* ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಸೆಣೆಸಾಟಕ್ಕೆ ಇನ್ನು ಕೆಲವೇ ಗಂಟೆಗಳು ಮಾತ್ರವೇ ಬಾಕಿಯಿದೆ. ಈ ಪಂದ್ಯಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಇನ್ನಿಲ್ಲದಂತೆ ಕಾಯುತ್ತಿದ್ದಾರೆ ಎನ್ನುವುದು ಸ್ಪಷ್ಟ. ಎರಡು ತಂಡಗಳು ಕೂಡ ಬಲಿಷ್ಠ ಆಟಗಾರರ ಪಡೆಯೊಂದಿಗೆ ಕಣಕ್ಕಿಳಿಯಲಿದ್ದು ತೀವ್ರ ಪೈಪೋಟಿ ನಡೆಯುವ ನಿರೀಕ್ಷೆಯಿದೆ.
* ಇನ್ನು ಇತ್ತೀಚೆಗಷ್ಟೇ ಭಾರತ ಏಷ್ಯಾಕಪ್‌ನಲ್ಲಿ ಎರಡು ಬಾರಿ ಪಾಕಿಸ್ತಾನ ತಂಡವನ್ನು ಎದುರಿಸಿದ್ದು ಎರಡು ಬಾರಿಯೂ ಮಣಿಸಿತ್ತು. ಅಲ್ಲದೆ ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ಭಾರತದ ವಿರುದ್ಧ ಈವರೆಗೂ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಹೀಗಾಗಿ ಪಾಕಿಸ್ತಾನ ತಂಡಕ್ಕೆ ಈ ಪಂದ್ಯದಲ್ಲಿ ಗೆಲುವು ಸಾಧಿಸಲು ತವಕಿಸುತ್ತಿದೆ. ಇನ್ನು ಭಾರತ ತವರಿನಲ್ಲಿ ನಡೆಯುತ್ತಿರುವ ಈ ಬಾರಿಯ ವಿಶ್ವಕಪ್‌ನಲ್ಲಿ ನಿರೀಕ್ಷೆಯಂತೆಯೇ ಗೆಲುವು ಸಾಧಿಸ ಬೇಕಿದ್ದರೆ ಪಾಕಿಸ್ತಾನದ ವಿರುದ್ಧದ ಈ ಪಂದ್ಯದ ಗೆಲುವು ತಂಡದ ಆತ್ಮವಿಶ್ವಾಸ ಹೆಚ್ಚಲು ಮತ್ತಷ್ಟು ಸಹಕಾರಿಯಾಗಲಿದೆ.

* ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 134 ರನ್‌ಗಳ ಸೋಲಿನ ನಂತರ ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ಮಾತನಾಡುತ್ತಾ ಆಸ್ಟ್ರೇಲುಯಾ ತಂಡದ ಗೆಲುವಿಗಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ. 1992ರ ನಂತರ ನಡೆದ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ತನ್ನ ಆರಂಭಿಕ ಎರಡು ಪಂದ್ಯಗಳಲ್ಲಿ ಸೋತಿರುವುದು ಇದೇ ಮೊದಲು. "ನನ್ನ ಪ್ರಕಾರ ಕ್ವಿಂಟನ್ ಬಹಳ ಅದ್ಭುತವಾಗಿ ಬ್ಯಾಟಿಂಗ್ ನಡೆಸಿದರು. ಅವರನ್ನು ಔಟ್ ಮಾಡಲು ನಮಗೆ ಅವಕಾಶವೇ ದೊರೆಯಲಿಲ್ಲ. ಆದರೆ ಅವರಿದ್ಧ ಸ್ಥಿತಿಯಲ್ಲಿ ನಾನು ಅವರನ್ನು 310 ರನ್‌ಗಳಿಗೆ ಆಲೌಟ್ ಮಾಡಿದ್ದು ಖುಷಿ ನೀಡಿದೆ. ಅದನ್ನು ನಾನು ಬೆನ್ನಟ್ಟಬಹುದು ಎನಿಸಿತ್ತು. ಆದರೆ ಅವರ ಬೌಲರ್‌ಗಳ ನಮ್ಮ ವಿರುದ್ಧದ ಈ ಪಂದ್ಯಕ್ಕಾಗಿ ಅದ್ಭುತವಾಗಿ ಸಿದ್ಧವಾಗಿದ್ದರು. ಅವರ ಬೌಲರ್‌ಗಳು ಅದ್ಭುತವಾಗಿ ಪ್ರದರ್ಶನ ನೀಡಿದರು. ಲೈಟ್‌ನ ಅಡಿಯಲ್ಲಿ ಅದು ಬಹಳಷ್ಟು ಪರಿಣಾಮಕಾರಿಯಾಗಿತ್ತು" ಎಂದಿದ್ದಾರೆ ಪ್ಯಾಟ್ ಕಮ್ಮಿನ್ಸ್.
