* ವಿಶ್ವಕಪ್‌ನಲ್ಲಿ ಹೀನಾಯ ಸೋಲು ಅನುಭವಿಸಿ ಲೀಗ್ ಹಂತದಿಂದ ನಿರ್ಗಮಿಸಿರುವ ಶ್ರೀಲಂಕಾ ತಂಡಕ್ಕೆ ಐಸಿಸಿ ಶಾಕ್ ನೀಡಿದೆ. ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ಐಸಿಸಿ ಅಮಾನತು ಮಾಡಿದೆ. ಶ್ರೀಲಂಕಾ ಕ್ರಿಕೆಟ್ ಮಂಡಳಿಯಲ್ಲಿ ಅಲ್ಲಿನ ಸರ್ಕಾರದ ಅತಿಯಾದ ಹಸ್ತಕ್ಷೇಪವನ್ನು ಉಲ್ಲೇಖಿಸಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಈ ನಿರ್ಧಾರ ತೆಗೆದುಕೊಂಡಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ತನ್ನ ಈ ನಿರ್ಧಾರವನ್ನು ರದ್ದುಗೊಳಿಸುವವರೆಗೆ ಶ್ರೀಲಂಕಾ ತಂಡ ಮುಂದಿನ ಯಾವುದೇ ಐಸಿಸಿ ಟೂರ್ನಿಗಳಲ್ಲಿ ಭಾಗವಹಿಸುವಂತಿಲ್ಲ ಎನ್ನುವುದು ಗಮನಾರ್ಹ. ಹೀಗಾಗಿ ವಿಶ್ವಕಪ್ ಟೂರ್ನಿಯಿಂದ ನಿರ್ಗಮಿಸಿರುವ ಶ್ರೀಲಂಕಾ ತಂಡಕ್ಕೆ ಭಾರೋ ದೊಡ್ಡ ಆಘಾತ ಉಂಟಾಗಿದೆ.
* ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಅಫ್ಘಾನಿಸ್ತಾನ ತಂಡ ಪಾಕಿಸ್ತಾನಕ್ಕಿಂತಲೂ ಅದ್ಭುತವಾದ ಕ್ರಿಕೆಟ್ ಆಡಿದೆ ಎಂದು ಸ್ವತಃ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಆಟಗಾರ ಶೋಯೆಬ್ ಮಲಿಕ್ ಅಭಿಪ್ರಾಯಪಟ್ಟಿದ್ದಾರೆ. ಅಫ್ಘಾನಿಸ್ತಾನ ತಂಡ ತನ್ನ ಕೊನೆಯ ಲೀಗ್ ಪಂದ್ಯವನ್ನು ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಶುಕ್ರವಾರ ಆಡಿತ್ತು. ಈ ಪಂದ್ಯದಲ್ಲಿ ಸೋಲು ಅನುಭವಿಸುವ ಮೂಲಕ ಅಫ್ಘನ್ ಪಡೆ ಈ ವಿಶ್ವಕಪ್ ಟೂರ್ನಿಯಲ್ಲಿ ತನ್ನ ಹೋರಾಟವನ್ನು ಅಧಿಕೃತವಾಗಿ ಅಂತ್ಯಗೊಳಿಸಿದ ಬಳಿಕ ಶೋಯೆಬ್ ಮಲಿಕ್ ಈ ಹೇಳಿಕೆ ನೀಡಿದ್ದಾರೆ.

* ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಆಡುವ ಬಳಗದಲ್ಲಿ ಬದಲಾವಣೆ ಮಾಡಿಕೊಂಡು ಕಣಕ್ಕಿಳಿಯುವ ಸಾಧ್ಯತೆಯಿಲ್ಲ ಎನ್ನುವ ಸುಳಿವು ನೀಡಿದ್ದಾರೆ. ಸೆಮಿಫೈನಲ್ ಮುಂದಿಟ್ಟುಕೊಂಡು ಈ ಹಂತದಲ್ಲಿ ಯಾವುದೇ ಬದಲಾವಣೆ ಅಸಾಧ್ಯ ಎನ್ನುವ ರೀತಿಯಲ್ಲಿ ದ್ರಾವಿಡ್ ಮಾತನ್ನಾಡಿದ್ದಾರೆ.
