* 42 ದಿನಗಳ ರಣರೋಚಕ ಏಕದಿನ ವಿಶ್ವಕಪ್ ಟೂರ್ನಿ ಅಂತ್ಯದ ಹಂತಕ್ಕೆ ಬಂದಿದೆ. ನವೆಂಬರ್ 19 ಭಾನುವಾರ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗಲಿದ್ದು ನರೇಂದ್ರ ಮೋದಿ ಕ್ರೀಡಾಂಗಣ ಈ ಮೆಗಾ ಪಂದ್ಯಕ್ಕೆ ಆತಿರ್ಥಯ ವಹಿಸಲಿದೆ. ಈ ಫೈನಲ್ ಪಂದ್ಯದ ಆರಂಭಕ್ಕೂ ಮುನ್ನ ವರ್ಣರಂಚಿತ ಸಮಾರೋಪ ಸಮಾರಂಭ ಆಯೋಜನೆಯಾಗಲಿದೆ. ಈ ವಿಶೇಷ ಸಂದರ್ಭದಕ್ಕೆ ಅನೇಕ ಕ್ಷೇತ್ರಗಳ ದಿಗ್ಗಜರು, ತಾರೆಯರು ಭಾಗಿಯಾಗಲಿದ್ದಾರೆ ಜೊತೆಗೆ ಭಾರತೀಯ ವಾಯುಸೇನೆಯ ಸೂರ್ಯಕಿರಣ್ ತಂಡದಿಂದ ಏರ್‌ಶೋ ವಿಶೇಷ ಮೆರುಗು ನೀಡಲಿದೆ.
* ಐಸಿಸಿ ಏಕದಿನ ವಿಶ್ವಕಪ್ ಸರಣಿ ಕೊನೆಯ ಹಂತಕ್ಕೆ ಬಂದು ನಿಂತಿದೆ. ಭಾನುವಾರ ನಡೆಯಲಿರುವ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಫೈನಲ್ ಪಂದ್ಯದಲ್ಲಿ ಭಾರತ, ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಎಂದು ಪರಿಗಣಿಸಲಾಗಿದೆ. ಅಲ್ಲದೆ ಪ್ರಸಕ್ತ ಟೂರ್ನಿಯಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿ ಎಲ್ಲರ ಚಿತ್ತ ಕದ್ದಿದೆ. ಹಾಗಿದ್ದರೆ ಈವರೆಗಿನ ವಿಶ್ವಕಪ್ ಟೂರ್ನಿಯ ಫೈನಲ್ ನಲ್ಲಿ ಶತಕ ಬಾರಿಸಿದ ಆಟಗಾರರ ಪಟ್ಟಿಯ ದೊಡ್ಡದಿದೆ. ಆದರೆ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಯಾವುದೇ ಒಬ್ಬ ಆಟಗಾರ ಶತಕ ಬಾರಿಸದೆ ಇರುವುದು ಶತಕದ ಬರ ಅನುಭವಿಸುತ್ತಿದೆ.

* 2023ರ ವಿಶ್ವಕಪ್ ಅಂತಿಮ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಭಾನುವಾರ ಅಹ್ಮದಾಬಾದ್‌ನಲ್ಲಿ ನಡೆಯಲಿದೆ. ಪ್ರಸಕ್ತ ವಿಶ್ವಕಪ್ ನಲ್ಲಿ ಭಾರತ ತಂಡ ಅತ್ಯಂತ ಬಲಿಷ್ಠ ಸ್ಥಿತಿಯಲ್ಲಿದೆ. ಟೀಮ್ ಇಂಡಿಯಾ 10 ಪಂದ್ಯಗಳನ್ನು ಆಡಿದ್ದು ಎಲ್ಲ ಪಂದ್ಯದಲ್ಲಿ ಜಯ ಸಾಧಿಸಿದೆ. ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧವೂ ಅವರ ದಾಖಲೆ ಉತ್ತಮವಾಗಿದೆ. ಶಮಿ ಜೊತೆಗೆ ರವೀಂದ್ರ ಜಡೇಜಾ ಕೂಡ ಸಾಕಷ್ಟು ವಿಕೆಟ್ ಕಬಳಿಸಿದ್ದಾರೆ.
* ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಭಾನುವಾರ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲು ಸಿದ್ಧವಾಗಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಈ ಪಂದ್ಯಕ್ಕೆ ಆತಿಥ್ಯವಹಿಸಲಿದ್ದು ಕ್ರಿಕೆಟ್ ಜಗತ್ತು ಈ ಪಂದ್ಯದ ಮೇಲೆ ಚಿತ್ತ ನೆಟ್ಟಿದೆ. ಇನ್ನು ಟೀಮ್ ಇಂಡಿಯಾ ಸುಮಾರು ಒಂದು ದಶಕದಿಂದ ಯಾವುದೇ ಐಸಿಸಿ ಟ್ರೋಫಿ ಗೆಲ್ಲಲು ಸಾಧ್ಯವಾಗಿರಲಿಲ್ಲ. ಈ ವಿಶ್ವಕಪ್ ಮೂಲಕ ಭಾರತದ ಈ ಐಸಿಸಿ ಟ್ರೋಫಿಯ ಬರ ನೀಗಲಿದೆ ಎನ್ನುವ ನಿರೀಕ್ಷೆ ಕೋಟ್ಯಂತರ ಅಭಿಮಾನಿಗಳಲ್ಲಿದೆ. ಟೀಮ್ ಇಂಡಿಯಾ ಈ ಬಾರಿಯ ವಿಶ್ವಕೊ್ ಟೂರ್ನಿಯಲ್ಲಿ ಆರಂಭದಿಂದಲೇ ಅಬ್ಬರದ ಪ್ರದರ್ಶನ ನೀಡುತ್ತಾ ಬಂದಿದ್ದು ಎಲ್ಲಾ ಪಂದ್ಯದಲ್ಲಿಯೂ ಗೆಲುವು ಸಾಧಿಸಿದೆ. ಹೀಗಾಗಿ ಅದೇ ರೀತಿಯ ಪ್ರದರ್ಶನವನ್ನು ಫೈಬಲ್ ಪಂದ್ಯದಲ್ಲಿಯೂ ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ತನ್ನ ಅತ್ಯುತ್ತಮ ಪ್ರದರ್ಶನದ ವಿಶ್ವಾಸ ಮೂಡಿಸಿದೆ.
* ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯವನ್ನು ಯಾವ ಪಿಚ್‌ನಲ್ಲಿ ಆಡಲಿದೆ ಎನ್ನುವುದು ಬಹಿರಂಗವಾಗಿದೆ. ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯಕ್ಕೆ ಹೊಸ ಪಿಚ್‌ನ ಬದಲಾಗಿ ಈಗಾಗಲೇ ಬಳಸಿರುವ ನಿಧಾನಗತಿಯ ಪಿಚ್ ಬಳಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕುತೂಹಲಕಾರಿ ಸಂಗತಿಯೆಂದರೆ ಇದೇ ಮೈದಾನದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಆಡಿರುವ ಪಿಚ್‌ನಲ್ಲಿಯೇ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಫೈನಲ್ ಪಂದ್ಯವನ್ನು ಆಡಲಿದೆ ಎನ್ನಲಾಗುತ್ತಿದೆ. ದಿ ಇಂಡಿಯನ್ ಎಕ್ಸ್‌ಪ್ರೆಸ್ ಈ ಬಗ್ಗೆ ವರದಿ ಮಾಡಿದ್ದು ಕುತೂಹಲ ಮೂಡಿಸಿದೆ. ಅಕ್ಟೋಬರ್ 14ರಂದು ನಡೆದಿದ್ದ ಆ ಪಂದ್ಯವನ್ನು ಭಾರತ ಏಕಪಕ್ಷೀಯವಾಗಿ ಗೆದ್ದುಬೀಗಿತ್ತು. ಇದೀಗ ಫೈನಲ್‌ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿರುವಾಗ ಮತ್ತೆ ಅದೇ ರೀತಿಯ ಫಲಿತಾಂಶ ಬರಲಿದೆಯಾ ಎನ್ನುವುದು ಕೂಡ ಕುತೂಹಲ ಮೂಡಿಸಿದೆ.
* ಆಸ್ಟ್ರೇಲಿಯಾ ತಂಡ ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್‌ಗೆ ಪ್ರವೇಶಿಸಿದರ ಬಗ್ಗೆ ಸ್ವತಃ ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರೇ ಅಚ್ಚರಿ ವ್ಯಕ್ತಪಡಿಸಿದ್ದಾರೆ. ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೂ ಮುನ್ನ ಮಾಧ್ಯಮಗಳ ಜೊತೆಗೆ ಮಾತನಾಡಿದ ಪ್ಯಾಟ್ ಕಮ್ಮಿನ್ಸ್ ಆರಂಭದಲ್ಲಿ ಅನುಭವಿಸಿದ ಸೋಲಿನ ಬಳಿಕ ಆಸ್ಟ್ರೇಲಿಯಾ ತಂಡ ಕಮ್‌ಬ್ಯಾಕ್ ಮಾಡಿ ಈ ಹಂತದವರೆಗೆ ತಲುಪಲಿದೆ ಎಂದು ನಾನು ಭಾವಿಸಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ.
* ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ವಿರುದ್ಧದ ಈ ವಿಶ್ವಕಪ್‌ನ ಅಂತಿಮ ಪಂದ್ಯ ಭಾನುವಾರ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಪಂದ್ಯದ ಆರಂಭಕ್ಕೂ ಮುನ್ನ ಅದ್ದೂರಿ ಸಮಾರೋಪ ಸಮಾರಂಭ ಆಯೋಜನೆಯಾಗಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
* ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಇನ್ನು ಕೆಲವೇ ಗಂಟೆಗಳು ಮಾತ್ರವೇ ಬಾಕಿಯಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಈ ಬಾರಿಯ ವಿರ್ಶವಕಪ್ ಟೂರ್ನಿಯ ಸರಣಿಶ್ರೇಷ್ಠ ಆಟಗಾರ ಪ್ರಶಸ್ತಿ ಯಾರಿಗೆ ಸಲ್ಲಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಟೀಮ್ ಇಂಡಿಯಾದ ಓರ್ವ ಆಟಗಾರನನ್ನು ಉಲ್ಲೇಖಿಸಿರುವ ಯುವರಾಜ್ ಸಿಂಗ್ ಈತ ಉಳಿದೆಲ್ಲಾ ಆಟಗಾರರಿಗಿಂತಲೂ ಈ ಪ್ರಶಸ್ತಿಗೆ ಹೆಚ್ಚು ಅರ್ಹ ಎಂದಿದ್ದಾರೆ. ಅಂದಹಾಗೆ ಯುವರಾಜ್ ಸಿಂಗ್ ಹೇಗೆ ಹೇಳಿದ್ದು ಟೀಮ್ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ವಿಚಾರವಾಗಿ. ಭಾರತದ ಪರವಾಗಿ ಹಲವು ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿರುವ ಶಮಿ ಅವರಿಗೆ ಈ ಟೂರ್ನಿಯ ಶ್ರೇಷ್ಠ ಆಟಗಾರ ಪ್ರಶಸ್ತಿ ನೀಡಬೇಕು ಎಂದಿದ್ದಾರೆ ಯುವಿ.
* ಪಂದ್ಯ ನಡೆಯುವ ದಿನವಾದ ನವೆಂಬರ್ 19 ಭಾನುವಾರ ಅಹ್ಮದಾಬಾದ್‌ನಲ್ಲಿ ಮಳೆಯಾಗುವ ಸಾಧ್ಯತೆ ನಿಶ್ಚಿತವಾಗಿ ಇಲ್ಲ ಎನ್ನುತ್ತಿದೆ ಹವಾಮಾನ ವರದಿ. ಹಾಗಾಗಿ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಅಡ್ಡಿಯಾಗುವ ಸಾಧ್ಯತೆಯಿಲ್ಲ. ಬಿಸಿಯಾದ ವಾತಾವರಣದಿಂದ ಕೂಡಿದ್ದು 32 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರುವ ಸಾಧ್ಯತೆಯಿದೆ. ಮೋಡ ಕುಡ ಇರುವ ಸಾಧ್ಯತೆಯಿಲ್ಲ ಹಾಗೂ ಮಳೆಯ ಆತಂಕವಿರುವುದಿಲ್ಲ.