* ವಾರ್ನರ್ ವಿಶ್ವಕಪ್ ಟೂರ್ನಿಯಲ್ಲಿ 6ನೇ ಶತಕವನ್ನು ಸಿಡಿಸಿ ಸಚಿನ್ ತೆಂಡೂಲ್ಕರ್ ಸಾಧನೆ ಸರಿಗಟ್ಟಿದ್ದಾರೆ. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾದ ಸ್ಪೋಟಕ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಪ್ರತಿಕ್ರಿಯೆ ನೀಡಿದ್ದು ವಿಶ್ವಕಪ್‌ನಲ್ಲಿ 6 ಶತಕ ಸಿಡಿಸಿದ ದಾಖಲೆ ಹೊಂದಿರುವ ಸಚಿನ್ ತೆಂಡೂಲ್ಕರ್ ಹಾಗೂ ಆಸ್ಟ್ರೇಲಿಯಾ ಪರ ವಿಶ್ವಕಪ್‌ನಲ್ಲಿ ಈ ಹಿಂದೆ ಅತಿ ಹೆಚ್ಚು ಶತಕ ಸಿಡಿಸಿದ ದಾಖಲೆ ಹೊಂದಿದ್ದ ರಿಕಿ ಪಾಂಟಿಂಗ್ ಬಗ್ಗೆ ಮಾತನಾಡಿದ್ದು ಅವರಿಬ್ಬರೂ ದಿಗ್ಗಜರು ಎಂದು ಪ್ರತಿಕ್ರಿಯಿಸಿದ್ದಾರೆ.
* ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಪ್ಯಾರಾ ಏಷ್ಯನ ಗೇಮ್ಸ್ ಕ್ರೀಡಾಕೂಟದಲ್ಲಿಯೂ ಭಾರತೀಯ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಕರ್ನಾಟಕದ ಮೂಡಿಗೆರೆಯ ಕ್ರೀಡಾಪಟು ರಕ್ಷಿತಾ ರಾಜು ಕೂಡ ಇದೀಗ ಈ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ದೇಶವೇ ಹೆಮ್ಮೆ ಪಡುವಂತಾ ಸಾಧನೆ ಮಾಡಿದ್ದಾರೆ.

* ಈ ಬಾರಿಯ ವಿಶ್ವಕಪ್ ಟೂರ್ನಿಯ ಮೊದಲಾರ್ಧ ಮುಕ್ತಾಯವಾಗಿದ್ದು ಅಂತಿಮಘಟ್ಟದತ್ತ ಹೆಜ್ಜೆಹಾಕಿತ್ತಿದೆ. ಈ ಹಂತದಲ್ಲಿ ಲೀಗ್ ಹಂತದಿಂದ ಸೆಮಿಫೈನಲ್‌ಗೆ ಪ್ರವೇಶಿಸುವ ಸ್ಪರ್ಧೆ ತೀವ್ರವಾಗಿತ್ತಿದ್ದು ಪೈಪೋಟಿ ಜೋರಾಗಿದೆ. ಈ ಸಂದರ್ಭದಲ್ಲಿ ಒಂದು ತಂಡದ ಪ್ರದರ್ಶನದ ಬಗ್ಗೆ ಮಾಜಿ ಕ್ರಿಕೆಟಿಗ ಎಸ್ ಶ್ರೀಶಾಂತ್ ಅಸಮಾಧಾನ ವ್ಯಕ್ತಪಡಿಸಿದ್ದು ಆ ತಂಡ ಈ ಬಾರಿಯ ವಿಶ್ವಕಪ್ ಟೂರ್ನಿಯನ್ನು ಗೆಲ್ಲಲು ಬಂದಂತೆ ಕಾಣಿಸುತ್ತಿಲ್ಲ ಎಂದಿದ್ದಾರೆ.
* ಆಜ್‌ತಕ್ ಜೊತೆಗೆ ಮಾತನಾಡಿದ ದಾನಿಶ್ ಕನೆರಿಯಾ ಪಾಕಿಸ್ತಾನ ಕ್ರಿಕೆಟ್ ತಂಡದ ಆಯ್ಕೆ ಮಾನದಂಡದ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಪಾಕ್ ತಂಡದ ಆಯ್ಕೆ ಸ್ನೇಹ ಹಾಗೂ ವೈಯಕ್ತಿಕ ಸಂಬಂಧದ ಆಧಾರದಲ್ಲಿ ನಡೆಯುತ್ತದೆ ಎಂದು ಹೇಳಿಕೆಯನ್ನು ನೀಡಿದ್ದಾರೆ ಪಾಕ್ ತಂಡದ ಮಾಜಿ ಕ್ರಿಕೆಟಿಗ. ಪಾಕಿಸ್ತಾನ ಶುಕ್ರವಾರ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಆರನೇ ಪಂದ್ಯವನ್ನು ಆಡುತ್ತಿದ್ದು ಈ ಪಂದ್ಯಕ್ಕೂ ಮುನ್ನ ಕನೆರಿಯಾ ಈ ಹೇಳಿಕೆ ನೀಡಿದ್ದಾರೆ.
* ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ವಕಪ್‌ನಲ್ಲಿ ಗಾಯಕ್ಕೆ ತುತ್ತಾಗಿದ್ದು ಮುಂಬರುವ ಎರಡು ಪಂದ್ಯಗಳಿಗೆ ಅಲಭ್ಯವಾಗುವುದು ಖಚಿತವಾಗಿದೆ. ತಂಡದ ಸಂಯೋಜನೆಯಲ್ಲಿ ಪ್ರಮುಖ ಪಾತ್ರವಾಹಿಸುವ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಆದಷ್ಟು ಶೀಘ್ರವಾಗಿ ತಂಡಕ್ಕೆ ಮರಳಲಿ ಎನ್ನುವುದು ಎಲ್ಲರ ಬಯಕೆ. ಆದರೆ ಈಗ ದೊರೆಯುತ್ತಿರುವ ಮಾಹಿತಿಯ ಪ್ರಕಾರ ಹಾರ್ದಿಕ್ ಪಾಂಡ್ಯ ಗ್ರೇಡ್ 1 ಲಿಗಮೆಂಟ್ ಟಿಯರ್‌ಗೆ ಒಳಗಾಗಿದ್ದಾರೆ. ಹೀಗಾಗಿ ಹಾರ್ದಿಕ್ ಕಮ್‌ಬ್ಯಾಕ್ ನಿರೀಕ್ಷೆಗಿಂತ ತಡವಾಗುತ್ತಿದೆ.
* ನವೆಂಬರ್ 5ರಂದು ವಿರಾಟ್ ಕೊಹ್ಲಿ ಅವರ ಜನ್ಮದಿನದ ಜೊತೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ತಮ್ಮ 50ನೇ ಏಕದಿನ ಶತಕವನ್ನು ಪೂರೈಸಲಿದ್ದಾರೆ ಎಂದು ಸುನಿಲ್ ಗವಾಸ್ಕರ್ ಭವಿಷ್ಯ ನುಡಿದಿದ್ದಾರೆ. "ಲಿಟಲ್ ಮಾಸ್ಟರ್' ವಿಶ್ವದಾಖಲೆಯನ್ನು ಸ್ಥಾಪಿಸಲು ಇದು ಪರಿಪೂರ್ಣ ಕ್ಷಣ ಎಂದು ಎತ್ತಿ ತೋರಿಸುತ್ತದೆ ಎಂದರು.
* ವಿಶ್ವಕಪ್ ಟೂರ್ನಿಯ 26ನೇ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದ್ದು ಟೂರ್ನಿಯಲ್ಲಿ ಅಬ್ಬರದ ಪ್ರದರ್ಶನ ನೀಡುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧ ಸೋಲಿನ ಸುಳಿಯಲ್ಲಿ ಸಿಲುಕಿರುವ ಪಾಕ್ ಪಡೆ ಯಾವ ರೀತಿಯ ಪ್ರದರ್ಶನ ನೀಡಲಿದೆ ಎನ್ನುವುದು ಕುತೂಹಲ ಮೂಡಿಸಿದೆ.