* ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಅದ್ಭುತ ಪ್ರದರ್ಶನ ನೀಡುತ್ತಿದ್ದು ಭರವಸೆ ಮೂಡಿಸಿದೆ. ಮೊದಲ ನಾಲ್ಕು ಪಂದ್ಯಗಳಲ್ಲಿಯೂ ಭಾರತ ತಂಡ ಸತತ ಗೆಲುವು ಸಾಧಿಸಿದ್ದು ಇದೀಗ ಮತ್ತೊಂದು ಬಲಿಷ್ಠ ಕಾದಾಟಕ್ಕೆ ಸಜ್ಜಾಗಿದೆ. ಟೂರ್ನಿಯಲ್ಲಿ ಮತ್ತೊಂದು ಅಜೇಯ ತಂಡವಾಗಿರುವ ನ್ಯೂಜಿಲೆಂಡ್ ತಂಡ ಭಾರತಕ್ಕೆ ಈಗ ಸವಾಲೊಡ್ಡಲು ಸಜ್ಜಾಗಿದ್ದು ಭಾನುವಾರ ಧರ್ಮಶಾಲಾದಲ್ಲಿ ಈ ಸೆಣೆಸಾಟ ನಡೆಸಲಿದೆ.
* ಬಲಿಷ್ಠ ಆಟಗಾರರ ಪಡೆಯನ್ನು ಹೊಂದಿರುವ ಈ ಎರಡು ತಂಡಗಳ ನಡುವಿನ ಕಾದಾಟ ನೋಡಲು ಈಗ ಅಭಿಮಾನಿಗಳು ಕಾತರಿಸುತ್ತಿದ್ದಾರೆ. ಈ ಪಂದ್ಯಕ್ಕೆ ಟೀಮ್ ಇಂಡಿಯಾ ತನ್ನ ಅತ್ಯಂತ ಬಲಿಷ್ಠ ಪಡೆಯನ್ನು ಕಣಕ್ಕಿಳಿಸುವ ಲೆಕ್ಕಾಚಾರದಲ್ಲಿದ್ದಾಗ ತಂಡಕ್ಕೆ ಗಾಯದ ಸಮಸ್ಯೆ ಕಾಡಿದೆ. ಹೀಗಾಗಿ ತಂಡದಲ್ಲಿ ಅನಿವಾರ್ಯ ಬದಲಾವಣೆ ಮಾಡಿಕೊಳ್ಳಬೇಕಾಗಿದೆ. ಟೀಮ್ ಇಂಡಿಯಾದ ಓರ್ವ ಆಟಗಾರ ಗಾಯಕ್ಕೆ ತುತ್ತಾಗಿದ್ದು ಇದರಿಂದಾಗಿ ತಂಡದಲ್ಲಿ ಎರಡು ಬದಲಾವಣೆ ಮಾಡಿಕೊಳ್ಳಬೇಕಾದ ಅಗತ್ಯ ಸೃಷ್ಟಿಯಾಗಿದೆ.

* ಪಾಕಿಸ್ತಾನ ತಂಡ ಈ ಬಾರಿಯ ವಿಶ್ವಕಪ್‌ನಲ್ಲಿ ಉತ್ತಮ ಆರಂಭವನ್ನು ಪಡೆದರೂ ಬಳಿಕ ಹಿನ್ನಡೆ ಕಂಡಿದೆ. ಮೊದಲ ಎರಡು ಪಂದ್ಯಗಳನ್ನು ಗೆದ್ದ ಪಾಕಿಸ್ತಾನ ತಂಡ ಬಳಿಕ ಎರಡು ಪಂದ್ಯಗಳಲ್ಲಿಯೂ ಸೋಲು ಅನುಭವಿಸಿದೆ. ಹೀಗಾಗಿ ಪಾಕಿಸ್ತಾನ ತಂಡ ಈಗ ಸಂಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಟೀಮ್ ಇಂಡಿಯದ ಹಿರಿಯ ಆಟಗಾರ, ಕಾಮೆಂಟೇಟರ್ ದಿನೇಶ್ ಕಾರ್ತಿಜ್ ಪ್ರತಿಕ್ರಿಯೆ ನೀಡಿದ್ದು ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನ ತಂಡ ಸೆಮಿಫೈನಲ್‌ಗೆ ಪ್ರವೇಶಿಸುವ ಸ್ಪರ್ಧೆಯಲ್ಲಿ ಮುಂದುವರಿಯಬೇಕಿದ್ದರೆ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಲೇನೇಕು ಎಂದಿದ್ದಾರೆ ಟೀಮ್ ಇಂಡಿಯಾದ ಅನುಭವಿ ಕ್ರಿಕೆಟಿಗ ದಿನೇಶ್ ಕಾರ್ತಿಕ್.
