* ಭಾನುವಾರ, ಅಕ್ಟೋಬರ್ 15ರಂದು ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ 13ನೇ ಪಂದ್ಯದಲ್ಲಿ ಕ್ರಿಕೆಟ್ ಜನಕ ಹಾಗೂ ಹಾಲಿ ವಿಶ್ವ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ಅಫ್ಘಾನಿಸ್ತಾನ ತಂಡ 69 ರನ್‌ಗಳ ಭರ್ಜರಿ ಗೆಲುವು ಸಾಧಿಸಿತು. ಈ ಐತಿಹಾಸಿಕ ಗೆಲುವನ್ನು ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದ ಸಂತ್ರಸ್ತರಿಗೆ ಅಫ್ಘಾನಿಸ್ತಾನದ ಸ್ಪಿನ್ ಬೌಲಿಂಗ್ ಆಲ್‌ರೌಂಡರ್ ಮುಜೀಬ್-ಉರ್-ರೆಹಮಾನ್ ಅವರು ತಮ್ಮ ಪಂದ್ಯಶ್ರೇಷ್ಠ ಆಟಗಾರ ಪ್ರಶಸ್ತಿಯನ್ನು ಅರ್ಪಿಸಿದರು.
* ಭಾನುವಾರ, ಅಕ್ಟೋಬರ್ 15ರಂದು ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್ ಗುಂಪಿನ ಪಂದ್ಯದಲ್ಲಿ ದುರ್ಬಲ ಅಫ್ಘಾನಿಸ್ತಾನ ವಿರುದ್ಧ 69 ರನ್‌ಗಳ ಹೀನಾಯ ಸೋಲಿನ ನಂತರ ಇಂಗ್ಲೆಂಡ್ ಅತ್ಯಂತ ಕಳಪೆ ದಾಖಲೆಯನ್ನು ಮುಡಿಗೇರಿಸಿಕೊಂಡಿದೆ. ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯ ಇತಿಹಾಸದಲ್ಲಿ ಟೆಸ್ಟ್ ಆಡುವ ಎಲ್ಲಾ 11 ದೇಶಗಳ ವಿರುದ್ಧ ಸೋಲು ಕಂಡ ಇಂಗ್ಲೆಂಡ್ ಮೊದಲ ತಂಡವೆಂಬ ಕುಖ್ಯಾತಿಗೆ ಒಳಗಾಗಿದೆ.

* ಪಾಕಿಸ್ತಾನ ಮಾಜಿ ಆಲ್‌ರೌಂಡರ್ ಶೋಯೆಬ್ ಮಲಿಕ್ ಅವರು ಭಾರತ ವಿರುದ್ಧ ಸೋಲಿನ ನಂತರ, ಬಾಬರ್ ಅಜಂ ಪಾಕಿಸ್ತಾನ ತಂಡದ ನಾಯಕತ್ವವನ್ನು ತೊರೆಯಬೇಕು ಎಂದು ಹೇಳಿದರು. ಏಕೆಂದರೆ, ಬಾಬರ್ ಅಜಂ ಬ್ಯಾಟರ್ ಆಗಿ ತಂಡಕ್ಕೆ ಹೆಚ್ಚಿನ ಕೊಡುಗೆ ನೀಡಬಹುದು. ಇದು ಪಾಕಿಸ್ತಾನ ತಂಡಕ್ಕೆ ಅದ್ಭುತಗಳನ್ನು ಮಾಡಬಹುದು ಎಂದು ಎಂದು ಪಾಕಿಸ್ತಾನ ತಂಡದ ಮಾಜಿ ನಾಯಕ ಶೋಯೆಬ್ ಮಲಿಕ್ ಗಮನಸೆಳೆದರು. "ನೋಡಿ, ನಾನು ಈ ಬಗ್ಗೆ ನನ್ನ ಪ್ರಾಮಾಣಿಕ ಅಭಿಪ್ರಾಯವನ್ನು ನೀಡುತ್ತೇನೆ. ಬಾಬರ್ ಅಜಂ ನಾಯಕತ್ವವನ್ನು ತೊರೆಯಬೇಕು ಎಂದು ನಾನು ಈಗಾಗಲೇ ಹಿಂದಿನ ಸಂದರ್ಶನಗಳಲ್ಲಿ ಹೇಳಿದ್ದೇನೆ, ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ಆಟಗಾರನಾಗಿ ಬಾಬರ್ ಅಜಂ ತನಗಾಗಿ ಮತ್ತು ತಂಡಕ್ಕಾಗಿ ಅದ್ಭುತಗಳನ್ನು ಮಾಡಬಹುದು," ಎಂದು ಶೋಯೆಬ್ ಮಲಿಕ್ ತಿಳಿಸಿದರು.
