ್ವಹಣೆಯಲ್ಲಿ ಆಯ್ಕೆದಾರರು ನಂಬಿಕೆ ಇಟ್ಟಿರುವುದರಿಂದ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸರಣಿಯಿಂದ ವಿಶ್ರಾಂತಿ ಪಡೆಯುವ ಸಾಧ್ಯತೆ ಹೆಚ್ಚಾಗಿದೆ.

* ಏಕದಿನ ವಿಶ್ವಕಪ್ ಪಂದ್ಯಗಳ ವೇಳೆ ಪಟಾಕಿ ಸಿಡಿಸುವುದು ಸಂಭ್ರಮದ ಒಂದು ಭಾಗವಾಗಿದೆ. ಲೈಟ್‌ ಶೋ, ಸಿಡಿಮದ್ದಿನ ಪ್ರದರ್ಶನ ಸಾಕಷ್ಟು ಗಮನ ಸೆಳೆಯುತ್ತದೆ. ಆದರೆ ಮುಂಬೈ ಮತ್ತು ದೆಹಲಿ ಮಹಾನಗರಗಳಲ್ಲಿ ಈಗಾಗಲೇ ಗಾಳಿಯ ಗುಣಮಟ್ಟ ಕುಸಿದ ಕಾರಣ, ಈ ಎರಡೂ ನಗರಗಳಲ್ಲಿ ಏಕದಿನ ವಿಶ್ವಕಪ್ ಪಂದ್ಯಗಳ ವೇಳೆ ಪಟಾಕಿ ಸಿಡಿಸಿದೇ ಇರಲು ಬಿಸಿಸಿಐ ನಿರ್ಧರಿಸಿದೆ.

November 1, what happened in sports World: Todays Top sports news and headlines

* ಈ ಬಾರಿ ಕೂಡ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಇಂಪ್ಯಾಕ್ಟ್ ಪ್ಲೇಯರ್ ನಿಯಮ ಮುಂದುವರೆದಿದ್ದು, ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್‌ನ ಮುಂದಿನ ಆವೃತ್ತಿಯಲ್ಲೂ ಕೂಡ ಈ ನಿಯಮ ಇರಲಿದೆ ಎಂದು ವರದಿಯಾಗಿದೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿ 2023 ರಲ್ಲಿ, ಇಂಪ್ಯಾಕ್ಟ್ ಪ್ಲೇಯರ್ ನಿಯಮವನ್ನು ಸ್ವಲ್ಪ ಬದಲಾವಣೆ ಮಾಡಲಾಗಿದೆ, ಪಂದ್ಯದ ಸಮಯದಲ್ಲಿ ಯಾವುದೇ ಸಮಯದಲ್ಲಿ ತಂಡಗಳಿಗೆ ಇಂಪ್ಯಾಕ್ಟ್ ಪ್ಲೇಯರ್ ಆಯ್ಕೆ ಮಾಡಲು ಅವಕಾಶ ಮಾಡಿಕೊಟ್ಟಿತು. ಕಳೆದ ಆವೃತ್ತಿಯಲ್ಲಿ ಇದನ್ನು 14ನೇ ಓವರ್‌ಗೆ ಸೀಮಿತಗೊಳಿಸಲಾಗಿತ್ತು.