* ರೋಹಿತ್ ಶರ್ಮಾ ಪಡೆಯ ವಿಶ್ವಕಪ್‌ನ ಗೆಲುವಿನ ಓಟಕ್ಕೆ ಲೀಗ್ ಹಂತದಲ್ಲಿ ಈವರೆಗೆ ಯಾವ ತಂಡದಿಂದಲೂ ಸವಾಲೊಡ್ಡಲು ಸಾಧ್ಯವಾಗಲೇ ಇಲ್ಲ. ಟೂರ್ನಿಯ ಅಂತಿಮ ಲೀಗ್ ಪಂದ್ಯವನ್ನಾಡಲು ಟೀಮ್ ಇಂಡಿಯಾ ಸಜ್ಜಾಗಿದ್ದು ಈ ಪಂದ್ಯದಲ್ಲಿ ನೆದರ್ಲೆಂಡ್ಸ್ ತಂಡ ಭಾರತಕ್ಕೆ ಎದುರಾಳಿಯಾಗಿ ಕಣಕ್ಕಿಳಿಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯವಹಿಸಲು ಸಿದ್ಧವಾಗಿದೆ.
* ಭಾರತ ಹಾಗೂ ನೆದರ್ಲೆಂಡ್ಸ್ ತಂಡಗಳ ವಿರುದ್ಧದ ಪಂದ್ಯ ಭಾನುವಾರ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
* ಭಾರತ ಹಾಗೂ ನೆದರ್ಲೆಂಡ್ಸ್ ವಿರುದ್ಧದ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಂಗಳೂರಿನ ಪಿಚ್ ಸಾಮಾನ್ಯವಾಗಿ ಬ್ಯಾಟಿಂಗ್ ಸ್ನೇಹಿ ಪಿಚ್ ಎನ್ನುವುದರಲ್ಲಿ ಅನುಮಾನವಿಲ್ಲ. ಆದರೆ ಅದ್ಭುತವಾಗಿ ಬೌಲಿಂಗ್ ನಡೆಸಿದರೆ ಬೌಲಿಂಗ್ ವಿಭಾಗಕೂಡ ಇಲ್ಲಿ ಮಿಂಚು ಹರಿಸುವ ಅವಕಾಶವಿದೆ. ಟಾಸ್ ಗೆದ್ದ ತಂಡ ಇಲ್ಲಿ ಮೊದಲಿಗೆ ಬ್ಯಾಟಿಂಗ್ ನಡೆಸುವ ಸಾಧ್ಯತೆಯಿದೆ. ಕಳೆದ ಐದು ಪಂದ್ಯಗಳಲ್ಲಿ ಇಲ್ಲಿನ ಸರಾಸರಿ ಸ್ಕೋರ್ 253 ರನ್.
* ಬಾಂಗ್ಲಾದೇಶದ ವಿರುದ್ಧದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಆಸ್ಟ್ರೇಲಿಯಾ ಅಮೋಘ ಗೆಲುವು ಸಾಧಿಸಿದೆ. ಬಾಂಗ್ಲಾದೇಶ ನೀಡಿದ 307 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ ಕೇವಲ ಎರಡು ವಿಕೆಟ್ ಕಳೆದುಕೊಂಡು ಈ ಗುರಿಯನ್ನು 44.4 ಓವರ್‌ಗಳಲ್ಲಿ ಬೆನ್ನಟ್ಟುವಲ್ಲಿ ಯಶಸ್ವಿಯಾಯಿತು. ಹೀಗಾಗಿ ಈ ಪಂದ್ಯವನ್ನು ಆಸ್ಟ್ರೇಲಿಯಾ 8 ವಿಕೆಟ್‌ಗಳ ಅಂತರದಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ.