* ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಟಿ20 ಸರಣಿ ಇಂದಿನಿಂದ ಆರಂಭವಾಗಲಿದೆ. ಐದು ಪಂದ್ಯಗಳ ಈ ಸರಣಿಗೆ ಸೂರ್ಯಕುಮಾರ್ ಯಾದವ್ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸೂರ್ಯಕುಮಾರ್ ಯಾದವ್ ಮಾಧ್ಯಮಗಳ ಜೊತೆಗೆ ಮಾತನಾಡಿದ್ದು ಆಟಗಾರರಿಂದ ತಾನು ಏನನ್ನು ನಿರೀಕ್ಷಿಸುತ್ತಿದ್ದೇನೆ ಎನ್ನುವುದನ್ನು ಹೇಳಿಕೊಂಡಿದ್ದಾರೆ.
* ಗಾಯದಿಂದಾಗಿ ಕಳೆದ ಎರಡು ತಿಂಗಳಿನಿಂದ ಮೈದಾನದಿಂದ ದೂರವಾಗಿದ್ದ ಅಕ್ಷರ್ ಪಟೇಲ್ ಮತ್ತೆ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಅಕ್ಷರ್ ಪಟೇಲ್ ಆಯ್ಕೆಯಾಗುವ ಭಾರತ ತಂಡಕ್ಕೆ ಕಮ್‌ಬ್ಯಾಕ್ ಮಾಡಲು ಸಜ್ಜಾಗುತ್ತಿದ್ದಾರೆ. ಮುಂದಿನ ಜೂನ್‌ನಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್ ಟೂರ್ನಿಯ ದೃಷ್ಟಿಯಿಂದ ಅಕ್ಷರ್ ಈ ಸರಣಿಯ ಮೂಲಕ ತಮ್ಮ ಅತ್ಯುತ್ತಮ ಪ್ರದರ್ಶನ ನೀಡುವತ್ತ ಚಿತ್ತ ನೆಡಲಿದ್ದಾರೆ.

* ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್‌ಗಳ ಅಂತರದ ಆಘಾತಕಾರಿ ಸೋಲು ಅನುಭವಿಸುವ ಮೂಲಕ ವಿಶ್ವಕಪ್ ಗೆಲುವಿನ ಕನಸನ್ನು ಭಗ್ನಗೊಳಿಸಿಕೊಂಡಿದೆ. ಈ ಸೋಲಿನ ಮೂಲಕ ಭಾರತೀಯ ಕ್ರಿಕೆಟ್‌ನ ಮತ್ತೊಂದು ಯುಗ ಅಂತ್ಯವಾಗುವ ಸಾಧ್ಯತೆ ದಟ್ಟವಾಗಿದೆ. ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿ ಕರ್ತವ್ಯ ನಿರ್ವಹಿಸಿದ್ದ ರಾಹುಲ್ ದ್ರಾವಿಡ್‌ಗೆ ಆ ವಿಶ್ವಕಪ್ ಫೈನಲ್ ಪಂದ್ಯವೇ ಅಂತಿಮವಾಗುವ ಸಾಧ್ಯತೆಯಿದೆ.
* ಎಮಿರೇಟ್ಸ್ ಕ್ರಿಕೆಟ್ ಬೋರ್ಡ್ (ಇಸಿಬಿ) ಭ್ರಷ್ಟಾಚಾರ ವಿರೋಧಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದಲ್ಲಿ ಐಸಿಸಿಯ ಸ್ವತಂತ್ರ ಭ್ರಷ್ಟಾಚಾರ ವಿರೋಧಿ ನ್ಯಾಯಮಂಡಳಿಯಿಂದ ವೆಸ್ಟ್ ಇಂಡೀಸ್‌ನ ಮಾಜಿ ಆಟಗಾರ ಮರ್ಲಾನ್ ಸ್ಯಾಮ್ಯುಯೆಲ್ಸ್ ಅವರಿಗೆ ಆರು ವರ್ಷಗಳ ಕಾಲ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿಷೇಧ ಹೇರಲಾಗಿದೆ.
* ಬೆಂಗಳೂರು ಕಂಬಳ ಸಂಘಟಕರು ಮುಖ್ಯ ಅತಿಥಿ ಪಟ್ಟಿಯಿಂದ ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಫೇಡರೇಶನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರ ಹೆಸರನ್ನು ಕೈಬಿಡಲು ನಿರ್ಧರಿಸಿದ್ದಾರೆ. ನವೆಂಬರ್ 25 ಹಾಗೂ 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಸ್ಪರ್ಧೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಭಾರತೀಯ ಕುಸ್ತಿ ಫೇಡರೇಶನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಅವರು ಆಗಮಿಸಬೇಕಾಗಿತ್ತು. ಆದರೆ ದೊಡ್ಡ ಮಟ್ಟದ ವಿರೋಧ ಕೇಳಿ ಬಂದ ನಂತರ, ಅವರ ಹೆಸರನ್ನು ಆಮಂತ್ರಣ ಪತ್ರಿಕೆಯಿಂದ ಕೈಬಿಡಲಾಗಿದೆ.
* "ಚೆನ್ನೈಯಿಂದ ಅಹ್ಮದಾಬಾದ್‌ವರೆಗಿನ ನಮ್ಮ ಪ್ರಯಾಣ ನಿರಾಸೆಯೊಂದಿಗೆ ಅಂತ್ಯವಾಗಿದೆ. ಆದರೆ ಆರು ವಾರಗಳಲ್ಲಿ ನಾವು ನೀಡಿದ ಪ್ರದರ್ಶನದ ಬಗ್ಗೆ ನಮಗೆ ಹೆಮ್ಮೆಯಿದೆ. ನೋವಿನ ಹೊರತಾಗಿಯೂ ನಾವು ಮುಂದಿನ ದಿನಗಳಲ್ಲಿ ನಮ್ಮ ಪರಿಶ್ರಮವನ್ನು ಮತ್ತಷ್ಟು ಹೆಚ್ಚಿಸಲಿದ್ದೇವೆ" ಎಂದು ಕುಲ್‌ದೀಪ್ ಯಾದವ್ 'ಎಕ್ಸ್' ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
* ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಭಾರತ ತಂಡದ ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಮಾದರಿಯಲ್ಲಿ ಅಡುವುದನ್ನು ಮುಂದುವರಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಈ ಇಬ್ಬರು ಆಟಗಾರರು ಕೂಡ ಆಡಬೇಕು ಎಂದಿದ್ದಾರೆ ಗಂಭೀರ್. ವರದಿಗಳ ಪ್ರಕಾರ ರೋಹಿತ್ ಶರ್ಮಾ ಟಿ20 ಮಾದರಿಯಲ್ಲಿ ಇನ್ನು ಮುಂದೆ ಆಡುವ ಸಾಧ್ಯತೆ ಕಡಿಮೆಯಿದೆ.
* ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (ಎನ್‌ಸಿಎ) ಮುಖ್ಯಸ್ಥರಾಗಿರುವ ವಿವಿಎಸ್ ಲಕ್ಷ್ಮಣ್ ಅವರು ಮುಖ್ಯ ಕೋಚ್ ಹುದ್ದೆ ವಹಿಸಿಕೊಳ್ಳಲಿದ್ದಾರೆ. ಎನ್‌ಸಿಎ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ವಿವಿಎಸ್ ಲಕ್ಷ್ಮಣ್ ಅವರು ಹಂಗಾಮಿ ಮುಖ್ಯ ಕೋಚ್ ಆಗಿಯೂ ಸಹ ಕಾರ್ಯನಿರ್ವಹಿಸುತ್ತಿದ್ದಾರೆ. ಲಕ್ಷ್ಮಣ್ ಅವರು ಪ್ರಸ್ತುತ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡದ ಮಾರ್ಗದರ್ಶಕನ ಹುದ್ದೆ ವಹಿಸಿಕೊಂಡಿದ್ದಾರೆ. ವಿವಿಎಸ್ ಲಕ್ಷ್ಮಣ್ ಅವರು ಭಾರತ ಕ್ರಿಕೆಟ್ ತಂಡದ ಮುಂದಿನ ಮುಖ್ಯ ಕೋಚ್ ಆಗುವ ಬಯಕೆಯನ್ನು ತೋರಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.