* ಪಾಕಿಸ್ತಾನ ತಂಡದ ವಿರುದ್ಧ ಶುಕ್ರವಾರ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಸ್ಪೋಟಕ ಶತಕ ಸಿಡಿಸಿದ್ದಾರೆ. ಮಿಚೆಲ್ ಮಾರ್ಶ್ ಜೊತೆಗೂಡಿ ಭರ್ಜರಿ 259 ರನ್‌ಗಳ ಜೊತೆಯಾಟದಲ್ಲಿಯೂ ಡೇವಿಡ್ ವಾರ್ನರ್ ಭಾಗಿಯಾಗಿದ್ದು ಬರೊಬ್ಬರಿ 163 ರನ್‌ಗಳನ್ನು ಈ ಪಂದ್ಯದಲ್ಲಿ ಸಿಡಿಸಿದ್ದಾರೆ. ಈ ಅಮೋಘ ಪ್ರದರ್ಶನ ಪಾಕಿಸ್ತಾನದ ವಿರುದ್ಧ 62 ರನ್‌ಗಳ ಅಂತರದಿಂದ ಗೆಲುವು ಸಾಧಿಸಲು ಸಹಕಾರಿಯಾಗಿದೆ. ಇನ್ನು ಈ ಪಂದ್ಯದ ಬಳಿಕ ಮಾತನಾಡಿದ ಡೇವಿಡ್ ವಾರ್ನರ್ ಏಕದಿನ ಕ್ರಿಕೆಟ್‌ನಲ್ಲಿ ರನ್ ವೇಗವನ್ನು ಹೇಗೆ ಹೆಚ್ಚಿಸಿಕೊಳ್ಳಬೇಕು ಎನ್ನುವುದನ್ನು ನಾನು ಐಪಿಎಲ್‌ನಿಂದ ಕಲಿತೆ ಎನ್ನುವ ಅಂಶವನ್ನು ಬಹಿರಂಗಪಡಿಸಿದ್ದಾರೆ. ಐಪಿಎಲ್‌ನಲ್ಲಿ ವಿಶೇಷವಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿದ್ದಾಗ ಅದನ್ನು ಅಳವಡಿಸಿಕೊಂಡಿದ್ದು ಏಕದಿನ ಕ್ರಿಕೆಟ್‌ನಲ್ಲಿ ಅದು ತನಗೆ ಹೆಚ್ಚು ಫಲ ನೀಡುತ್ತಿದೆ ಎಂದಿದ್ದಾರೆ ಡೇವಿಡ್ ವಾರ್ನರ್.
* ಶ್ರೀಲಂಕಾ ತಂಡ 2023ರ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಗೆಲುವು ಸಾಧಿಸಿದೆ. ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಲಂಕಾ ಪಡೆ ತೀವ್ರ ಪೈಪೊಟಿಯನ್ನು ಎದುರಿಸಿದರೂ 5 ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಖಾತೆ ತೆರೆದಿದೆ. 263 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಶ್ರೀಲಂಕಾ ತಂಡ 10 ಎಸೆತಗಳು ಬಾಕಿಯಿರುವಂತೆ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದೆ. ಪಾತುಮ್ ನಿಸ್ಸಾಂಕ 54 ರನ್‌ಗಳ ಕೊಡುಗೆ ನೀಡುವ ಮೂಲಕ ಲಂಕಾ ಹೋರಾಟಕ್ಕೆ ಬಲ ನೀಡಿದರು. ಇನ್ನು ಸದೀರ ಸಮರವಿಕ್ರಮ ಕೊನೆಯವರೆಗೂ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ ಅಜೇಯ 91 ರನ್‌ಗಳ ಕೊಡುಗೆ ನೀಡಿದ್ದು ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿದೆ. ಅವರಿಗೆ ಚರಿತ ಅಸಲಂಕ, ಹಾಗೂ ಧನಂಜಯ ಡಿಸಿಲ್ವ ಉತ್ತಮ ಸಾಥ್ ನೀಡಿದ್ದಾರೆ.
*ಡೆನ್ಮಾರ್ಕ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸ್ಟಾರ್ ಆಟಗಾರ್ತಿ ಪಿವಿ ಸಿಂಧು ನಿರಾಸೆ ಅನುಭವಿಸಿದ್ದಾರೆ. ಮಹಿಳೆಯರ ಸಿಂಗಲ್ ಸೆಮಿ ಫೈನಲ್ ಪಂದ್ಯದಲ್ಲಿ ಎರಡು ಬಾರಿಯ ಒಲಂಪಿಕ್ ಪದಕ ವಿಜೇತ ಸಿಂಧು ಸೋಲು ಕಂಡಿದ್ದಾರೆ. ಶನಿವಾರ ನಡೆದ ಉಪಾಂತ್ಯ ಪಂದ್ಯದಲ್ಲಿ ಸಿಂಧು 18-21, 21-19, 07-21 ರಿಂದ ಸ್ಪೇನ್ ಖ್ಯಾತ ಆಟಗಾರತಿ ಕರೋಲಿನಾ ಮರಿನ್ ವಿರುದ್ಧ ಸೋಲು ಕಂಡರು. ಮೊದಲ ಗೇಮ್ ನಲ್ಲಿ ಉಭಯ ಆಟಗಾರರು ಸಮಯೋಚಿತ ಆಟದ ಪ್ರದರ್ಶನ ನೀಡಿದರು.
* ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ವಿಶ್ವಕಪ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಅಕ್ಟೋಬರ್ 19 ರಂದು ಭಾರತ ತಂಡ ಬಾಂಗ್ಲಾದೇಶವನ್ನು ಸೋಲಿಸಿ ವಿಶ್ವಕಪ್ ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರಿಸಿದೆ. ಈ ಪಂದ್ಯದ ನಂತರ, ಟೀಂ ಇಂಡಿಯಾದ ಸ್ಫೋಟಕ ಆಲ್ರೌಂಡರ್ ಗೆ ಬ್ಯಾಟಿಂಗ್ ನಲ್ಲಿ ಅವಕಾಶ ನೀಡಲಾಗುವುದು ಎಂದು ನಾಯಕ ರೋಹಿತ್ ಹೇಳಿರುವ ವಿಡಿಯೋ ಹೆಚ್ಚು ವೈರಲ್ ಆಗುತ್ತಿದೆ.
* ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಹರಿಣಗಳ ಪಡೆ ರನ್ ಮಳೆ ಹರಿಸಿದ್ದು ಇಂಗ್ಲೆಂಡ್ ತಂಡಕ್ಕೆ ಬೃಹತ್ ಗುರಿ ಮುಂದಿಟ್ಟಿದೆ. ಹೆನ್ರಿಕ್ ಕ್ಲಾಸೆನ್ ಸ್ಪೋಟಕ ಶತಕ ಸಿಡಿಸಿ ಅಬ್ಬರಿಸಿದ್ದು ಅವರಿಗೆ ಮಾರ್ಕೋ ಜಾನ್ಸನ್ ಕೂಡ ಅದ್ಭುವಾದ ಸಾಥ್ ನೀಡಿದ್ದಾರೆ. ಹೀಗಾಗಿ ನಿಗದಿತ 50 ಓವರ್‌ಗಳಲ್ಲಿ ದಕ್ಷಿಇಣ ಆಫ್ರಿಕಾ ತಂಡ 399 ರನ್‌ಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ.