For Quick Alerts
ALLOW NOTIFICATIONS  
For Daily Alerts

ಅಕ್ಟೋಬರ್ 18: ಮತ್ತೊಂದು ಸೆಣಸಾಟಕ್ಕೆ ಭಾರತ ಸಜ್ಜು; ಮುಂದುವರಿದ ಕಿವೀಸ್ ಗೆಲುವಿನ ಓಟ: ಕ್ರೀಡಾ ಲೋಕದ ಇಂದಿನ ಸುದ್ದಿ

* ದಕ್ಷಿಣ ಆಫ್ರಿಕಾ ತಂಡಕ್ಕೆ ನೆದರ್ಲ್ಯಾಂಡ್ಸ್ ವಿರುದ್ಧ ಮೊದಲ ಆಘಾತಕಾರಿ ಸೋಲು ಎದುರಾಯಿತು. ಮಳೆ-ಬಾಧಿತ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 38 ರನ್‌ಗಳಿಂದ ಸೋಲಿಸುವ ಮೂಲಕ ನೆದರ್ಲ್ಯಾಂಡ್ಸ್ ಗಮನಾರ್ಹ ಸಾಧನೆ ಮಾಡಿದೆ. ಕೇವಲ 11 ತಿಂಗಳ ಅಂತರದಲ್ಲಿ ಎರಡು ಐಸಿಸಿ ಪಂದ್ಯಾವಳಿಗಳಲ್ಲಿ ಎರಡೂ ಗೆಲುವು ಸಂಭವಿಸುವುದರೊಂದಿಗೆ ಟಿ20 ಮತ್ತು ಏಕದಿನ ಪಂದ್ಯಗಳೆರಡರಲ್ಲೂ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿದ ಮೊದಲ ಮತ್ತು ಏಕೈಕ ಟೆಸ್ಟ್ ಆಡದ ತಂಡವಾಗಿ ನೆದರ್ಲ್ಯಾಂಡ್ಸ್ ಐತಿಹಾಸಿಕ ಸಾಧನೆ ದಾಖಲಿಸಿದೆ.

* ಇದೀಗ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಿರುದ್ಧ ಹಲವು ಆರೋಪಗಳನ್ನು ಮಾಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ (ಐಸಿಸಿ) ಮಂಗಳವಾರ ದೂರು ನೀಡಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ವಿರುದ್ಧ ಪಾಕಿಸ್ತಾನದ ಮಾಜಿ ಲೆಗ್ ಸ್ಪಿನ್ನರ್ ದಾನಿಶ್ ಕನೇರಿಯಾ ವಾಗ್ದಾಳಿ ನಡೆಸಿದ್ದಾರೆ.

October 18, what happened in sports World: Todays Top sports news and headlines

* ಸುಮಾರು 9 ವರ್ಷಗಳ ಸುದೀರ್ಘ ಒಡನಾಟದ ನಂತರ, ನ್ಯೂಜಿಲೆಂಡ್‌ನ ಮಾಜಿ ವೇಗದ ಬೌಲರ್‌ ಹಾಗೂ ಯಶಸ್ವಿ ಬೌಲಿಂಗ್ ಕೋಚ್ ಶೇನ್ ಬಾಂಡ್ ಅವರಿಂದ ಬೇರ್ಪಟ್ಟಿರುವುದಾಗಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಬುಧವಾರ, ಅಕ್ಟೋಬರ್ 18ರಂದು ಘೋಷಿಸಿದೆ. ಶೇನ್ ಬಾಂಡ್ 2015ರಲ್ಲಿ 5 ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಚಾಂಪಿಯನ್ ತಂಡದೊಂದಿಗೆ ಕೆಲಸ ಮಾಡಲು ಪ್ರಾರಂಭಿಸಿದರು ಮತ್ತು ಮುಂಬೈ ಇಂಡಿಯನ್ಸ್ ತಂಡದಲ್ಲಿ ಬೌಲಿಂಗ್ ಪ್ರತಿಭೆಗಳನ್ನು ಅಭಿವೃದ್ಧಿಪಡಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದರು

* "ನಾವು ಫೈನಲ್‌ನಲ್ಲಿ ಭೇಟಿಯಾಗುತ್ತೇವೆ ಎಂದು ಮಿಕ್ಕಿ ಆರ್ಥರ್ ಹೇಳಿದ್ದಾರೆ. ಪಾಕಿಸ್ತಾನ ತಂಡ ಭಾರತವನ್ನು ಐಸಿಸಿ ಟ್ರೋಫಿಯಲ್ಲಿ ಅಥವಾ ಅವರು ಹೊಂದಿರುವ ತಂಡವನ್ನು ಪರಿಗಣಿಸಿ ಇನ್ನಾವುದೇ ಟೂರ್ನಿಯಲ್ಲಿ ಸೋಲಿಸಬಹುದು ಎಂದು ನಾನು ಭಾವಿಸುವುದಿಲ್ಲ. ನಮ್ಮ ಐಪಿಎಲ್ ಆಡುವ ಹುಡುಗರ 'ಸಿ' ತಂಡವೂ ಸಹ ಪಾಕಿಸ್ತಾನದ ಮುಖ್ಯ ತಂಡವನ್ನು ಸೋಲಿಸಬಹುದು," ಎಂದು ಎಸ್ ಶ್ರೀಶಾಂತ್ ಸ್ಪೋರ್ಟ್ಸ್ಕೀಡಾಗೆ ತಿಳಿಸಿದ್ದಾರೆ.

* ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿಕೊಂಡು ಮುನ್ನುಗ್ಗುತ್ತಿರುವ ಟೀಮ್ ಇಂಡಿಯಾ ಮತ್ತೊಂದು ಪಂದ್ಯಕ್ಕೆ ಸಿದ್ಧವಾಗಿದೆ. ಮೊದಲ ಮೂರು ಪಂದ್ಯಗಳಲ್ಲಿ ಅಮೋಘ ಜಯ ಸಾಧಿಸಿರುವ ಭಾರತ ತಂಡ ತನ್ನ ನಾಲ್ಕನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಎದುರಿಸಲು ಸಜ್ಜಾಗಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೊಸಿಯೇಶನ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು ತೀವ್ರ ಕುತೂಹಲ ಮೂಡಿಸಿದೆ.

* ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಗ್ಗೆ ವಿಶೇಷ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಈ ಬಾರಿಯ ಉಳಿದೆಲ್ಲಾ ನಾಯಕರುಗಳಿಗಿಂತ ಅತ್ಯಂತ ಹೆಚ್ಚು ಆಕ್ರಮಣಕಾರಿ ಮನೋಭಾವದೊಂದಿಗೆ ಕಣಕ್ಕಿಳಿದಿದ್ದು ಇದು ಅವರನ್ನು ಇತರ ನಾಯಕರಿಗಿಂತ ಭಿನ್ನವಾಗಿಸಿದೆ ಎಂದಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೂ ಮುನ್ನ ಸ್ಟಾರ್ ಸ್ಪೋರ್ಟ್ಸ್ ಜೊತೆಗೆ ಇರ್ಫಾನ್ ಪಠಾಣ್ ಮಾತನಾಡಿದ್ದು ರೋಹಿತ್ ಶರ್ಮಾ ಅವರ ಆಕ್ರಮಣಕಾರಿ ಆಟದ ಬಗ್ಗೆ ಮಾತನಾಡಿದರು.

* ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಅತಿಯಾದ ವೇಗದಲ್ಲಿ ಕಾರು ಓಡಿಸಿ ದಂಡನೆಗೆ ಗುರಿಯಾಗಿದ್ದಾರೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೊಸಿಯೇಶನ್ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೂ ಮುನ್ನ ತಂಡವನ್ನು ಸೇರಿಕೊಳ್ಳಲು ಕಾರಿನಲ್ಲಿ ಆಗಮಿಸಿದ್ದು ಈ ಸಂದರ್ಭದಲ್ಲಿ ಮಿತಿ ಮೀರಿದ ವೇಗದಲ್ಲಿ ಕಾರು ಚಲಾಯಿಸಿದ್ದಾರೆ. ಇದಕ್ಕಾಗಿ ರೋಹಿತ್ ಶರ್ಮಾ ಮೂರು ಟ್ರಾಫಿಕ್ ಚಲನ್‌ಗಳನ್ನು ಸ್ವೀಕರಿಸಿದ್ದಾರೆ ಎಂದು ವರದಿಯಾಗಿದೆ.

* ವಿಶ್ವಕಪ್ ಟೂರ್ನಿಯಲ್ಲಿ ಇಂದು ನ್ಯೂಜಿಲೆಂಡ್ ಹಾಗೂ ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು ಈ ಪಂದ್ಯದಲ್ಲಿ ಕಿವೀಸ್ ಪಡೆ ಭಾರೀ ಅಂತರದ ಗೆಲುವು ಸಾಧಿಸಿದೆ. ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಮಣಿಸಿದ ಆತ್ಮವಿಶ್ವಾಸದಲ್ಲಿದ್ದ ಅಫ್ಘಾನಿಸ್ತಾನ ತಂಡ ಈ ಪಂದ್ಯದಲ್ಲಿ ಬೌಲಿಂಗ್ ಸಂದರ್ಭದಲ್ಲಿ ಒಂದು ಹಂತದಲ್ಲಿ ಮೇಲುಗೈ ಸಾಧಿಸಿದರೂ ಅದನ್ನು ಮುಂದಕ್ಕೆ ತೆಗೆದುಕೊಂಡು ಹೋಗಲು ವಿಫಲವಾಯಿತು. ಬಳಿಕ ಬ್ಯಾಟಿಂಗ್‌ನಲ್ಲಿ ಸಂಪೂರ್ಣ ವಿಫಲವಾಗಿದ್ದು ಕೇವಲ 139 ರನ್‌ಗಳಿಗೆ ಆಲೌಟ್ ಆಗುವ ಮೂಲಕ 149 ರನ್‌ಗಳ ಅಂತರದ ಭಾರೀ ಸೋಲು ಅನುಭವಿಸಿದೆ.

Story first published: Wednesday, October 18, 2023, 22:51 [IST]
Other articles published on Oct 18, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+