* ಶ್ರೀಲಂಕಾ ವಿರುದ್ಧದ ಪಂದ್ಯದ ಮೊದಲು ಮುಂಬೈನ ರೆಸ್ಟೋರೆಂಟ್‌ನಲ್ಲಿ ಭಾರತದ ಸ್ಟಾರ್ ಓಪನರ್ ಶುಭಮನ್ ಗಿಲ್ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ಅವರೊಂದಿಗೆ ಕಾಣಿಸಿಕೊಂಡರು. ಸಾರಾ ಕೆಂಪು ಬಣ್ಣದ ಉಡುಪಿನಲ್ಲಿ ಕಂಗೊಳಿಸಿದರೆ, ಗಿಲ್ ಜಾಕೆಟ್ ಮತ್ತು ಪ್ಯಾಂಟ್‌ನೊಂದಿಗೆ ಗಮನ ಸೆಳೆದರು. ಸಾರಾ ಮತ್ತು ಶುಭಮನ್ ರೆಸ್ಟೋರೆಂಟ್‌ನ ಹೊರಗೆ ಹೆಜ್ಜೆ ಹಾಕುತ್ತಿರುವ ವೀಡಿಯೊವನ್ನು ನೋಡಬಹುದು. ಶುಭಮನ್ ಗಿಲ್ ಮೊದಲು ರೆಸ್ಟೋರೆಂಟ್‌ನಿಂದ ಹೊರಬಂದರೆ, ಸಾರಾ ತನ್ನ ಸ್ನೇಹಿತರ ಜೊತೆ ಮಾತನಾಡುತ್ತಿದ್ದರು.

* ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ ಮಾತ್ರವಲ್ಲದೆ ನಂತರ ನಡೆಯಲಿರುವ ಪಾಕಿಸ್ತಾನ ವಿರುದ್ಧ ಪಂದ್ಯಕ್ಕೂ ಕೇನ್ ವಿಲಿಯಮ್ಸನ್ ಕಣಕ್ಕಿಳಿಯುವುದು ಅನುಮಾನವಾಗಿದೆ. ಸೋಮವಾರ ಕೇನ್ ವಿಲಿಯಮ್ಸನ್ ನೆಟ್ಸ್‌ನಲ್ಲಿ ಬ್ಯಾಟಿಂಗ್ ಅಭ್ಯಾಸವನ್ನು ನಡೆಸಿದ್ದರಾದರೂ ಸಂಪೂರ್ಣವಾಗಿ ಅವರು ಚೇತರಿಸಿಕೊಂಡಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಗಾಯಕ್ಕೆ ತುತ್ತಾಗಿರುವ ಹೆಬ್ಬೆರಳನ್ನು ಸುತ್ತಿಕೊಂಡಿರುವುದು ಕಂಡುಬಂದಿದೆ.

* ಪಾಕಿಸ್ತಾನದ ಪ್ರಮುಖ ವೇಗಿ ಶಾಹೀನ್ ಶಾ ಆಫ್ರಿದಿ ಬುಧವಾರ ಏಕದಿನ ಕ್ರಿಕೆಟ್‌ನಲ್ಲಿ ಹೊಸ ನಂಬರ್ ಒನ್ ಬೌಲರ್ ಆದರು, ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಈ ಸಾಧನೆಯನ್ನು ಮಾಡಿದರು. ಅವರು ಇತ್ತೀಚಿನ ಐಸಿಸಿ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿರುವ ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹೇಜಲ್‌ವುಡ್ ಅವರನ್ನು ಹಿಂದಿಕ್ಕಿದರು. ಬರೋಬ್ಬರಿ ಏಳು ಸ್ಥಾನಗಳನ್ನು ಜಿಗಿಯುವ ಮೂಲಕ ಶಾಹಿನ್ ಅಫ್ರಿದಿ ಮೊದಲ ಸ್ಥಾನಕ್ಕೆ ಬಂದರು.

* ಇಂಗ್ಲೆಂಡ್ ಕ್ರಿಕೆಟ್ ತಂಡದ ಆಟಗಾರ ಡೇವಿಡ್ ವಿಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಣೆ ಮಾಡಿದ್ದಾರೆ. ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಿರುವ ವಿಲ್ಲಿ ಇದು ತನ್ನ ಅಂತಿಮ ಅಂತಾರಾಷ್ಟ್ರೀಯ ಭಾರತದಲ್ಲಿ ನಡೆಯುತ್ತಿರುವ ಈ ಪ್ರತಿಷ್ಠಿತ ಕ್ರೀಡಾಕೂಟದ ಮೂಲಕ ಕ್ರಿಕೆಟ್‌ಗೆ ವಿದಾಯ ಹೇಳುವುದಾಗಿ ಘೋಷಣೆ ಮಾಡಿದ್ದಾರೆ. ಡೇವಿಡ್ ವಿಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ನಿವೃತ್ತಿಯ ಕುರಿತು ಘೋಷಣೆ ಮಾಡಿದ್ದಾರೆ. ಸುದೀರ್ಘ ಪೋಸ್ಟ್ ಮಾಡಿರುವ ಅವರು ತನ್ನ ನಿವೃತ್ತಿಯ ಸಮಯ ಬಂದಿದೆ ಎಂದು ತನಗೆ ಅನಿಸುತ್ತಿರುವುದಾಗಿ ಬರೆದುಕೊಂಡಿದ್ದಾರೆ.

* ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್ ಅವರ ಅಬ್ಬರದ ಪ್ರದರ್ಶನ ಮುಂದುವರಿದಿದೆ. ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಡಿಕಾಕ್ ಈ ಬಾರಿಯ ವಿಶ್ವಕಪ್ ಟೂರ್ನಿಯ ನಾಲ್ಕನೇ ಶತಕವನ್ನು ಸಿಡಿಸಿದ್ದಾರೆ. ಈ ಮೂಲಕ ಡಿಕಾಕ್ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಕುಮಾರ್ ಸಂಗಕ್ಕರ ಅವರೊಂದಿಗೆ ವಿಶೇಷ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

* ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ತಂಡದ ಗೆಲುವಿನ ಓಟ ಮುಂದುವರಿದಿದೆ. ಸೆಮಿಫೈನಲ್‌ಗೇರುವ ಸ್ಪರ್ಧೆಯಲ್ಲಿ ಮುಂಚೂಣಿಯಲ್ಲಿರುವ ಎರಡು ತಂಡಗಳಾದ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಈ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿತ್ತು. ಆದರೆ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಕಿವೀಸ್ ಪಡೆಯನ್ನು ಸಂಪೂರ್ಣವಾಗಿ ಮಂಡಿಯೂರುವಂತೆ ಮಾಡಿದೆ. ಆರಂಭದಲ್ಲಿ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ್ದ ದಕ್ಷಿಣ ಆಫ್ರಿಕಾ ಬಳಿಕ ಬೌಲಿಂಗ್‌ನಲ್ಲಿಯೂ ಅಮೋಘ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಬರೊಬ್ಬರಿ 190 ರನ್‌ಗಳ ಅಂತರದಿಂದ ಗೆಲುವು ಸಾಧಿಸಿದೆ.

* ಟೀಮ್ ಇಂಡಿಯಾ ಈ ಬಾರಿಯ ವಿಶ್ವಕಪ್‌ನಲ್ಲಿ 7ನೇ ಪಂದ್ಯವನ್ನಾಡಲು ಸಜ್ಜಾಗಿದೆ. ಈ ಬಾರಿ ಟೀಮ್ ಇಂಡಿಯಾಗೆ ಎದುರಾಳಿಯಾಗಿರುವುದು ಶ್ರೀಲಂಕಾ. ಟೀಮ್ ಇಂಡಿಯಾ ಈ ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಾ ಅಬ್ಬರಿಸಿದ್ದರೆ ಶ್ರೀಲಂಕಾ ತಂಡ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿದ್ದು ಸೆಮಿಫೈನಲ್ ಸ್ಪರ್ಧೆಯಿಂದ ಹೊರಬೀಳುವ ಹಂತದಲ್ಲಿದೆ. ಹೀಗಾಗಿ ಕೊನೆಯ ಹಂತದಲ್ಲಿ ಲಂಕಾ ತಂಡ ತನ್ನೆಲ್ಲಾ ಶಕ್ತಿಯನ್ನು ಒಗ್ಗೂಡಿಸಿ ಹೋರಾಟ ನಡೆಸುವ ನಿರೀಕ್ಷೆಯಲ್ಲಿದ್ದು ಪಂದ್ಯ ತೀವ್ರ ಕುತೂಹಲ ಮೂಡಿಸಿದೆ.

Story first published: Wednesday, November 1, 2023, 23:58 [IST]
Other articles published on Nov 1, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+