* ಸೋಮವಾರ, ಅಕ್ಟೋಬರ್ 2ರಂದು ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನ ಮಹಿಳೆಯರ 400 ಮೀಟರ್ ಹರ್ಡಲ್ಸ್‌ನಲ್ಲಿ ಭಾರತದ ಅಥ್ಲೀಟ್ ವಿತ್ಯಾ ರಾಮರಾಜ್ ಫೈನಲ್‌ಗೆ ಅರ್ಹತೆ ಪಡೆದರು. ಈ ಮೂಲಕ ಭಾರತದ ಲೆಜೆಂಡ್ ಓಟಗಾರ್ತಿ ಪಿಟಿ ಉಷಾ ಅವರ 39 ವರ್ಷಗಳ ಹಳೆಯ ರಾಷ್ಟ್ರೀಯ ದಾಖಲೆಯನ್ನು ವಿತ್ಯಾ ರಾಮರಾಜ್ ಸರಿಗಟ್ಟಿದರು.
* ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಯಾರಿಂದ ಅತ್ಯುತ್ತಮ ಪ್ರದರ್ಶನ ಬರಬಹುದು ಎನ್ನುವ ಬಗ್ಗೆ ಹಲವು ಕ್ರಿಕೆಟ್ ವಿಶ್ಲೇಷಕರು ತಮ್ಮದೇ ಆದ ಉತ್ತರಗಳನ್ನು ನೀಡಿದ್ದಾರೆ. ಭಾರತದಲ್ಲಿ ನಡೆಯುತ್ತಿರುವ ಈ ಬಾರಿಯ ಮೆಗಾ ಟೂರ್ನಿಯಲ್ಲಿ ಭಾರತದ ಪರವಾಗಿ ಯಾರಿಂದ ಅದ್ಭುತ ಪ್ರದರ್ಶನ ಬರಬಹುದು ಎನ್ನುವ ಕಾತರವೂ ಅಭಿಮಾನಿಗಳಲ್ಲಿ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಕಾಮೆಂಟೇಟರ್ ಆಕಾಶ್ ಚೋಪ್ರ ಪ್ರತಿಕ್ರಿಯೆ ನೀಡಿದ್ದು ವಿಶ್ವಕಪ್ ಟೂರ್ನಿಯಲ್ಲಿ ಅತ್ಯದ್ಭುತ ಪ್ರದರ್ಶನ ನೀಡುವ ಆಟಗಾರ ಯಾರು ಎನ್ನುವ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

* ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಹಾಕಿ ತಂಡದ ಅಬ್ಬರದ ಪ್ರದರ್ಶನ ಮುಂದುವರಿದಿದೆ. ಇಂದು ಪೂಲ್ ಹಂತದ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಎದುರಿಸಿದ ಭಾರತ ಬರೊಬ್ಬರಿ 12-0 ಅಂತರದಿಂದ ಗೆದ್ದು ಬೀಗಿದೆ. ಈ ಮೂಲಕ ಸೆಮಿಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಜೊತೆಗೆ ಮತ್ತೊಂದು ಚಿನ್ನದ ಪದಕದ ಮೇಲೆ ಚಿತ್ತ ನೆಟ್ಟಿರುವುದು ಸ್ಪಷ್ಟವಾಗಿದೆ. ಸಂಪೂರ್ಣವಾಗಿ ಏಕಮುಖವಾಗಿ ಸಾಗಿದ ಈ ಪಂದ್ಯದಲ್ಲಿ ಭಾರತದ ಪರವಾಗಿ ಹರ್ಮನ್‌ಪ್ರೀತ್ ಸಿಂಗ್ ಮತ್ತು ಮನ್‌ದೀಪ್ ಸಿಂಗ್ ಹ್ಯಾಟ್ರಿಕ್ ಗೋಲು ಸಿಡಿಸಿದ್ದಾರೆ.
