For Quick Alerts
ALLOW NOTIFICATIONS  
For Daily Alerts

ನವೆಂಬರ್ 15: ಫೈನಲ್‌ಗೆ ಪ್ರವೇಶಿಸಿದ ಭಾರತ; ವಿರಾಟ್ ಕೊಹ್ಲಿ 50ನೇ ಶತಕ: ಕ್ರೀಡಾ ಲೋಕದ ಇಂದಿನ ಸುದ್ದಿ

* ಏಕದಿನ ವಿಶ್ವಕಪ್ 2023ರ ಫೈನಲ್‌ಗೆ ಭಾರತ ಕ್ರಿಕೆಟ್ ತಂಡ ಪ್ರವೇಶ ಪಡೆದುಕೊಂಡಿದೆ. ಈ ಮೂಲಕ 3ನೇ ಬಾರಿಗೆ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯುವ ಅವಕಾಶವನ್ನು ಹೊಂದಿದೆ. ನ್ಯೂಜಿಲೆಂಡ್ ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿದ್ದು 70 ರನ್‌ಗಳ ಭರ್ಜರಿ ಅಂತರದಿಂದ ಗೆಲುವು ಸಾಧಿಸಿದೆ. ಈ ಮೂಲಕ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ನಾಲ್ಕನೇ ಬಾರಿಗೆ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ.

* ಇಂದಿನ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ ಭಾರತ ತಂಡ ಭರ್ಜರಿ 397 ರನ್‌ಗಳನ್ನು ಕಲೆಹಾಕಿತ್ತು. ವಿರಾಟ್ ಕೊಹ್ಲಿಯ ವಿಶ್ವದಾಖಲೆಯ ಶತಕ ಹಾಗೂ ಶ್ರೇಯಸ್ ಐಯ್ಯರ್ ಅವರ ಅಮೋಘ ಶತಕದ ಕಾರಣದಿಂದಾಗಿ ಟೀಮ್ ಇಂಡಿಯಾ ಬೃಹತ್ ಮೊತ್ತವನ್ನು ಕಲೆಹಾಕಿತ್ತು. ಈ ಮೊತ್ತವನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ ಕೂಡ ಅದ್ಭುತ ಹೋರಾಟವನ್ನು ನೀಡಿತು. ಆದರೆ ಟೀಮ್ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರ ಅಮೋಘ ಬೌಲಿಂಗ್ ಪ್ರದರ್ಶನ ಕಿವೀಸ್ ಪಡೆಗೆ ಭಾರೀ ಅಡ್ಡಿಯಾದರು. ಏಳು ವಿಕೆಟ್‌ಗಳ ಗೊಂಚಲು ಪಡೆದ ಮೊಹಮ್ಮದ್ ಶಮಿ ಭಾರತದ ಗೆಲುವಿನಲ್ಲಿ ಮತ್ತೊಮ್ಮೆ ದೊಡ್ಡ ಪಾತ್ರವನ್ನು ನಿರ್ವಹಿಸಿದ್ದಾರೆ.

November 15, what happened in sports World: Todays Top sports news and headlines

* ನ್ಯೂಜಿಲೆಂಡ್ ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಗೆಲುವು ಸಾಧಿಸಿದೆ. ಬ್ಯಾಟಿಂಗ್‌ನಲ್ಲಿ ವಿರಾಟ್ ಕೊಹ್ಲಿ, ಶ್ರೇಯಸ್ ಐಯ್ಯರ್, ಶುಬ್ಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಅವರ ಅಮೋಘ ಪ್ರದರ್ಶನದ ಕಾರಣದಿಂದ ಬೃಹತ್ ರನ್‌ಗಳಿಸಿತ್ತು ಭಾರತ ತಂಡ. ಆದರೆ ವಾಂಖೆಡೆಯ ಬ್ಯಾಟಿಂಗ್ ಸ್ನೇಹಿ ಪಿಚ್‌ನಲ್ಲಿ ಕಿವೀಸ್ ದಾಂಡಿಗರು ಒಂದು ಹಂತದಲ್ಲಿ ಭಾರತ ತಂಡಕ್ಕೆ ದಿಟ್ಟವಾಗಿ ಪ್ರತಿರೋಧವೊಡ್ಡಲು ಆರಂಭಿಸಿದಾಗ ಮ್ಯಾಚ್ ವಿನ್ನರ್ ಆಗಿ ಮತ್ತೊಮ್ಮೆ ಹೊರಹೊಮ್ಮಿದವರು ಮೊಹಮ್ಮದ್ ಶಮಿ.

* ಟೀಮ್ ಇಂಡಿಯಾದ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ ಏಕಿನ ಕ್ರಿಕೆಟ್‌ನಲ್ಲಿ 50ನೇ ಶತಕ ಬಾರಿಸಿ ಅಬ್ಬರಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದೆ, ಈ ಪಂದ್ಯದಲ್ಲಿ ಕೊಹ್ಲಿ ಏಕದಿನ ಕ್ರಿಕೆಟ್‌ನ 50ನೇ ಶತಕವನ್ನು ಪೂರ್ಣಗೊಳಿಸಿದ್ದಾರೆ. ಈ ಮೂಲಕ ಕ್ರಿಕೆಟ್‌ನ ದೇವರು ಎನಿಸಿಕೊಂಡಿರುವ ಸಚಿನ್ ತೆಂಡೂಲ್ಕರ್ ಅವರ ವಿಶ್ವದಾಖಲೆಯನ್ನು ಮುರಿದಿದ್ದಾರೆ ವಿರಾಟ್ ಕೊಹ್ಲಿ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 113 ಎಸೆತಗಳನ್ನು ಎದುರಿಸಿದ್ದು 117 ರನ್‌ಗಳನ್ನು ಬಾರಿಸಿ ಟಿಮ್ ಸೌಥಿಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್ಗೆ ಸೇರಿಕೊಂಡರು. ಈ ಅದ್ಭುತ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್ ಸೇರಿಕೊಂಡಿದೆ. 103.54ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟಿಂಗ್ ನಡೆಸಿದ್ದಾರೆ.

* ಮಂಗಳವಾರದಂದು ಪಾಕಿಸ್ತಾನದ ಸುದ್ದಿ ವಾಹಿನಿಯೊಂದರಲ್ಲಿ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರ ಕುರಿತ ಹೇಳಿಕೆಯು ಭಾರೀ ಕೋಲಾಹಲಕ್ಕೆ ಕಾರಣವಾದ ನಂತರ, ಪಾಕಿಸ್ತಾನ ತಂಡದ ಮಾಜಿ ಆಲ್‌ರೌಂಡರ್ ಅಬ್ದುಲ್ ರಝಾಕ್ ಸಾರ್ವಜನಿಕ ಕ್ಷಮೆಯಾಚಿಸಿದ್ದಾರೆ. ಅಬ್ದುಲ್ ರಝಾಕ್ ಅವರು ಕ್ಷಮೆಯಾಚನೆಯ ವಿಡಿಯೋವನ್ನು ಸಾಮಾ ಟಿವಿಯಲ್ಲಿ ಪೋಸ್ಟ್ ಮಾಡಿದ್ದು, 'ಯಾರ ಭಾವನೆಯನ್ನು ನೋಯಿಸಲು ಬಯಸುವುದಿಲ್ಲ' ಎಂದು ಹೇಳಿದ್ದಾರೆ.

* ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನ ಇತಿಹಾಸದಲ್ಲಿ 50 ಸಿಕ್ಸರ್‌ಗಳನ್ನು ಸಿಡಿಸಿದ ಮೊದಲ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ನಿರ್ಣಾಯಕ ಸೆಮಿಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಈ ಹಿಂದೆ 27 ಪಂದ್ಯಗಳಲ್ಲಿ 49 ಸಿಕ್ಸರ್ ಸಿಡಿಸಿದ್ದ ಕ್ರಿಸ್ ಗೇಲ್ ದಾಖಲೆ ಹಿಂದಿಕ್ಕಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ರೋಹಿತ್ ಶರ್ಮಾ ಮತ್ತೊಂದು ಕ್ರಿಸ್ ಗೇಲ್ ದಾಖಳೆ ಹಿಂದಿಕ್ಕಿದ್ದಾರೆ. ಒಂದೇ ವಿಶ್ವಕಪ್ ಆವೃತ್ತಿಯಲ್ಲಿ ಅತಿ ಹೆಚ್ಚು ಸಿಡಿಸಿದ ದಾಖಲೆಯನ್ನು ಕೂಡ ಕ್ರಿಸ್ ಗೇಲ್ ಹೊಂದಿದ್ದರು. 2015ರ ವಿಶ್ವಕಪ್ ಆವೃತ್ತಿಯಲ್ಲಿ ಗೇಲ್ 26 ಸಿಕ್ಸರ್ ಸಿಡಿಸಿದ್ದರು. ಈ ದಾಖಲೆಯನ್ನು ಕೂಡ ರೋಹಿತ್ ಶರ್ಮಾ ಹಿಂದಿಕ್ಕಿದ್ದಾರೆ.

* ಐದು ಬಾರಿಯ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ತಂಡ ಗುರುವಾರ ದಕ್ಷಿಣ ಆಫ್ರಿಕಾ ತಂಡನ್ನು ಎರಡನೇ ಸೆಮಿಫೈನಲ್‌ನಲ್ಲಿ ಎದುರಿಸಲು ಸಜ್ಜಾಗಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದ್ದು ಎರಡು ತಂಡಗಳು ಕೂಡ ಫೈನಲ್ ಪಂದ್ಯದಲ್ಲಿ ಆಡುವ ಅರ್ಹತೆ ಗಿಟ್ಟಿಸಿಕೊಳ್ಳಲು ಸರ್ವ ಪ್ರಯತ್ನ ನಡೆಸಲಿದೆ. ಈ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿಕೊಂಡು ಬಂದಿರುವ ದಕ್ಷಿಣ ಆಫ್ರಿಕಾ ತಂಡ ಲೀಗ್ ಹಂತದಲ್ಲಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿತ್ತು. ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಪ್ರಿಕಾ ತಂಡಗಳು ಸಮಾನ ಅಂಕವನ್ನು ಪಡೆದುಕೊಂಡಿದ್ದರೂ ನೆಟ್‌ರನ್‌ರೆಟ್‌ನಲ್ಲಿ ಆಸ್ಟ್ರೇಲಿಯಾ ಹಿಂದಿದ್ದ ಕಾರಣ ಮೂರನೇ ಸ್ಥಾನದೊಂದಿಗೆ ಸೆಮಿಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ

Story first published: Wednesday, November 15, 2023, 23:57 [IST]
Other articles published on Nov 15, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+