For Quick Alerts
ALLOW NOTIFICATIONS  
For Daily Alerts

ಅಕ್ಟೋಬರ್ 19: ಮುಂದುವರಿದ ಭಾರತದ ಗೆಲುವಿನ ಯಾತ್ರೆ; ವಿರಾಟ್ ಕೊಹ್ಲಿ 48ನೇ ಶತಕ: ಕ್ರೀಡಾ ಲೋಕದ ಇಂದಿನ ಸುದ್ದಿ

* ವಿಶ್ವಕಪ್ ಟೂರ್ನಿಯಲ್ಲಿ ಸತತ ನಾಲ್ಕನೇ ಪಂದ್ಯದಲ್ಲಿಯೂ ಟೀಮ್ ಇಂಡಿಯಾ ಅಮೋಘ ಗೆಲುವು ಸಾಧಿಸಿ ಅಬ್ಬರಿಸಿದಿದೆ. ಬಾಂಗ್ಲಾದೇಶ ವಿರುದ್ಧ ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲಿಂಗ್‌ನ ಬಳಿಕ ಬ್ಯಾಟಿಂಗ್‌ನಲ್ಲಿಯೂ ಅಬ್ಬರದ ಪ್ರದರ್ಶನ ನೀಡಿದ್ದು ಅಮೋಘ ಗೆಲುವು ಸಾಧಿಸಿದೆ. ಬೌಲಿಂಗ್‌ನಲ್ಲಿ ಸಂಘಟಿತ ಪ್ರದರ್ಶನದ ಬಳಿಕ ಬ್ಯಾಟಿಂಗ್‌ನಲ್ಲಿ ಅಗ್ರ ಕ್ರಮಾಂಕದ ಆಟಗಾರರು ಅಮೋಘ ಪ್ರದರ್ಶನಕ್ಕೆ ಬಾಂಗ್ಲಾ ಅಕ್ಷರಶಃ ಧ್ವಂಸವಾಗಿದೆ. ಟೀಮ್ ಇಂಡಿಯಾದ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಅಮೋಘ ಶತಕ ಸಿಡಿಸಿದ್ದಾರೆ.

* ಗುರುವಾರ, ಅಕ್ಟೋಬರ್ 19ರಂದು ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳ ಅಮೋಘ ಗೆಲುವು ಸಾಧಿಸಿತು. ಇದೇ ವೇಳೆ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತಮ್ಮ 48ನೇ ಏಕದಿನ ಶತಕವನ್ನು ಬಾರಿಸಿದ್ದು, ಲೆಜೆಂಡ್ ಬ್ಯಾಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಗೆ ಇನ್ನಷ್ಟು ಹತ್ತಿರವಾಗಿದ್ದಾರೆ.

October 19, what happened in sports World: Todays Top sports news and headlines

* ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ತಮ್ಮ 54ನೇ ಏಕದಿನ ಅರ್ಧಶತಕವನ್ನು ತಪ್ಪಿಸಿಕೊಂಡರು. ಇದೇ ವೇಳೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ವೆಸ್ಟ್ ಇಂಡೀಸ್‌ನ ಲೆಜೆಂಡ್ ಬ್ಯಾಟರ್ ಬ್ರಿಯಾನ್ ಲಾರಾ ಅವರನ್ನು ಹಿಂದಿಕ್ಕಿ ಏಕದಿನ ವಿಶ್ವಕಪ್‌ನ ಇತಿಹಾಸದಲ್ಲಿ ನಾಲ್ಕನೇ ಅತಿ ಹೆಚ್ಚು ರನ್ ಗಳಿಸಿದ ಕ್ರಿಕೆಟಿಗ ಎನಿಸಿಕೊಂಡರು.

* ಈ ಪಂದ್ಯದಲ್ಲಿ ಭಾರತದ ಬೌಲಿಂಗ್‌ ಜೊತೆಗೆ ಫೀಲ್ಡಿಂಗ್ ಕುಡ ಅದ್ಭುತವಾಗಿತ್ತು ಎನ್ನುವುದರಲ್ಲಿ ಅನುಮಾನವಿಲ್ಲ. ಅದರಲ್ಲೂ ರವೀಂದ್ರ ಜಡೇಜಾ ಈ ಪಂದ್ಯದಲ್ಲಿ ಪಡೆದ ಕ್ಯಾಚ್ ಎಲ್ಲರನ್ನೂ ನಿಬ್ಬೆರಗಾಗಿಸಿದೆ. ಫಿಲ್ಡಿಂಗ್‌ನಲ್ಲಿ ಯಾವಾಗಲೂ ಅಮೋಘ ಪ್ರದರ್ಶನ ನೀಡುವ ಜಡೇಜಾ ಈ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಸೂಪರ್ ಮ್ಯಾನ್ ರೀತಿಯಲ್ಲಿ ಕ್ಯಾಚ್ ಪಡೆದುಕೊಂಡಿದ್ದಾರೆ.

* 2023ರ ಐಸಿಸಿ ಏಕದಿನ ವಿಶ್ವಕಪ್‌ ಪಂದ್ಯಾವಳಿಯಲ್ಲಿ ಶ್ರೀಲಂಕಾ ತಂಡವು ಗಾಯದ ಕಾರಣದಿಂದಾಗಿ ಹೆಚ್ಚು ಹಿನ್ನಡೆ ಅನುಭವಿಸಿದ ತಂಡವಾಗಿದೆ. ವಿಶ್ವಕಪ್‌ ಪಂದ್ಯಾವಳಿಗೆ ಮೊದಲು ವನಿಂದು ಹಸರಂಗ ಮತ್ತು ದುಷ್ಮಂತ ಚಮೀರ ಅವರ ಗಾಯಗಳು ದೊಡ್ಡ ಹೊಡೆತವಾಗಿ ಕಾಣಿಸಿಕೊಂಡವು ಮತ್ತು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಲು ನಾಯಕ ದಸುನ್ ಶನಕ ಕೂಡ ಗಾಯದಿಂದ ಹೊರಗುಳಿದಿದ್ದಾರೆ. ವಿಶ್ವಕಪ್ ಪಂದ್ಯಾವಳಿಯ ಉಳಿದ ಭಾಗಗಳಲ್ಲಿ ಸಂಭವಿಸಬಹುದಾದ ಯಾವುದೇ ಗಾಯಗಳನ್ನು ಎದುರಿಸಲು ಶ್ರೀಲಂಕಾ ಕ್ರಿಕೆಟ್ ಅನುಭವಿ ಆಲ್‌ರೌಂಡರ್ ಹಾಗೂ ಮಾಜಿ ನಾಯಕ ಏಂಜೆಲೊ ಮ್ಯಾಥ್ಯೂಸ್ ಮತ್ತು ದುಷ್ಮಂತ ಚಮೀರಾ ಅವರನ್ನು ಬ್ಯಾಕಪ್ ಆಗಿ ತರಲು ನಿರ್ಧರಿಸಿದೆ.

* ಬಾಂಗ್ಲಾದೇಶದ ಆರಂಭಿಕರಾದ ಲಿಟನ್ ದಾಸ್ ಹಾಗೂ ತನ್ಜಿದ್ ಹಸನ್ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶದ ಪರವಾಗಿ ಅತಿ ದೊಡ್ಡ ಜೊತೆಯಾಟ ನೀಡಿದ ಆರಂಭಿಕ ಜೋಡಿ ಎಂಬ ದಾಖಲೆ ಬರೆದಿದ್ದಾರೆ. ಮೊದಲ ವಿಕೆಟ್‌ಗೆ ಇವರಿಬ್ಬರು ಭರ್ಜರಿ 93 ರನ್‌ಗಳ ಜೊತೆಯಾಟ ನೀಡುವ ಮೂಲಕ ಈ ದಾಖಲೆ ಬರೆದಿದ್ದಾರೆ. ಕುಲ್‌ದೀಪ್ ಯಾದವ್ ತನ್ಜಿದ್ ಹಸನ್ ಅವರನ್ನು ಎಲ್‌ಬಿಡಬ್ಲ್ಯು ಬಲೆಗೆ ಬೀಳಿಸುವ ಮೂಲಕ ಈ ಜೋಡಿಯನ್ನು ಬೇರ್ಪಡಿಸಿದರು.

* ಬುಧವಾರ, ಅಕ್ಟೋಬರ್ 18ರಂದು ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ ವಿರುದ್ಧ ನ್ಯೂಜಿಲೆಂಡ್ ತಂಡ 149 ರನ್‌ಗಳ ಭರ್ಜರಿ ಗೆಲುವು ಸಾಧಿಸಿತು. ಇದೇ ವೇಳೆ ನ್ಯೂಜಿಲೆಂಡ್ ತಂಡದ ಹಂಗಾಮಿ ನಾಯಕ ಹಾಗೂ ಸ್ಟಾರ್ ಬ್ಯಾಟರ್ ಟಾಮ್ ಲ್ಯಾಥಮ್ ಅವರು ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ಪರ ವಿಕೆಟ್‌ಕೀಪರ್ ಆಗಿ ಅತಿ ಹೆಚ್ಚು ಅರ್ಧಶತಕಗಳನ್ನು ಗಳಿಸಿದ ಲೆಜೆಂಡ್ ಬ್ರೆಂಡನ್ ಮೆಕ್ಕಲಮ್ ಅವರ ದಾಖಲೆಯನ್ನು ಸರಿಗಟ್ಟಿದರು.

Story first published: Thursday, October 19, 2023, 23:59 [IST]
Other articles published on Oct 19, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+