* ಭಾರತದಲ್ಲಿ ನಡೆಯಲಿರುವ ವಿಶ್ವಕಪ್ ಟೂರ್ನಿಯ ಸಂದರ್ಭದಲ್ಲಿ ಅಫ್ಘಾನಿಸ್ತಾನ ಕ್ರಿಕೆಟ್ ತಂಡಕ್ಕೆ ಭಾರತದ ಮಾಜಿ ಕ್ರಿಕೆಟಿಗ ಅಜಯ್ ಜಡೇಜಾ ಅವರು ಮೆಂಟರ್ ಆಗಿ ನೇಮಕಗೊಂಡಿದ್ದಾರೆ. ಈ ಹುದ್ದೆಯನ್ನು ನಿರ್ವಹಿಸಲು ಜಡೇಜಾ ಅವರು ಗುವಾಹಟಿಯಲ್ಲಿ ಇಂದು ತಂಡವನ್ನು ಸೇರಿಕೊಂಡಿದ್ದಾರೆ. ಅಲ್ಲಿ ಅಫ್ಘಾನಿಸ್ತಾನ ತನ್ನ ಎರಡನೇ ಮತ್ತು ಅಂತಿಮ ವಿಶ್ವಕಪ್ ಅಭ್ಯಾಸ ಪಂದ್ಯವನ್ನು ಮಂಗಳವಾರ ಅಕ್ಟೋಬರ್ 3 ರಂದು ಆಡಲಿದ್ದು ಶ್ರೀಲಂಕಾವನ್ನು ಎದುರಿಸಲಿದೆ.
* ಭಾರತದ ಚಾಂಪಿಯನ್ ಹೆಪ್ಟಾಥ್ಲೀಟ್ ಸ್ವಪ್ನಾ ಬರ್ಮನ್ ಅವರು 2023ರ ಹ್ಯಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಕಂಚಿನ ಪದಕವನ್ನು ಸಹ ಭಾರತೀಯ ಸ್ಪರ್ಧಿ ನಂದಿನಿ ಅಗಸರ ವಿರುದ್ಧ ಸೋತ ನಂತರ ವಿವಾದಾತ್ಮಕ ಆರೋಪ ಮಾಡಿದ್ದಾರೆ. ಸ್ವಪ್ನಾ ಬರ್ಮನ್ ಅವರು ನಂದಿನಿ ಅಗಸರ 'ಟ್ರಾನ್ಸ್‌ಜೆಂಡರ್' ಎಂದು ಆರೋಪಿಸಿದ್ದು, "ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ 19ನೇ ಏಷ್ಯನ್ ಗೇಮ್ಸ್‌ನಲ್ಲಿ ನಾನು ನನ್ನ ಏಷ್ಯನ್ ಗೇಮ್ಸ್ ಕಂಚಿನ ಪದಕವನ್ನು ಟ್ರಾನ್ಸ್‌ಜೆಂಡರ್ ಮಹಿಳೆಗೆ ಕಳೆದುಕೊಂಡಿದ್ದೇನೆ,"ಎಂದು ಸ್ವಪ್ನಾ ಬರ್ಮನ್ ಹೇಳಿದ್ದಾರೆ.
* ಭಾರತ ತಂಡದ ಪ್ರಮುಖ ಆಟಗಾರ ಹಾಗೂ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತಂಡದೊಂದಿಗೆ ತಿರುವನಂತಪುರಂಗೆ ಪ್ರಯಾಣಿಸದೆ, ವೈಯಕ್ತಿಕ ತುರ್ತು ಕಾರಣದಿಂದ ಟೀಮ್ ಮ್ಯಾನೇಜ್‌ಮೆಂಟ್‌ನಿಂದ ಅನುಮತಿ ಪಡೆದು ಮುಂಬೈಗೆ ವಾಪಸ್ಸಾಗಿದ್ದಾರೆ. ಸ್ಟಾರ್ ಆಟಗಾರನ ಅನುಪಸ್ಥಿತಿಯು ಅಭಿಮಾನಿಗಳ ಅನುಮಾನಕ್ಕೆ ಕಾರಣವಾಗಿದೆ. ವಿರಾಟ್ ಕೊಹ್ಲಿ ತರಾತುರಿಯಲ್ಲಿ ಗುವಾಹಟಿಯಿಂದ ಮುಂಬೈಗೆ ತೆರಳಿದ್ದಾರೆ ಮತ್ತು ಸೋಮವಾರ ತಿರುವನಂತಪುರಂನಲ್ಲಿ ತಂಡವನ್ನು ಮತ್ತೆ ಸೇರಿಕೊಳ್ಳುವ ನಿರೀಕ್ಷೆಯಿದೆ.