* ಪಾಕಿಸ್ತಾನದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಮೊಹಮ್ಮದ್ ರಿಜ್ವಾನ್ ಮೈದಾನದಲ್ಲಿ ನಮಾಜ್ ಮಾಡಿ ಗಾಜಾ ಜನರಿಗೆ ಬೆಂಬಲ ವ್ಯಕ್ತಪಡಿಸಿದ್ದಕ್ಕಾಗಿ ಸುಪ್ರೀಂ ಕೋರ್ಟ್ ವಕೀಲ ವಿನೀತ್ ಜಿಂದಾಲ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ (ಐಸಿಸಿ) ದೂರು ಸಲ್ಲಿಸಿದ್ದಾರೆ. ಇದು ದೂರುದಾರರ ಪ್ರಕಾರ "ಕ್ರೀಡಾ ಮನೋಭಾವವನ್ನು ವಿರುದ್ಧವಾಗಿದೆ,' ಎಂದು ಆರೋಪಿಸಲಾಗಿದೆ.
* ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ರಶೀದ್ ಲತೀಫ್ ಕುಲ್‌ದೀಪ್ ಯಾದವ್ ಬಗ್ಗೆ ಪ್ರಶಂಸನೀಯ ಮಾತುಗಳನ್ನಾಡಿ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ರಶೀದ್ ಲತೀಫ್ ಟೀಮ್ ಇಂಡಿಯಾದ ಸ್ಪಿನ್ನರ್ ಕುಲ್‌ದೀಪ್ ಯಾದವ್ ಬಗ್ಗೆ ಮಾತನಾಡುತ್ತಾ ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಈ ಸ್ಪಿನ್ನರ್ ಅತಿ ಹೆಚ್ಚು ವಿಕೆಟ್ ಪಡೆಯುವ ಆಟಗಾರ ಎನಿಸಿಕೊಳ್ಳಲಿದ್ದಾರೆ ಎಂದಿದ್ದಾರೆ. ಮೊದಲ ಮೂರು ಪಂದ್ಯಗಳಲ್ಲಿ ಕುಲ್‌ದೀಪ್ ಯಾದವ್ ಒಟ್ಟು ಐದು ವಿಕೆಟ್‌ಗಳನ್ನು ಸಂಪಾದಿಸಿ ಟೀಮ್ ಇಂಡಿಯಾದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
* 2028ರಲ್ಲಿ ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ ಕ್ರೀಡಾಕೂಟದಲ್ಲಿ ಕ್ರಿಕೆಟ್ ಕ್ರೀಡೆಯನ್ನು ಸೇರಿಸುವ ಪ್ರಸ್ತಾವನೆಗೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಸೋಮವಾರ, ಅಕ್ಟೋಬರ್ 16ರಂದು ಅಧಿಕೃತವಾಗಿ ತನ್ನ ಅನುಮೋದನೆಯನ್ನು ಘೋಷಿಸಿತು. ಮುಂಬೈನ ಅತ್ಯಾಧುನಿಕ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ 141ನೇ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಸಭೆಯಲ್ಲಿ ನಡೆಸಿದ ಮತದಾನದ ಅವಧಿಯಲ್ಲಿ ಈ ಪ್ರಸ್ತಾಪವನ್ನು ಸ್ವೀಕರಿಸಲಾಗಿದೆ. ಗಮನಾರ್ಹವಾಗಿ, ಇಬ್ಬರು ಐಒಸಿ ಸದಸ್ಯರು ಕ್ರಿಕೆಟ್ ಪ್ರಸ್ತಾಪವನ್ನು ವಿರೋಧಿಸಿದರು ಮತ್ತು ಒಬ್ಬರು ಮತದಾನದಿಂದ ದೂರವಿದ್ದರು.
* ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತು ಸಚಿನ್ ತೆಂಡೂಲ್ಕರ್ ನಡುವೆ ಯಾರು ಶ್ರೇಷ್ಠ ಕ್ರಿಕೆಟಿಗ ಎಂದು ಅವರ ಅಭಿಮಾನಿಗಳಲ್ಲಿ ಚರ್ಚೆ ನಡೆಯುತ್ತಿದ್ದಂತೆ, ಆಸ್ಟ್ರೇಲಿಯಾದ ಹಿರಿಯ ಆರಂಭಿಕ ಬ್ಯಾಟ್ಸ್‌ಮನ್ ಉಸ್ಮಾನ್ ಖವಾಜಾ ಇದೀಗ ಆ ಸಾಲಿಗೆ ಸೇರಿದ್ದಾರೆ. ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರಿಗಿಂತ ವಿರಾಟ್ ಕೊಹ್ಲಿ ಶ್ರೇಷ್ಠ ಏಕದಿನ ಬ್ಯಾಟ್ಸ್‌ಮನ್ ಎಂದು ಆಸ್ಟ್ರೇಲಿಯಾದ ಕ್ರಿಕೆಟಿಗ ಉಸ್ಮಾನ್ ಖವಾಜಾ ಶ್ಲಾಘಿಸಿದ್ದಾರೆ. ಆಸ್ಟ್ರೇಲಿಯಾದ ಎಡಗೈ ಟೆಸ್ಟ್ ಆರಂಭಿಕ ಬ್ಯಾಟರ್ ಉಸ್ಮಾನ್ ಖವಾಜಾ ಅವರು, ವಿರಾಟ್ ಕೊಹ್ಲಿ ಕಡಿಮೆ ಪಂದ್ಯಗಳನ್ನು ಆಡಿದ್ದರೂ ಸಹ ಸಚಿನ್ ತೆಂಡೂಲ್ಕರ್ ಅವರ ಏಕದಿನ ಶತಕಗಳ ಸಂಖ್ಯೆಗೆ ಬಹಳ ಹತ್ತಿರದಲ್ಲಿದ್ದಾರೆ ಎಂದು ಹೇಳಿದ್ದಾರೆ.
* ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ತಂಡ ಮೂರನೇ ಪಂದ್ಯದಲ್ಲಿ ಮೊದಲ ಗೆಲುವಿನ ರುಚಿ ಕಂಡಿದೆ. ಶ್ರೀಲಂಕಾ ವಿರುದ್ಧ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ಅದ್ಭುತವಾಗಿ ಕಮ್‌ಬ್ಯಾಕ್ ಮಾಡಿದ್ದು 5 ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ತನ್ನ ಖಾತೆ ತೆರೆದಿದೆ. ಸತತ ಎರಡು ಸೋಲು ಕಂಡು ಅಂಕಪಟ್ಟಿಯಲ್ಲಿ ಕೆಳಕ್ಕೆ ಕುಸಿದಿದ್ದ ಆಸ್ಟ್ರೇಲಿಯಾಗೆ ಈ ಗೆಲುವು ಮಹತ್ವ ಪಡೆದುಕೊಂಡಿದೆ. ಮತ್ತೊಂದೆಡೆ ಶ್ರೀಲಂಕಾ ಸತತ ಮೂರನೇ ಪಂದ್ಯದಲ್ಲಿಯೂ ಸೋಲು ಅನುಭವಿಸುವ ಮೂಲಕ ಹೀನಾಯ ಸ್ಥಿತಿಯಲ್ಲಿದೆ.