* ಶುಭಮನ್ ಗಿಲ್ ಬಗ್ಗೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ, ಭಾರತ ಪಾಕಿಸ್ತಾನ ಪಂದ್ಯದಲ್ಲಿ ಶುಭಮನ್ ಗಿಲ್ ಆಡಬೇಕು ಎಂದು ಒತ್ತಾಯಿಸಿದ್ದಾರೆ. ಶುಭಮನ್ ಗಿಲ್ ಸದ್ಯ ನೆಟ್‌ನಲ್ಲಿ ಅಭ್ಯಾಸ ಮಾಡುತ್ತಿದ್ದು ನಾಳಿನ ಪಂದ್ಯದಲ್ಲಿ ಆಡುವ ಸಾಧ್ಯತೆ ಹೆಚ್ಚಿದೆ. "ನಾನು ಶುಭಂ ಗಿಲ್ ಅನ್ನು ಬಲಪಡಿಸಿದ್ದೇನೆ, ನಾನು ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವಾಗ ವಿಶ್ವಕಪ್‌ನಲ್ಲಿ ಆಡಿದ್ದೇನೆ ಎಂದು ನಾನು ಅವನಿಗೆ ಹೇಳಿದೆ, ಆದ್ದರಿಂದ ನಾನು ತಂಡವನ್ನು ಸೇರಲು ಬೇಗನೆ ಸಿದ್ಧನಾದೆ. ಆಶಾದಾಯಕವಾಗಿ, ಅವರು ಭಾರತ ಮತ್ತು ಪಾಕಿಸ್ತಾನದ ಪಂದ್ಯಕ್ಕೆ ಸಿದ್ಧರಾಗುತ್ತಾರೆ." ಎಂದು ಹೇಳಿದ್ದಾರೆ.
* ಈ ಬಾರಿಯ ವಿಶ್ವಕಪ್ ಟೂರ್ನಿ ಅಕ್ಟೋಬರ್ 5ರಂದು ಆರಂಭವಾಗಿತ್ತು. ಆದರೆ ಯಾವುದೇ ಮನರಂಜನಾ ಕಾರ್ಯಕ್ರಮಗಳು ಇಲ್ಲದೆ ಸರಳವಾಗಿ ಈ ಪಂದ್ಯ ನಡೆದಿತ್ತು. ಆದರೆ ಉದ್ಘಾಟನಾ ಪಂದ್ಯ ತಾಣವಾದ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದ್ದು ಈ ಪಂದ್ಯಕ್ಕೂ ಮುನ್ನ ಅದ್ದೂರಿ ಮನರಂಜನಾ ಕಾರ್ಯಕ್ರಮವನ್ನು ಬಿಸಿಸಿಐ ಹಮ್ಮಿಕೊಂಡಿದೆ. ಈ ವಿಚಾರವನ್ನು ಬಿಸಿಸಿಐ ಅಧಿಕೃತವಾಗಿ 'ಎಕ್ಸ್'ನಲ್ಲಿ ಹಂಚಿಕೊಂಡಿದೆ.
* ಗುರುವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ 134 ರನ್‌ಗಳಿಂದ ಸೋಲನುಭವಿಸಿತು. ಏಕದಿನ ವಿಶ್ವಕಪ್ 2023ರ ಪಂದ್ಯಾವಳಿಯಲ್ಲಿ ಆಸ್ಟ್ರೇಲಿಯಾಗೆ ಅಂದುಕೊಂಡಂತೆ ಏನೂ ಆಗುತ್ತಿಲ್ಲ, ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ ಸೋತಿದ್ದ ಆಸ್ಟ್ರೇಲಿಯಾ ಈಗ ದಕ್ಷಿಣ ಆಫ್ರಿಕಾ ವಿರುದ್ಧ ಕೂಡ ಸೋಲನುಭವಿಸಿದ್ದು ಭಾರಿ ಮುಖಭಂಗ ಅನುಭವಿಸಿದೆ. ಗುರವಾರ ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ 134 ರನ್‌ಗಳಿಂದ ಸೋತಿದೆ. ಆದರೆ ಪಂದ್ಯದ ವೇಳೆ ಮೂರನೇ ಅಂಪೈರ್ ತೀರ್ಪಿನ ವಿರುದ್ಧ ಆಸ್ಟ್ರೇಲಿಯಾ ತಂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಐಸಿಸಿಯಿಂದ ಸ್ಪಷ್ಟೀಕರಣ ಕೇಳಿದೆ.
* ಲಾಸ್ ಏಂಜಲೀಸ್‌ನಲ್ಲಿ 2028 ರ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಕ್ರಿಕೆಟ್ ಅನ್ನು ಸೇರಿಸಲು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ (ಐಒಸಿ) ಕಾರ್ಯನಿರ್ವಾಹಕರು ಅನುಮೋದಿಸಿದ್ದಾರೆ, ಅಕ್ಟೋಬರ್ 13 ರಂದು ಸಮಿತಿಯ ನಿರ್ಧಾರವನ್ನು ಘೋಷಣೆ ಮಾಡಲಾಗಿದೆ. ಮುಂಬೈನಲ್ಲಿ ನಡೆದ ಕಾರ್ಯಕಾರಿ ಮಂಡಳಿಯ ಸಭೆಯ ಎರಡನೇ ದಿನದ ನಂತರ ಮಾತನಾಡಿದ ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿ ಅಧ್ಯಕ್ಷ ಥಾಮಸ್ ಬಾಚ್, ಟ್ವೆಂಟಿ 20 ಕ್ರಿಕೆಟ್‌ಗೆ ಲಾಸ್ ಏಂಜಲಿಸ್ ಒಲಿಂಪಿಕ್ ಸಂಘಟಕರು ಮಾಡಿದ ಪ್ರಸ್ತಾಪವನ್ನು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು
* ವಿಶ್ವಕಪ್ ಟೂರ್ನಿಯ 11ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಬಾಂಗ್ಲಾದೇಶ ತಮಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಬಾಂಗ್ಲಾದೇಶ ತಂಡವನ್ನು ಸಾಧಾರಣ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದೆ. ಮೊದಲಿಗೆ ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ ಈ ಪಂದ್ಯದಲ್ಲಿ ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 245 ರನ್‌ಗಳನ್ನು ಗಳಿಸಲು ಶಕ್ತವಾಗಿದೆ.