For Quick Alerts
ALLOW NOTIFICATIONS  
For Daily Alerts

ಅಕ್ಟೋಬರ್ 25: ಫ್ಯಾರಾ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಮ್ಯಾಕ್ಸ್‌ವೆಲ್ ದಾಖಲೆ ಶತಕ: ಕ್ರೀಡಾ ಲೋಕದ ಇಂದಿನ ಸುದ್ದಿ

* ಬುಧವಾರ, ಅಕ್ಟೋಬರ್ 25ರಂದು ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 24ನೇ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡದ ವಿರುದ್ಧ ಆಸ್ಟ್ರೇಲಿಯಾ ತಂಡ 399 ರನ್‌ಗಳ ಬೃಹತ್ ಮೊತ್ತ ಕಲೆಹಾಕಿದೆ. ಇದೇ ವೇಳೆ ಕೇವಲ 40 ಎಸೆತಗಳಲ್ಲಿ ಏಕದಿನ ಶತಕ ಸಿಡಿಸುವ ಮೂಲಕ ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್‌ಮನ್ ಗ್ಲೆನ್ ಮ್ಯಾಕ್ಸ್‌ವೆಲ್ ಇತಿಹಾಸ ಪುಸ್ತಕದಲ್ಲಿ ತಮ್ಮ ಹೆಸರು ಬರೆದರು. ಪವರ್-ಹಿಟ್ಟಿಂಗ್ ಬ್ಯಾಟಿಂಗ್ ಪ್ರದರ್ಶನದಲ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್ ನೆದರ್ಲ್ಯಾಂಡ್ಸ್ ಬೌಲಿಂಗ್ ದಾಳಿಯನ್ನು ಚೂರುಚೂರು ಮಾಡಿದರು.

*ಬುಧವಾರ, ಅಕ್ಟೋಬರ್ 25ರಂದು ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ 24ನೇ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡದ ವಿರುದ್ಧ ಆಸ್ಟ್ರೇಲಿಯಾ ತಂಡ 309 ರನ್‌ಗಳ ಬೃಹತ್ ಅಂತರದಿಂದ ಗೆದ್ದು ಬೀಗಿದೆ.

October 25, what happened in sports World: Todays Top sports news and headlines

* ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿಯೂ ಭಾರತದ ಕ್ರೀಡಾಪಟುಗಳ ಅದ್ಭುತ ಸಾಧನೆ ಮುಂದುವರಿದಿದೆ. ಚೀನಾದ ಹ್ಯಾಂಗ್‌ಜೂನಲ್ಲಿ ನಡೆಯುತ್ತಿರುವ ಈ ಕ್ರೀಡಾಕೂಟದ ಜಾವೆಲಿನ್ ಎಸೆತದಲ್ಲಿ ಭಾರತದ ಪರವಾಗಿ ಹ್ಯಾನಿ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಪುರುಷರ ಜಾವೆಲಿನ್ ಥ್ರೋ ಎಫ್ 37/38 ವಿಭಾಗದಲ್ಲಿ ಹ್ಯಾನಿ ಈ ಸಾಧನೆ ಮಾಡಿದ್ದಾರೆ.

* ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ ವೇಲೆ ಗಾಯಕ್ಕೆ ತುತ್ತಾಗಿದ್ದರು. ಅದಾದ ಬಳಿಕ ಅವರು ಮೈದಾನ ತೊರೆದಿದ್ದು ನಂತರ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೂ ಅಲಭ್ಯವಾಗಿದ್ದಾರೆ. ಇದೀಗ ಹಾರ್ದಿಕ್ ಪಾಂಡ್ಯ ಮುಂದಿನ ಎರಡು ಪಂದ್ಯಗಳಿಗೆ ಅಲಭ್ಯವಾಗುವುದು ಖಚಿತವಾಗಿದೆ. ಹೀಗಾಗಿ ಹಾರ್ದಿಕ್ ಸಂಪೂರ್ಣ ವಿಶ್ವಕಪ್ ಟೂರ್ನಿಯಿಣದಲೇ ಹೊರಬೀಳುವ ಆತಂಕಕ್ಕೆ ಎದುರಾಗಿದೆ.

* ಧಾರವಾಡ: ನಾಲ್ಕನೇ ಶ್ರೇಯಾಂಕಿತ ಆಟಗಾರ ರಾಮಕುಮಾರ ರಾಮನಾಥನ್ ಸಿಂಗಲ್ಸ್ ಪಂದ್ಯದಲ್ಲಿ ವಿಜಯಿಯಾಗುವುದ ಮೂಲಕ ಧಾರವಾಡ ಜಿಲ್ಲಾ ಲಾನ್ ಟೆನಿಸ್ ಆಯೋಜನೆಗೊಂಡಿದ್ದ ಐಟಿಎಫ್ ಪುರುಷರ ಟೆನಿಸ್ ಪಂದ್ಯಾವಳಿ 2023ಕ್ಕೆ ತೆರೆಬಿದ್ದಿದೆ. ಈ ಕ್ರೀಡಾಕೂಟದಲ್ಲಿ ರಾಮನಾಥನ್ ಅವರು ಮೂರನೇ ಶ್ರೇಯಾಂಕಿತ ಆಟಗಾರ ದಿಗ್ವಿಜಯ ಪ್ರತಾಪಸಿಂಗ್ ಅವರಿಗೆ ಸೋಲುಣಿಸಿದ್ದು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

* ದಕ್ಷಿಣ ಆಫ್ರಿಕಾದ ಸ್ಟಾರ್ ಬ್ಯಾಟರ್ ಡಿಕಾಕ್ ವಿಶ್ವಕಪ್ ಟೂರ್ನಿಯ ಆರಂಭಕ್ಕೂ ಮುನ್ನ ಏಕದಿನ ಮಾದರಿಗೆ ವಿದಾಯದ ನಿರ್ಧಾರವನ್ನು ಪ್ರಕಟಿಸಿದ್ದರು. ಈ ವಿಶ್ವಕಪ್ ಬಳಿಕ ತಾನು ಏಕದಿನ ಮಾದರಿಯಿಂದ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದರು. ಕಿವೀಸ್ ಮಾಜಿ ವೇಗದ ಬೌಲರ್ ಶೇನ್ ಬಾಂಡ್ ದಕ್ಷಿಣ ಆಫ್ರಿಕಾ ಬ್ಯಾಟರ್‌ನ ಈ ನಿರ್ಧಾರದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ತಮ್ಮ ಫಾರ್ಮ್‌ನ ಅತ್ಯುನ್ನತ ಮಟ್ಟದಲ್ಲಿರುವಾಗ ಈ ನಿರ್ಧಾರವನ್ನು ಡಿಕಾಕ್ ತೆಗೆದುಕೊಳ್ಳಬಾರದಿತ್ತು ಎಂದಿದ್ದಾರೆ ಡಿಕಾಕ್.

* ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಅತ್ಯಂತ ಕಳಫೆ ಪ್ರದರ್ಶನ ನೀಡುತ್ತಿರುವ ತಂಡಗಳ ಪೈಕಿ ಬಾಂಗ್ಲಾದೇಶ ಕೂಡ ಒಂದು. ದಕ್ಷಿಣ ಆಪ್ರಿಕಾ ವಿರುದ್ಧ ಮಂಗಳವಾರ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲಿಯೂ ಹೆಚ್ಚಿನ ಪ್ರತಿರೋಧ ನೀಡದೆ ಭಾರೀ ಅಂತರದಿಂದ ಸೋಲು ಅನುಭವಿಸಿತು. ಈ ಸೋಲಿನ ಬಳಿಕ ಟೀಮ್ ಇಂಡಿಯಾದ ಮಾಜಿ ಆಟಗಾರ ಹಾಗೂ ಕಾಮೆಂಟೇಟರ್ ಆಕಾಶ್ ಚೋಪ್ರ ಬಾಂಗ್ಲಾದೇಶದ ಪ್ರದರ್ಶನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

* ಭಾರತದ ರನ್ನರ್ ಅಂಕುರ್ ಧಾಮ ಅವರು ಏಷ್ಯನ್ ಪ್ಯಾರಾ ಗೇಮ್ಸ್ 2023ರಲ್ಲಿ ತಮ್ಮ ಎರಡನೇ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬುಧವಾರ, ಅಕ್ಟೋಬರ್ 25ರಂದು ನಡೆದ ಪುರುಷರ 1500 ಮೀಟರ್ ಟಿ11 ಫೈನಲ್‌ನಲ್ಲಿ ಮೊದಲ ಸ್ಥಾನ ಪಡೆದರು. ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಪುರುಷರ 1500 ಮೀಟರ್ ಟಿ11 ಫೈನಲ್‌ನಲ್ಲಿ 4:27.70 ಸೆಕೆಂಡ್‌ಗಳ ಓಟದೊಂದಿಗೆ ಭಾರತದ ಅಥ್ಲೀಟ್ ಅಂಕುರ್ ಧಾಮ ಇದೇ ಗೇಮ್ಸ್‌ನಲ್ಲಿ ಎರಡನೇ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.

* ವಿಶ್ವಕಪ್ ಟೂರ್ನಿಯ 25ನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದ್ದು ಬ್ಯಾಟಿಂಗ್‌ಗೆ ಸ್ವರ್ಗ ಎನಿಸಿಕೊಂಡಿರುವ ಪಿಚ್‌ನಲ್ಲಿ ಯಾವ ತಂಡ ಮೇಲುಗೈ ಸಾಧಿಸಲಿದೆ ಎನ್ನುವುದು ಕುತೂಹಲ ಮೂಡಿಸಿದೆ. ಇಂಗ್ಲೆಂಡ್ ಹಾಗೂ ಶ್ರೀಲಂಕಾ ತಂಡಗಳು ಈ ಬಾರಿಯ ವಿಶ್ವಕಪ್‌ನಲ್ಲಿ ಈವರೆಗೆ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದೆ. ಆಡಿರುವ ನಾಲ್ಕು ಪಂದ್ಯಗಳ ಪೈಕಿ ಎರಡು ತಂಡಗಳು ಕೂಡ ತಲಾ ಒಂದು ಗೆಲುವು ಸಾಧಿಸಿದ್ದರೆ ಮೂರು ಸೋಲು ಅನುಭವಿಸಿದೆ. ಹೀಗಾಗಿ ಅಂಕಪಟ್ಟಿಯಲ್ಲಿ ಶ್ರೀಲಂಕಾ 8ನೇ ಸ್ಥಾನದಲ್ಲಿ ಹಾಗೂ ಇಂಗ್ಲೆಂಡ್ 9ನೇ ಸ್ಥಾನದಲ್ಲಿದೆ.

Story first published: Wednesday, October 25, 2023, 20:56 [IST]
Other articles published on Oct 25, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+