ನವೆಂಬರ್ 16: ಫೈನಲ್ ಪಂದ್ಯಕ್ಕೆ ಸಜ್ಜಾದ ಭಾರತ; ಕೋಚ್ ಆಗಿ ಮುಂದುವರಿಯುತ್ತಾರಾ ದ್ರಾವಿಡ್?: ಕ್ರೀಡಾ ಲೋಕದ ಇಂದಿನ ಸುದ್ದಿ
* ಟೀಮ್ ಇಂಡಿಯಾ ಈ ಬಾರಿಯ ವಿಶ್ವಕಪ್‌ನಲ್ಲಿ ಅಜೇಯ ಓಟವನ್ನು ಮುಂದುವರಿಸಿದ್ದು ಫೈನಲ್‌ಗೆ ಲಗ್ಗೆಯಿಟ್ಟಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಅಮೋಘ ಪ್ರದರ್ಶನ ನೀಡಿದ ಭಾರತ ತಂಡ ಬೃಹತ್ ಗೆಲುವಿನೊಂದಿಗೆ ಫೈನಲ್‌ಗೆ ಲಗ್ಗೆಯಿಟ್ಟಿದೆ. ಟೀಮ್ ಇಂಡಿಯಾದ ಈ ಪ್ರದರ್ಶನದ ಬಗ್ಗೆ ಮಾತನಾಡುತ್ತಾ ಇಂಗ್ಲೆಂಡ್ ಮಾಜಿ ನಾಯಕ ನಾಸಿರ್ ಹುಸೇನ್ ಓರ್ವ ಕ್ರಿಕೆಟಿಗನ ಬಗ್ಗೆ ವಿಶೇಷ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಆತನೇ ಭಾರತ ತಂಡದ ನಿಜವಾದ ಹೀರೋ ಎಂದಿದ್ದಾರೆ ನಾಸಿರ್ ಹುಸೇನ್. ಅಂದಹಾಗೆ ನಾಸಿರ್ ಹುಸೇನ್ ಹೀಗೆ ಮುಕ್ತಕಂಠದಿಂದ ಹೊರಗಳಿದ್ದು ಬೇರೆ ಯಾರನ್ನೂ ಅಲ್ಲ. ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರನ್ನು. ನಾಯಕ ರೋಹಿತ್ ಶರ್ಮಾ ಸಂಪೂರ್ಣ ಭಾರತ ತಂಡದ ಆಟದ ವಿಧಾನವನ್ನು ಬದಲಾಯಿಸಿದರು ಎಂದಿದ್ದಾರೆ ನಾಸಿರ್ ಹುಸೇನ್
* ಟೀಮ್ ಇಂಡಿಯಾ ನ್ಯೂಜಿಲೆಂಡ್ ತಂಡವನ್ನು ಸೆಮಿಫೈನಲ್‌ನಲ್ಲಿ ಭರ್ಜರಿಯಾಗಿ ಮಣಿಸಿ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಈ ಮೂಲಕ ನಾಲ್ಕನೇ ಬಾರಿಗೆ ಏಕದಿನ ವಿಶ್ವಕಪ್ ಫೈನಲ್‌ಗೆ ಪ್ರವೇಶ ಪಡೆದುಕೊಂಡಿರುವ ಭಾರತ ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರುವ ನಿರೀಕ್ಷೆಯಲ್ಲಿದೆ. ಫೈನಲ್ ಪಂದ್ಯ ಮುಂದಿನ ಭಾನುವಾರ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿದೆ. ಇನ್ನು ಈ ಫೈನಲ್ ಪಂದ್ಯಕ್ಕಾಗಿ ಮೂರು ದಿನಗಳು ಬಾಕಿಯಿದ್ದು ಮುಂದಿನ ಭಾನುವಾರ ಆಯೋಜನೆಯಾಗಲಿದೆ. ಆದರೆ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಇಂದೇ ಅಹ್ಮದಾಬಾದ್‌ಗೆ ಪ್ರಯಾಣ ಬೆಳೆಸಿದ್ದು ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆ ತನ್ನ ಅಂತಿಮ ಸಿದ್ಧತೆಯನ್ನು ಮಾಡಿಕೊಳ್ಳಲಿದೆ.

* ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಎರಡು ತಂಡಗಳು ಕೂಡ ಈ ಬಾರಿಯ ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ಅಬ್ಬರಿಸಿದೆ. ಹೀಗಾಗಿ ಸೆಮಿಫೈನಲ್‌ನಲ್ಲಿ ನಡೆಯಲಿರುವ ಈ ಎರಡು ತಂಡಗಳ ಮುಖಾಮುಖಿಯಲ್ಲಿ ಯಾವ ತಂಡಕ್ಕೆ ಮೇಲುಗೈ ದೊರೆಯಲಿದೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.
* ಟೀಮ್ ಇಂಡಿಯಾ ವಿಶ್ವಕಪ್ ಟೂರ್ನಿಯ ಫೈನಲ್‌ಗೆ ಪ್ರವೇಶ ಪಡೆದ ಬಳಿಕ ಆಕಾಶ್ ಚೋಪ್ರ ತಂಡದ ನಾಯಕ ರೋಹಿತ್ ಶರ್ಮಾ ಬಗ್ಗೆ ಭಾರೀ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಬುಧವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ತಂಡವನ್ನು 70 ರನ್‌ಗಳ ಅಂತರದಿಂದ ಮಣಿಸಿದ್ದು ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಲು ಮತ್ತಷ್ಟು ಸನಿಹಕ್ಕೆ ತಲುಪಿದೆ. ಮೊದಲಿಗೆ ಬ್ಯಾಟಿಂಗ್ ನಡೆಸಿದ ಭಾರತ ನಾಲ್ಕು ವಿಕೆಟ್ ನಷ್ಟಕ್ಕೆ 397 ರನ್ ಗಳಿಸಿತ್ತು. ಅದಾದ ಬಳಿಕ ಕಿವೀಸ್ ಪಡೆಯನ್ನು 48.5 ಓವರ್‌ಗಳಲ್ಲಿ 327 ರನ್‌ಗಳಿಗೆ ಆಲೌಟ್ ಮಾಡಿದೆ. ಈ ಭರ್ಜರಿ ಗೆಲುವಿನ ಬಳಿಕ ಆಕಾಶ್ ಚೋಪ್ರ ರೋಹಿತ್ ಶರ್ಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
* ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ಬ್ಯಾಟಿಂಗ್ ವಿಭಾಗ ಆಘಾತಕಾರಿ ಪ್ರದರ್ಶನ ನೀಡಿದೆ. ಟೂರ್ನಿಯುದ್ದಕ್ಕೂ ಅಬ್ಬರಿಸಿದ್ದ ದಕ್ಷಿಣ ಆಫ್ರಿಕಾ ಬ್ಯಾಟರ್‌ಗಳು ನಿರ್ಣಾಯಕ ಘಟ್ಟದಲ್ಲಿ ಕೈಕೊಟ್ಟಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಬೌಲರ್‌ಗಳು ಅದ್ಬುತ ಯಶಸ್ಸು ಸಾಧಿಸಿದ್ದು ದಕ್ಷೀಣ ಆಫ್ರಿಕಾ ದಾಂಡಿಗರು ಆಘಾತ ಅನುಭವಿಸಿದ್ದಾರೆ. ಆದರೆ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಅಕ್ಷರಶಃ ಆಸರೆಯಾಗಿದ್ದು ಡೇವಿಡ್ ಮಿಲ್ಲರ್. ಏಕಾಂಗಿ ಹೋರಾಟ ನೀಡಿದ ಡೇವಿಡ್ ಮಿಲ್ಲರ್ 116 ಎಸೆತಗಳಲ್ಲಿ ಅಮೂಲ್ಯ 101 ರನ್‌ಗಳನ್ನು ಬಾರಿಸಿ ಮಿಂಚಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications