ಅಕ್ಟೋಬರ್ 27: ಐಪಿಎಲ್ ನಿವೃತ್ತಿ ಬಗ್ಗೆ ಧೋನಿ ಹೇಳಿದ್ದೇನು?; ಲಕ್ನೋದಲ್ಲಿ ಟೀಮ್ ಇಂಡಿಯಾ ಸಿದ್ಧತೆ: ಕ್ರೀಡಾ ಲೋಕದ ಇಂದಿನ ಸುದ್ದಿ
* ಇಂಗ್ಲೆಂಡ್ ತಂಡ ವಿಶ್ವಕಪ್‌ನಲ್ಲಿ ನೀಡುತ್ತಿರುವ ಪ್ರದರ್ಶನಕ್ಕೆ ತೀವ್ರ ಟೀಕೆಗಳು ವ್ಯಕ್ತವಾಗುತ್ತಿದೆ. ಅಲ್ಲದೆ ತಂಡದ ನಾಯಕ ಜೋಸ್ ಬಟ್ಲರ್ ಅವರ ವೈಯಕ್ತಿಕ ಪ್ರದರ್ಶನ ಹಾಗೂ ನಾಯಕತ್ವದ ಬಗ್ಗೆಯೂ ಸಾಕಷ್ಟು ಟೀಕೆಗಳು ಪ್ರಶ್ನೆಗಳು ಎದುರಾಗುತ್ತಿದೆ. ಈ ವಿಚಾರವಾಗಿ ಸ್ವತಃ ಜೋಸ್ ಬಟ್ಲರ್ ಪಂದ್ಯದ ಮುಕ್ತಾಯದ ಬಳಿಕ ಪ್ರತಿಕ್ರಿಯೆ ನೀಡಿದ್ದು ನಾಯಕನಾಗಿ ತನ್ನ ಮೇಲೆ ತನಗೆ ಸಾಕಷ್ಟು ಆತ್ಮವಿಶ್ವಾಸ ಹಾಗೂ ನಂಬಿಕೆಯಿದೆ ಎಂದಿರುವ ಜೋಸ್ ಬಟ್ಲರ್ ಅಂತಿಮವಾಗಿ ನಿರ್ಧಾರಗಳು ಮಂಡಳಿಯ ಕೈಯಲ್ಲಿದೆ ಎಂದಿದ್ದಾರೆ.
* ಭಾರತದಲ್ಲಿ ನಡೆಯುತ್ತಿರುವ ವಿಶ್ವಕಪ್ ನಲ್ಲಿ ಆಡಲು ನಗುತ್ತಾ ಬಂದಿದ್ದ ಪಾಕಿಸ್ತಾನ ತಂಡದ ಮುಖ ಬಾಡಿದೆ. ಉಳಿದ ಪಂದ್ಯಗಳ ಲೆಕ್ಕಾಚಾರ ಹಾಗೂ ಪಾಕ್ ತಂಡದ ಗೆಲುವು, ಬಾಬರ್ ಪಡೆಯ ಮುಂದಿನ ಪಯಣವನ್ನು ನಿರ್ಧರಿಸಲಿದೆ. ಇನ್ನು ಬುಧವಾರ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗ್ಲೇನ್ ಮ್ಯಾಕ್ಸ್‌ವೆಲ್ ಆಡಿದ ಆಟದಿಂದ ಪಾಕಿಸ್ತಾನ ತಂಡದ ಸೆಮಿಫೈನಲ್ ಆಸೆ ಕಮರಿದಂತೆ ಕಾಣುತ್ತಿದೆ. ಗ್ಲೆನ್ ಮ್ಯಾಕ್ಸ್‌ವೆಲ್ ನೆದರ್ಲೆಂಡ್ಸ್ ವಿರುದ್ಧ ವಿಧ್ವಂಸಕ ಬ್ಯಾಟಿಂಗ್ ನಡೆಸಿದರು. ಮ್ಯಾಕ್ಸ್‌ವೆಲ್ ಸುನಾಮಿಯ ಆಟಕ್ಕೆ ಇಸ್ಲಾಮಾಬಾದ್‌ನಲ್ಲಿ ಕುಳಿತಿದ್ದ ಪಾಕಿಸ್ತಾನಿ ಕ್ರಿಕೆಟ್ ಅಭಿಮಾನಿಗಳ ಸೆಮಿಫೈನಲ್ ಆಸೆ ಕೊಚ್ಚಿ ಹೋಗಿದೆ.

* ಎಂಎಸ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದರೂ ಐಪಿಎಲ್‌ನಲ್ಲಿ ಇನ್ನು ಕೂಡ ಸಕ್ರಿಯವಾಗಿದ್ದಾರೆ. ಅದರಲ್ಲೂ ಕಳೆದ ಐಪಿಎಲ್ ಟೂರ್ನಿಯಲ್ಲಿ ತಂಡವನ್ನು ನಾಲ್ಕನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿಸುವ ಮೂಲಕ ತನ್ನ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದರು. ಇದೀಗ ಧೋನಿ ಮುಂದಿನ ಐಪಿಎಲ್ ಆವೃತ್ತಿಯಲ್ಲಿ ಆಡಲಿದ್ದಾರಾ ಇಲ್ಲವಾ ಎನ್ನುವ ಪ್ರಶ್ನೆ ಹಾಗೆಯೇ ಉಳಿದುಕೊಂಡಿದ್ದು ಈ ವಿಚಾರವಾಗಿ ಧೋನಿ ಸುಳಿವೊಂದನ್ನು ಬಿಟ್ಟುಕೊಟ್ಟಿದ್ದಾರೆ.