* ಏಷ್ಯನ್ ಗೇಮ್ಸ್‌ನ ಮಹಿಳೆಯರ 3000 ಮೀಟರ್ ಸ್ಟೀಪಲ್‌ಚೇಸ್‌ನಲ್ಲಿ ಭಾರತದ ಪಾರುಲ್ ಚೌಧರಿ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಬಹ್ರೇನ್ ಅಥ್ಲೀಟ್‌ಗಳಿಂದ ತೀವ್ರ ಪ್ರತಿಸ್ಪರ್ಧೆ ಎದುರಿಸಿದ ಭಾರತ ಇದೇ ವಿಭಾಗದಲ್ಲಿ ಕಂಚಿನ ಪದಕವನ್ನು ಕೂಡ ತನ್ನದಾಗಿಸಿಕೊಂಡಿದೆ. ಇದೇ ಸ್ಪರ್ಧೆಯಲ್ಲಿ ಭಾರತ ಅಥ್ಲೀಟ್ ಪ್ರೀತಿ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. 3000 ಮೀಟರ್ ಸ್ಟೀಪಲ್‌ಚೇಸ್‌ನಲ್ಲಿ ಪಾರುಲ್ ಚೌಧರಿ 9.27.63 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಬೆಳ್ಳಿ ಗೆದ್ದರೆ, ವಿಶ್ವ ಚಾಂಪಿಯನ್ ಯಾವಿ ವಿನ್‌ಫ್ರೈಡ್ ಏಷ್ಯನ್ ಗೇಮ್ಸ್ ದಾಖಲೆಯನ್ನು ಮುರಿದು 9:18.26 ಸೆಕೆಂಡ್‌ಗಳಲ್ಲಿ ಗುರಿತಲುಪಿ ಚಿನ್ನದ ಪದಕ ಗೆದ್ದುಕೊಂಡರು.
* ಏಷ್ಯನ್ ಗೇಮ್ಸ್‌ನ ಭಾರತದ ಪುರುಷರ ಕ್ರಿಕೆಟ್ ತಂಡ ಮಂಗಳವಾರದಿಂದ ಸ್ಪರ್ಧೆಗಿಳಿಯಲಿದೆ. ಭಾರತ ನೇರವಾಗಿ ಕ್ವಾರ್ಟರ್‌ಫೈನಲ್‌ನಲ್ಲಿ ಕಣಕ್ಕಿಳಿಯಲಿದ್ದು ನೇಪಾಳ ಭಾರತಕ್ಕೆ ಸವಾಲೊಡ್ಡಲಿದೆ. ಟಿ20 ಮಾದರಿಯಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್ ಕ್ರಿಕೆಟ್ ಸ್ಪರ್ದೆಯಲ್ಲಿ ಭಾರತ ತಂಡದ ನಾಯಕತ್ವವನ್ನು ಋತುರಾಜ್ ಗಾಯಕ್ವಾಡ್ ವಹಿಸಿಕೊಂಡಿದ್ದಾರೆ. ಟೀಮ್ ಇಂಡಿಯಾದ ಪ್ರಮುಖ ಆಟಗಾರರ ಪಡೆ ವಿಶ್ವಕಪ್‌ನಲ್ಲಿ ಭಾಗಿಯಾಗುತ್ತಿರುವ ಕಾರಣ ಏಷ್ಯಾಕಪ್‌ನಲ್ಲಿ ದ್ವಿತೀಯ ದರ್ಜೆಯ ಯುವ ಆಟಗಾರರ ಪಡೆ ಕಣಕ್ಕಿಳಿಯುತ್ತಿದೆ.