* ಆಡಿರುವ ಐದು ಪಂದ್ಯಗಳ ಪೈಕಿ ಮೂರು ಸೋಲು ಅನುಭವಿಸಿರುವ ಪಾಕಿಸ್ತಾನ ತಂಡಕ್ಕೆ ಸೆಮಿಫೈನಲ್ ಹಾದಿ ದುರ್ಗಮವಾಗಿದ್ದು ಮುಂದಿನ ಪ್ರತಿ ಪಂದ್ಯದ ಗೆಲುವು ಕೂಡ ತಂಡಕ್ಕೆ ನಿರ್ಣಾಯಕವಾಗಲಿದೆ. ಈ ಸಂದರ್ಭದಲ್ಲಿ ಪಾಕ್ ತಂಡದ ಪ್ರದರ್ಶನದ ಬಗ್ಗೆ ತೀವ್ರ ಟೀಕೆಗಳು ಎದುರಾಗುತ್ತಿದ್ದು ನಾಯಕ ಬಾಬರ್ ಅಜಂ ನಾಯಕತ್ವ ತೊರೆಯಬೇಕು ಎನ್ನುವ ಕೂಗು ಜೋರಾಗಿದೆ. ಆದರೆ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಕಾಮೆಂಟೇಟರ್ ಆಕಾಶ್ ಚೋಪ್ರ ಈ ವಿಚಾರವಾಗಿ ಪಾಕಿಸ್ತಾನ ತಮಡದ ನಾಯಕ ಬಾಬರ್ ಅಜಂ ಬೆನ್ನಿಗೆ ನಿಂತಿದ್ದಾರೆ. ಪಾಕಿಸ್ತಾನ ತಂಡ ವಿಶ್ವಕಪ್ ಟೂರ್ನಿಯಲ್ಲಿ ಹೀನಾಯ ಪ್ರದರ್ಶನ ನೀಡಲು ಬಾಬರ್ ಅಜಂ ಮಾತ್ರವೇ ಕಾರಣವಲ್ಲ ಎಂದಿದ್ದು ಪಾಕ್ ಸೋಲಿಗೆ ಬೇರೆಯುದ್ದೇ ಕಾರಣಗಳಿವೆ ಎಂದಿದ್ದಾರೆ.
* ಸತತ ಸೋಲಿನ ಸುಳಿಗೆ ಸಿಲುಕಿ ಟೀವ್ರ ಟೀಕೆಗೆ ಗುರಿಯಾಗಿರುವ ಹಾಲಿ ಚಾಂಪಿಯನ್ ಇಂಗ್ಲೆಂಡ್ ಸ್ಥಿತಿ ಅತ್ಯಂತ ಹೀನಾಯವಾಗಿದೆ. ಆಡಿರುವ ಐದು ಪಂದ್ಯಗಳಲ್ಲಿನಾಲ್ಕು ಪಂದ್ಯಗಳನ್ನು ಸೋತಿರುವ ಇಂಗ್ಲೆಂಡ್ ತಂಡ ಬಹುತೇಕ ಟೂರ್ನಿಯಿಂದ ಹೊರಬೀಳುವ ಹಂತದಲ್ಲಿದೆ. ಇಂಥಾ ಸಂದರ್ಭದಲ್ಲಿ ಟೀಮ್ ಇಂಡಿಯಾ ಎದುರಾಳಿಯಾಗಿರುವುದು ಇಂಗ್ಲೆಂಡ್ ತಂಡಕ್ಕೆ ದೊಡ್ಡ ಸವಾಲಾಗಿರುವುದರಲ್ಲಿ ಅನುಮಾನವಿಲ್ಲ.
* ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ತಂಡ ಹೋರಾಟದ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದೆ. ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆರಂಭಿಕ ಹಿನ್ನಡೆಯ ಹೊರತಾಗಿಯೂ ಮಧ್ಯಮ ಹಾಗೂ ಕೆಳ ಮಧ್ಯಮ ಕ್ರಮಾಂಕದ ಆಟಗಾರರ ಉತ್ತಮ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಪಾಕಿಸ್ತಾನ ತಂಡ ಈ ಪಂದ್ಯದಲ್ಲಿ 270 ರನ್‌ಗಳನ್ನು ಗಳಿಸಲು ಶಕ್ತವಾಯಿತು. ಈ ಮೂಲಕ ದಕ್ಷಿಣ ಆಫ್ರಿಕಾಗೆ ಸವಾಲಿನ ಗುರಿ ನಿಗದಿಪಡಿಸಿದೆ.
* ವಿಶ್ವಕಪ್ ಟೂರ್ನಿಯ 27ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೊಸಿಯೇಶನ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದ್ದು ಪೈಪೋಟಿಯ ಪ್ರದರ್ಶನವನ್ನು ಕ್ರಿಕೆಟ್ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಆರಂಭಿಕ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದ ಬಳಿಕ ಆಸ್ಟ್ರೇಲಿಯಾ ಅದ್ಭುತವಾಗಿ ಕಮ್‌ಬ್ಯಾಕ್ ಮಾಡಿದ್ದು ಹ್ಯಾಟ್ರಿಕ್ ಗೆಲುವು ಸಾಧಿಸಿದ ಆತ್ಮವಿಶ್ವಾಸದಲ್ಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications